ಪಂಚ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನ: ಸಚಿವ ಸತೀಶ ಜಾರಕಿಹೊಳಿ
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಸಾರ್ವಜನಿಕ ಸೌಲಭ್ಯ ಒದಗಿಸಲು ಸರ್ಕಾರ ಒತ್ತು ನೀಡುತ್ತಿದೆ. ಶಾಲೆಗಳ ದುರಸ್ತಿ, ಮೊರಾರ್ಜಿ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಲೋಕಾರ್ಪಣೆ, ಕೆರೆ ತುಂಬಿಸುವ, ಬ್ಯಾರೇಜ್, ಏತ ನೀರಾವರಿ ಸೇರಿದಂತೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರಲಾಗಿದೆ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ(ಮಾ.13): ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ದೇಶಕ್ಕೆ ಮಾದರಿ ರಾಜ್ಯವಾಗಿದೆ. ರಾಜ್ಯಾದ್ಯಂತ ಗ್ಯಾರಂಟಿ ಯೋಜನೆಗಳ ಸಮಾವೇಶ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಚುನಾವಣೆಯ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ಬೆಳಗಾವಿ, ಹುಕ್ಕೇರಿ ತಾಲೂಕು ಆಡಳಿತ, ತಾಲೂಕು ಪಂಚಾಯತಿ ಮತ್ತು ಬೆಳಗಾವಿ ಹಾಗೂ ಹುಕ್ಕೇರಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಭೂತರಾಮನಟ್ಟಿಯ ಮುಕ್ತಿಮಠದಲ್ಲಿ ಮಂಗಳವಾರ ನಡೆದ ಹೋಬಳಿ ಮಟ್ಟದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು.
ರೈತರು ಉದ್ಯಮಿಗಳಾಗಿ ಬೆಳೆಯಬೇಕು: ಸಚಿವೆ ಶೋಭಾ ಕರಂದ್ಲಾಜೆ
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ ಯೋಜನೆಯಡಿ ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್, ಯುವನಿಧಿ ಯೋಜನೆಯಡಿ ಪದವಿಧರಿಗೆ ಪ್ರತಿ ತಿಂಗಳು ₹ 3 ಸಾವಿರ, ಡಿಪ್ಲೊಮಾ ಪದವಿಧರಿಗೆ ₹ 1500 ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ.
ಅನ್ನಭಾಗ್ಯ ಯೋಜನೆಯಡಿ ಪ್ರತಿ ತಿಂಗಳು 5 ಕೆ.ಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿ ಬದಲಿಗೆ ಡಿಬಿಟಿ ಮೂಲಕ ಹಣ ಜಮೆ, ಗೃಹ ಲಕ್ಷ್ಮೀ ಯೋಜನೆ ಮೂಲಕ ಪ್ರತಿ ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು ₹ 2 ಸಾವಿರ ಹಾಗೂ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ, ಈ ಎಲ್ಲ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಸಾರ್ವಜನಿಕ ಸೌಲಭ್ಯ ಒದಗಿಸಲು ಸರ್ಕಾರ ಒತ್ತು ನೀಡುತ್ತಿದೆ. ಶಾಲೆಗಳ ದುರಸ್ತಿ, ಮೊರಾರ್ಜಿ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಲೋಕಾರ್ಪಣೆ, ಕೆರೆ ತುಂಬಿಸುವ, ಬ್ಯಾರೇಜ್, ಏತ ನೀರಾವರಿ ಸೇರಿದಂತೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಯಮಕನಮರಡಿ ಮತಕ್ಷೇತ್ರದಲ್ಲಿ ಉತ್ತಮ ರಸ್ತೆಗಳನ್ನು ನಿರ್ಮಾಣ ಮಾಡಲಾಗಿದೆ. ಅದರಂತೆ ಜಿಲ್ಲೆಯಲ್ಲಿ 100 ಸರ್ಕಾರಿ ಶಾಲೆ ನೀಡಲಾಗಿದೆ ಎಂದು ಹೇಳಿದರು.
ಚುನಾವಣೆ ಬಂದಾಗ ಆಸ್ಪತ್ರೆಯಿಂದ ಬರ್ತಾರೆ: ಸಂಸದ ಅನಂತ್ ಬಗ್ಗೆ ಸತೀಶ್ ವ್ಯಂಗ್ಯ
ನಗರದಲ್ಲಿ ₹ 50 ಕೋಟಿ ವೆಚ್ಚದಲ್ಲಿ ಹೊಸ ಜಿಲ್ಲಾ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು. ರಸ್ತೆ, ನೀರಾವರಿ ಯೋಜನೆ ಸೇರಿದಂತೆ ಮುಂಬರುವ ದಿನಗಳಲ್ಲಿ ಇನ್ನಷ್ಟು ವಿವಿಧ ಅಭಿವೃದ್ದಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದರು.
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕ ಸಬಲೀಕರಣ ಹೊಂದಬೇಕು. ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ಸರ್ಕಾರದ ಯೋಜನೆಗಳ ಪ್ರಯೋಜನ ಪಡೆದುಕೊಂಡು ಪ್ರತಿಯೊಬ್ಬರೂ ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್, ಯುವ ನಾಯಕ ರಾಹುಲ್ ಜಾರಕಿಹೊಳಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಪಂ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ, ಡಿಸಿಪಿ ರೋಹನ್ ಜಗದೀಶ್, ಬೆಳಗಾವಿ ಉಪ ವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ಬೆಳಗಾವಿ ತಹಸೀಲ್ದಾರ್ ಸಿದ್ದರಾಯ ಭೋಸಗಿ, ಆರ್.ಸಿ.ಯು ಕುಲಪತಿ ಪ್ರೊ.ತ್ಯಾಗರಾಜ, ರಿಜಿಸ್ಟರ್ ರಾಜಶ್ರೀ ಜೈನಾಪುರ, ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ವಿವಿಧ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಉಪಸ್ಥಿತರಿದ್ದರು. ವಿವಿಧ ಗ್ರಾಮಗಳಿಂದ ಆಗಮಿಸಿದ ಸಾವಿರಾರು ಜನ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.