ಶೆಟ್ಟರ್‌ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಬಿಜೆಪಿ ಹೈ ಅಲರ್ಟ್, ಹುಬ್ಬಳ್ಳಿಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ!

ಜಗದೀಶ್ ಶೆಟ್ಟರ್‌ ಕಾಂಗ್ರೆಸ್ ಸೇರ್ಪಡೆ ಆಗುತ್ತಲೇ ಬಿಜೆಪಿ ಅಲರ್ಟ್ ಆಗಿದೆ. ಇದರ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ.  

after jagadish Shettar joins Congress BJP  national president JP Nadda came to Hubballi gow

ಹುಬ್ಬಳ್ಳಿ (ಏ.17): ಉತ್ತರ ಕರ್ನಾಟಕ ಭಾಗದ ಲಿಂಗಾಯತ ಪ್ರಭಾವಿ ನಾಯಕ ಜಗದೀಶ್ ಶೆಟ್ಟರ್‌ ಕಾಂಗ್ರೆಸ್ ಸೇರ್ಪಡೆ ಆಗುತ್ತಲೇ ಬಿಜೆಪಿ ಅಲರ್ಟ್ ಆಗಿದೆ. ಬಿಜೆಪಿಯ ಮೇಲೆ ಲಿಂಗಾಯತ ಸಮುದಾಯ ತೀವ್ರ ಮುನಿಸಿಕೊಂಡಿದೆ. ರಾಜ್ಯದಲ್ಲಿ ದೊಡ್ಡ ಮಟ್ಟದ  ರಾಜಕೀಯ ಬೆಳವಣಿಗಳು ನಡೆಯುತ್ತಿದ್ದು,  ಇದನ್ನೆಲ್ಲ ಶಮನ ಮಾಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ಕೇಂದ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮುನಿಸಿಕೊಂಡು ಕಾಂಗ್ರೆಸ್ ಸೇರ್ಪಡೆ ಆಗಿದ್ದರಿಂದ ಬಿಜೆಪಿಗೆ ತೀವ್ರ ಹಿನ್ನೆಡೆಯ ಆತಂಕ ಎದುರಾಗಿದೆ.  ಜಗದೀಶ್ ಶೆಟ್ಟರ್ ಪಕ್ಷ ತೊರೆದಿದ್ದರ ಎಫೆಕ್ಟ್ ಉತ್ತರ ಕರ್ನಾಟಕ ವ್ಯಾಪ್ತಿಸದಂತೆ ಬಿಜೆಪಿ ತೆರೆಮರೆಯಲ್ಲಿ ಯೋಜನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಏ.18 ರಂದು ಸಾಯಂಕಾಲ ಜೆ.ಪಿ.ನಡ್ಡಾ ಹುಬ್ಬಳ್ಳಿಗೆ ಬರಲಿದ್ದಾರೆ.

ಎರಡು ದಿನಗಳ ಕಾಲ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹುಬ್ಬಳ್ಳಿಯಲ್ಲಿಯೇ ಬೀಡು ಬಿಡಲಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ನಡೆಯುವ ಎರಡೂ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಶೆಟ್ಟರ್ ಸ್ಪರ್ಧೆ ಮಾಡುವ ಸೆಂಟ್ರಲ್ ಕ್ಷೇತ್ರದಲ್ಲಿಯೇ ನಡ್ಡಾ ಠಿಕಾಣಿ ಹೂಡಲಿದ್ದಾರೆ. ಈ ವೇಳೆ ಕಾರ್ಯಕರ್ತರ ಜೊತೆಗೆ ಸಂವಾದ ನಡೆಸಲಿದ್ದಾರೆ. ನಾಡಿದ್ದು ಮೂರು ಸಾವಿರ ಮಠ, ಸಿದ್ದಾರೂಡರ ಮಠ ಮಠಕ್ಕೆ ಭೇಟಿ ನೀಡಲಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ. ಸಿಎಂ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಶಿಗ್ಗಾಂವ್ ತೆರಳಿ‌ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ.

4 ದಶಕಗಳ ಕಾಲ ಬಿಜೆಪಿಯಲ್ಲಿದ್ದು ಶಾಸಕ ಸಚಿವ ಸಿಎಂ ಆಗಿದ್ದ ಜಗದೀಶ್‌ ಶೆಟ್ಟರ್‌ ಬಿಜೆಪಿಯೊಂದಿಗಿನ ತಮ್ಮ ಸಂಬಂಧಕ್ಕೆ ತಿಲಾಂಜಲಿ ನೀಡಿದ್ದು, ಕಾಂಗ್ರೆಸ್‌ ಸೇರಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜಗದೀಶ್ ಶೆಟ್ಟರ್ ಅವರನ್ನು ಪಕ್ಷದ ಕಚೇರಿಯಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ಖರ್ಗೆ, ಶೆಟ್ಟರ್ ಅವರು ನಮ್ಮ ಪಕ್ಷದ ಸಿದ್ದಾಂತ ಒಪ್ಪಿ ಯಾವುದೇ ಶರತ್ತುಗಳಿಲ್ಲದೇ ಪಕ್ಷಕ್ಕೆ ಬರುತ್ತಿದ್ದಾರೆ ಎಂದರು. ಶೇಟ್ಟರ್‌ ಸೇರ್ಪಡೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಶಕ್ತಿ ಬರಲಿದೆ ಎಂದರು. ಕಾಂಗ್ರೆಸ್ ಪಕ್ಷದ ಧ್ವಜ ನೀಡಿ ಶೆಟ್ಟರ್‌ ಅವರನ್ನು ಕಾಂಗ್ರೆಸ್ ನಾಯಕರು ಪಕ್ಷಕ್ಕೆ ಬರಮಾಡಿಕೊಂಡರು.

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೆ ಸಹೋದರ ಪ್ರದೀಪ್ ಶೆಟ್ಟರ್ ತೀವ್ರ ಬೇಸರ

ನಂತರ ಮಾತನಾಡಿದ ಜಗದೀಶ್‌ ಶೆಟ್ಟರ್‌,  ಬಿಜೆಪಿಯಲ್ಲಿ ನನಗೆ ಬಹಳ ಬೇಸರವಾಗಿದೆ. ಪಕ್ಷದಲ್ಲಿ ನನನ್ನು ಕಡೆಗಣಿಸಲಾಯಿತು. ಯಡಿಯೂರಪ್ಪ ಅವರ ಬಗ್ಗೆ ನಮಗೆ ಗೌರವವಿದೆ. ಅವರ ಜೊತೆ ಸೇರಿಕೊಂಡು ನಾವು ಪಕ್ಷ ಕಟ್ಟಿ ಬೆಳೆಸಿದ್ದೇವೆ. ಅವರನ್ನು ಚುನಾವಣಾ ರಾಜಕಾರಣದಿಂದ ಹೊರಗೆ ಕಳುಹಿಸಲಾಯಿತು. ವಯಸ್ಸಿನಲ್ಲಿ ನೋಡುವುದಾದರೆ ಅವರ ನಂತರದ ಪಕ್ಷದಲ್ಲಿ ಲಿಂಗಾಯಿತ ಹಿರಿಯ ನಾಯಕ ನಾನೇ ಇದೇ ಕಾರಣಕ್ಕೆ ಕೆಲವರು ಚಿತಾವಣೆ ಮಾಡಿ ನನ್ನನ್ನು ಕಡೆಗಣನೆ ಮಾಡಿದ್ದಾರೆ ಮುಂದೆ ಮುಖ್ಯಮಂತ್ರಿ ಸ್ಥಾನ  ಕೇಳಬಹುದು ಎಂಬ ಉದ್ದೇಶದಿಂದಲೇ ಹೀಗೆ ಮಾಡಿದ್ದಾರೆ ಎಂದು ಶೆಟ್ಟರ್ ಅಳಲು ತೊಡಿಕೊಂಡಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಸುಧಾಕರ್ ಟೆಂಪಲ್ ರನ್, ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೆ ಬೇಸರ

ಏಪ್ರಿಲ್‌ 13 ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ.  ಏಪ್ರಿಲ್‌ 20 ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಏಪ್ರಿಲ್‌ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್‌ 24 ಆಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

Latest Videos
Follow Us:
Download App:
  • android
  • ios