ದೆಹಲಿಗೆ ತೆರಳಿದ ಬಳಿಕ ಪ್ರಧಾನಿ ಮೋದಿ 2 ದಿನಗಳ ಬಿಜೆಪಿ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿದ್ದಾರೆ. ಇನ್ನು, ಸ್ನೇಹ ಮಿಲನ ಅಭಿಯಾನ ಸೇರಿ ಇತರೆ ನಿರ್ಣಾಯಕ ಕಾರ್ಯಸೂಚಿಯ ಬಗ್ಗೆಯೂ ಬಿಜೆಪಿ ಪ್ಲ್ಯಾನ್‌ ಮಾಡುತ್ತಿದೆ ಎಂದು ತಿಳಿದುಬಂದಿದೆ. 

ಗುಜರಾತ್‌ನಲ್ಲಿ (Gujarat) ಮತ (Voting) ಚಲಾಯಿಸಿದ ನಂತರ ಪ್ರಧಾನಿ ಮೋದಿ (PM Narendra Modi) ಕರ್ನಾಟಕ (Karnataka) ಸೇರಿ ಇತರೆ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ (Assembly Polls) ಗೆಲ್ಲಲು ರಣತಂತ್ರ ಆರಂಭಿಸಿದ್ದಾರೆ. 2023ರಲ್ಲಿ ಕರ್ನಾಟಕ ಸೇರಿ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದೆ. ಅಲ್ಲದೆ, 2024ರ ಲೋಕಸಭೆ ಚುನಾವಣೆಗೂ ಮುನ್ನ ನಡೆಯಲಿರುವ ಈ ರಾಜ್ಯಗಳ ಚುನಾವಣೆ ಬಿಜೆಪಿ ಪಾಲಿಗೆ ಹೆಚ್ಚು ಪ್ರಮುಖವಾಗಿದೆ. ಈ ಹಿನ್ನೆಲೆ ಕೇಂದ್ರದಲ್ಲಿ ಸತತ 3ನೇ ಬಾರಿಗೆ ಅಧಿಕಾರ ಹಿಡಿಯಲು ಕರ್ನಾಟಕ ಸೇರಿ ಹಲವು ರಾಜ್ಯಗಳ ಚುನಾವಣೆ ಬಿಜೆಪಿಗೆ ನಿರ್ಣಾಯಕ ಎನಿಸಿದೆ. 

ಹೀಗಾಗಿ ದೆಹಲಿಗೆ ತೆರಳಿದ ಬಳಿಕ ಪ್ರಧಾನಿ ಮೋದಿ 2 ದಿನಗಳ ಬಿಜೆಪಿ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿದ್ದಾರೆ. ಇನ್ನು, ಸ್ನೇಹ ಮಿಲನ ಅಭಿಯಾನ ಸೇರಿ ಇತರೆ ನಿರ್ಣಾಯಕ ಕಾರ್ಯಸೂಚಿಯ ಬಗ್ಗೆಯೂ ಬಿಜೆಪಿ ಪ್ಲ್ಯಾನ್‌ ಮಾಡುತ್ತಿದೆ ಎಂದೂ ತಿಳಿದುಬಂದಿದೆ. ಈ ಅಭಿಯಾನವು ದೇಶದ ಒಂದು ಭಾಗವನ್ನು ಇನ್ನೊಂದು ಭಾಗದೊಂದಿಗೆ ಸಾಂಸ್ಕೃತಿಕವಾಗಿ ಸಂಪರ್ಕಿಸಲು" ಉದ್ದೇಶಿಸಲಾಗಿದೆ ಎಂದು ಪ್ರಧಾನಿ ಮೋದಿ ಈ ಸಭೆಯಲ್ಲಿ ಭಾಗಿಯಾಗುವ ನಾಯಕರಿಗೆ ಹೇಳಿದ್ದರು. 

ಇದನ್ನು ಓದಿ: ಗುಜರಾತ್‌ ಬಳಿಕ ಕರುನಾಡಿನತ್ತ ಚಿತ್ತ: ಕರ್ನಾಟಕ ಗೆಲ್ಲಲು ಪ್ರಧಾನಿ ಮೋದಿಯಿಂದ ರಣತಂತ್ರ ಸಭೆ

ಇನ್ನು, ಈ ಸಭೆಯಲ್ಲಿ ಭಾಗಿಯಾಗಿದ್ದ ಪಕ್ಷದ ಹಿರಿಯ ಮುಖಂಡ ರಮಣ್‌ ಸಿಂಗ್ ಪದಧಿಕಾರಿಗಳ ಸಭೆ ಬಗ್ಗೆ ಮಾಹಿತಿ ನೀಡಿದ್ದಾರೆ. ಪಕ್ಷದ ಸಣ್ಣ ಮತ್ತು ದೊಡ್ಡ ಮಟ್ಟದ ನಾಯಕರು ಭಾಗಿಯಾಗಿದ್ದ ಈ ಸಭೆಯಲ್ಲಿ ಚರ್ಚಿಸಲು ದೀರ್ಘ ಪಟ್ಟಿಯನ್ನು ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಮಧ್ಯೆ, ಚುನಾವಣೆಯ ಹೊರತಾಗಿ, ಭಾರತವು ಪ್ರಸ್ತುತ ಅಧ್ಯಕ್ಷತೆ ವಹಿಸುತ್ತಿರುವ ಜಿ -20, ಆರ್ಥಿಕತೆ ಮತ್ತು ಬಹು ಸಾಂಸ್ಕೃತಿಕ ವಿಷಯಗಳ ಬಗ್ಗೆ ಚರ್ಚಿಸಲು ಸಹ ನಾಯಕರು ಯೋಜಿಸಿದ್ದಾರೆ.

 "ಮುಂಬರುವ ಚುನಾವಣೆಗಳು ಸೇರಿದಂತೆ ಈ ಸಭೆಯಲ್ಲಿ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲಾಗುವುದು" ಎಂದು ಪ್ರಧಾನಿ ಮೋದಿ 2 ದಿನಗಳ ಅಧಿವೇಶನ ಉದ್ಘಾಟಿಸಿದ ನಂತರ ರಮಣ್‌ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು. ಹಾಗೂ, ಬೂತ್‌ ಸಬಲೀಕರಣದ ಬಗ್ಗೆಯೂ ಚುನಾವಣೆಯ ಮುಖ್ಯಸ್ಥರ ಅಡಿಯಲ್ಲಿ ಈ ಸಭೆಯಲ್ಲಿ ಚರ್ಚಿಸುತ್ತದೆ ಎಂದೂ ರಮಣ್‌ ಸಿಂಗ್ ಹೇಳಿದರು. 

ಇದನ್ನೂ ಓದಿ: Gujarat Assembly Elections: ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ದಾಖಲೆಯ ಬಹುಮತ, ಮತ್ತೆ ಅಧಿಕಾರಕ್ಕೆ..!

 "ಜಿ 20 ವಿಷಯವು ಭಾರತೀಯರಿಗೆ ಹೆಮ್ಮೆಯ ವಿಷಯವಾಗಿದೆ. ಜಿ 20 ಸಭೆ ಎಲ್ಲಾ ಭಾರತೀಯರಿಗೆ ಸ್ಪೂರ್ತಿದಾಯಕವಾಗಿದೆ. 'ಏಕ್ ಭಾರತ್ ಶ್ರೇಷ್ಠ ಭಾರತ್' (ಒಂದು ಭಾರತ, ಅತ್ಯುತ್ತಮ ಭಾರತ) ಬಗ್ಗೆಯೂ ಈ ಸಭೆಯಲ್ಲಿ ಚರ್ಚಿಸಲಾಗಿದೆ" ಎಂದೂ ಅವರು ಹೇಳಿದರು. ಜಿ -20 ಬಗ್ಗೆ ಜಾಗೃತಿ ಮೂಡಿಸಲು ಬಿಜೆಪಿ ವ್ಯಾಪಕವಾದ ದೇಶಾದ್ಯಂತದ ಅಭಿಯಾನವನ್ನು ಯೋಜಿಸುತ್ತಿದೆ ಎಂದೂ ರಮರ್ನ್ ಸಿಂಗ್ ತಿಳಿಸಿದ್ದಾರೆ. ಗಡಿ ಗ್ರಾಮಗಳ ವಿಷಯದ ಬಗ್ಗೆಯೂ ಪ್ರಧಾನಿ ಮೋದಿ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ಸಭೆಯಲ್ಲಿ ಯಾರ್ಯಾರು ಭಾಗಿ..?

ಈ ಸಭೆಯಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಪಕ್ಷದ ಹಿರಿಯರು, ರಾಜ್ಯ ಘಟಕಗಳ ಅಧ್ಯಕ್ಷರು, ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಭಾಗಿಯಾಗಲಿದ್ದಾರೆ.ಈ ಸಭೆಯು ಕರ್ನಾಟಕ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ, ತ್ರಿಪುರಾ ವಿಧಾನಸಭಾ ಚುನಾವಣೆ ಮತ್ತು ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷದ ರಾಜಕೀಯ ಕಾರ್ಯಸೂಚಿ ಅನಾವರಣಗೊಳಿಸುವ ಜೊತೆಗೆ, ಪಕ್ಷದ ಸಿದ್ಧತೆಯನ್ನು ಪರಿಶೀಲಿಸಲಿದೆ.

ಇದನ್ನೂ ಓದಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೋತ್ತರ ಸಮೀಕ್ಷೆ, ಬಿಜೆಪಿಗೆ ಸೋಲು, ಆಪ್‌ಗೆ ಅಧಿಕಾರ!

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಮುಂದಿನ ಚುನಾವಣೆಯಲ್ಲಿ ಪಕ್ಷದ ಕಾರ್ಯತಂತ್ರದ ಬಗ್ಗೆ ಪ್ರಸ್ತಾಪಿಸಲಿದ್ದಾರೆ ಮತ್ತು ಚುನಾವಣೆ ಎದುರಿಸಲು ಪಕ್ಷ ನಡೆಸಿರುವ ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ ಎಂದು ಪಕ್ಷ ಹೇಳಿಕೆಯಲ್ಲಿ ತಿಳಿಸಿತ್ತು. ಈ ಸಭೆಯಲ್ಲಿ ಎಲ್ಲಾ ರಾಜ್ಯಗಳ ರಾಜ್ಯಾಧ್ಯಕ್ಷರು, ಸಂಘಟನಾ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗಿಯಾಗಲಿದ್ದು, ಕರ್ನಾಟಕದ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಂಘಟನಾ ಕಾರ್ಯದರ್ಶಿ ರಾಜೇಶ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದೂ ತಿಳಿದುಬಂದಿದೆ. 

ವಿವಿಧ ರಾಜ್ಯಗಳಲ್ಲಿ ಚುನಾವಣೆ ಕುರಿತು ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಯಲಿದ್ದು, ಮುಂಬರುವ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ, ಪಕ್ಷದ ಸಂಘಟನೆ ಕುರಿತು ನಳಿನ್‌ ಕುಮಾರ್‌ ಕಟೀಲ್‌ ಮಾಹಿತಿ ನೀಡಲಿದ್ದಾರೆ. ಒಟ್ಟಾರೆ, ಗುಜರಾತ್ ಚುನಾವಣೆ ಮುಗಿದ ಕೂಡಲೇ ಕರ್ನಾಟಕ ಚುನಾವಣೆ ಬಗ್ಗೆ ಬಿಜೆಪಿ ಗಮನ ಹರಿಸಲಿದೆ ಎಂದು ತಿಳಿದುಬಂದಿದೆ.