ಏ.18 ಅಥವಾ 19ರಂದು ಮಂಡ್ಯಕ್ಕೆ ಸ್ಯಾಂಡಲ್‌ವುಡ್‌ ಕ್ವೀನ್‌: ಸ್ಟಾರ್‌ ಚಂದ್ರು ಪರ ರಮ್ಯಾ ಪ್ರಚಾರ!

ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್‌ ಚಂದ್ರು) ಪರ ಚುನಾವಣಾ ಪ್ರಚಾರಕ್ಕೆ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. 

actress ramya likely to join congress campaign in mandya lok sabha constituency gvd

ಮಂಡ್ಯ (ಏ.17): ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್‌ ಚಂದ್ರು) ಪರ ಚುನಾವಣಾ ಪ್ರಚಾರಕ್ಕೆ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಏ.18 ಅಥವಾ 19ರಂದು ಮಂಡ್ಯ ನಗರದಲ್ಲಿ ರೋಡ್‌ ಶೋ ನಡೆಸಲಿರುವ ರಮ್ಯಾ ಕೈ ಅಭ್ಯರ್ಥಿ ಪರ ಮತಬೇಟೆಯಲ್ಲಿ ತೊಡಗುವರು. ನಂತರ ಬಳಿಕ ಪಾಂಡವಪುರ ವಿಧಾನಸಭಾ ಕ್ಷೇತ್ರದಲ್ಲೂ ರಮ್ಯಾ ಪ್ರಚಾರ ನಡೆಸಲಿದ್ದಾರೆ ಎಂದು ಶಾಸಕ ಪಿ.ರವಿಕುಮಾರ್‌ ಹೇಳಿದರು. 2014ರಲ್ಲಿ ನಡೆದ ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಮ್ಯಾ ಅವರು ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದರು. 2015ರಲ್ಲಿ ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ರಮ್ಯಾ ಅವರು ಜೆಡಿಎಸ್ ಅಭ್ಯರ್ಥಿ ಸಿ.ಎಸ್‌.ಪುಟ್ಟರಾಜು ವಿರುದ್ಧ ಪರಾಭವಗೊಂಡಿದ್ದರು.

ಮಂಡ್ಯದಲ್ಲಿ ಇಂದು ರಾಹುಲ್ ಮೇನಿಯಾ: ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಬುಧವಾರ (ಏ.೧೬) ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಿ ಧೂಳೆಬ್ಬಿಸಿ ಹೋಗಿದ್ದಾಯ್ತು. ಅದಕ್ಕೆ ಪರ್‍ಯಾಯವಾಗಿ ಕಾಂಗ್ರೆಸ್ಸಿಗರು ರಾಹುಲ್ ಅವರನ್ನು ಮಂಡ್ಯಕ್ಕೆ ಕರೆತಂದು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಮಂಡ್ಯ ಕ್ಷೇತ್ರದಿಂದ ಅಖಾಡಕ್ಕಿಳಿದಿರುವ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕಟ್ಟಿಹಾಕುವುದಕ್ಕೆ ಕಾಂಗ್ರೆಸ್‌ನವರು ಶತಪ್ರಯತ್ನ ನಡೆಸುತ್ತಿದ್ದಾರೆ.

ಬುಧವಾರ ಬೆಳಗ್ಗೆ ನವ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೊರಡಲಿರುವ ರಾಹುಲ್ ಗಾಂಧಿ ಮಧ್ಯಾಹ್ನ ೧ ಗಂಟೆಗೆ ಮೈಸೂರಿಗೆ ಬಂದಿಳಿಯುವರು. ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಹೊರಟು ೧.೩೦ರ ಸಮಯಕ್ಕೆ ನಗರದ ಪಿಇಟಿ ಕ್ರೀಡಾಂಗಣದಲ್ಲಿರುವ ಹೆಲಿಪಾಡ್‌ಗೆ ಬಂದಿಳಿಯುವರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ, ರಾಜ್ಯಸಭಾ ಸದಸ್ಯ ಕೆ.ಸಿ.ವೇಣುಗೋಪಾಲ್, ಸಚಿವರಾದ ಎನ್.ಚಲುವರಾಯಸ್ವಾಮಿ, ಕೃಷ್ಣಭೈರೇಗೌಡ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು ಪಾಲ್ಗೊಳ್ಳುವರು.

ಗ್ಯಾರಂಟಿ ಬಿಟ್ಟು ಸಿದ್ದರಾಮಯ್ಯ ಸರ್ಕಾರ ಏನ್ಮಾಡಿದೆ: ಮುಖಾಮುಖಿಯಲ್ಲಿ ವಿಜಯೇಂದ್ರ ಹೇಳಿದ್ದೇನು?

ಮಂಡ್ಯ ವಿಶ್ವ ವಿದ್ಯಾಲಯದ ಆವರಣದಲ್ಲಿ ಆಯೋಜಿಸಿರುವ ಲೋಕಸಭಾ ಚುನಾವಣೆಯ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ರಾಹುಲ್ ಗಾಂಧಿ ಅವರು ಅಭ್ಯರ್ಥಿ ವೆಂಕಟರಮಣೇಗೌಡರ ಪರ ಪ್ರಚಾರ ನಡೆಸಲಿದ್ದಾರೆ. ಇದಕ್ಕಾಗಿ ವಿವಿ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ೧ ಲಕ್ಷ ಜನರನ್ನು ಸೇರಿಸುವುದರೊಂದಿಗೆ ಶಕ್ತಿ ಪ್ರದರ್ಶಿಸುವುದಕ್ಕೆ ಕಾಂಗ್ರೆಸ್ಸಿಗರು ಭರದ ಸಿದ್ಧತೆ ನಡೆಸಿದ್ದಾರೆ. ಮಧ್ಯಾಹ್ನ ೩ ಗಂಟೆ ಸಮಯಕ್ಕೆ ಪ್ರಚಾರ ಮುಗಿಸಿ ಕೋಲಾರಕ್ಕೆ ತೆರಳಲಿದ್ದಾರೆ.

Latest Videos
Follow Us:
Download App:
  • android
  • ios