'ಬಿಜೆಪಿ ಸೇರಿದ ಕೆಲವರು ಬಾಯಿ ಬಡ್ಕೋತಿರೋದು ಯಾಕೆ?'
ಸಚಿವ ಸಂಪುಟ ವಿಸ್ತರಣೆ ನಂತರ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ/ ಬಿಎಸ್ ವೈ ಕುಟುಂಬ ರಾಜಕಾರಣ ಈಗ ಬಿಜೆಪಿ ನಾಯಕರಿಗೆ ಗೊತ್ತಾಗುತ್ತಿದೆ/ ಬೆದರಿಸಿ ಮಂತ್ರಿ ಪದವಿ ಪಡೆದುಕೊಂಡವ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಲಿ
ಬೆಂಗಳೂರು ( ಜ. 14) ಸಚಿವ ಸಂಪುಟ ವಿಸ್ತರಣೆ ನಂತರ ಬಿಜೆಪಿಯಲ್ಲೇ ಅಸಮಾಧಾನದ ಹೊಗೆ ಎದ್ದಿದೆ. ಇದರ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒಂದಿಷ್ಟು ವಿಚಾರಗಳನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
"
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ನಾಯಕರಿಗೆ ತಡವಾಗಿ ಜ್ಞಾನೋದಯವಾಗಿದೆ. ಯಡಿಯೂರಪ್ಪ ನಾಮಕಾವಸ್ತೆ ಮುಖ್ಯಮಂತ್ರಿ, ನಿಜವಾದ ಅಧಿಕಾರ ಚಲಾಯಿಸುತ್ತಿರುವುದು ಅವರ ಮಗ ಎಂದು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೆಲವರಿಗೆ ಈಗೀಗ ಸತ್ಯ ಗೊತ್ತಾಗ್ತಿದೆ ಎಂದು ವಿಜಯೇಂದ್ರ ಹೆಸರನ್ನು ತಂದಿದ್ದಾರೆ.
'ನಿಧಾನಕ್ಕೆ ಮಾತಾಡ್ತೀನಿ' ಮುಂದೆ ಸಾಗಿದ ಸೈನಿಕ!
ಸಿ.ಡಿ ತೋರಿಸಿ ಸಿಎಂ ಬೆದರಿಸಿ, ಕೆಲವರು ಮಂತ್ರಿ ಹುದ್ದೆ ಪಡೆದಿದ್ದಾರೆ ಎಂದು ಬಿಜೆಪಿ ಶಾಸಕರೇ ಆರೋಪಿಸುತ್ತಿದ್ದಾರೆ. ಬ್ಲ್ಯಾಕ್‌ಮೇಲ್ ಮಾಡಿದವರು ಯಾರೇ ಆಗಿರಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಧೈರ್ಯ ಮುಖ್ಯಮಂತ್ರಿಗಳಿಗಿದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.
ಯಡಿಯೂರಪ್ಪ ಅವರ ಕುರ್ಚಿ ಗಟ್ಟಿಯಾಗಿದ್ದರೆ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ಬಳಿ ಗೋಗರೆಯುವ, ಕೈಕಾಲು ಹಿಡಿಯುವ ಅಗತ್ಯವಿರುತ್ತಿರಲಿಲ್ಲ. ಕೆಲವರಿಗೆ ಮಂತ್ರಿ ಸ್ಥಾನ ಕೊಡಲು ಕಾನೂನಿನ ತೊಡಕಿದೆ ಅಂತ ಗೊತ್ತಿದ್ರೂ ಸುಳ್ಳು ವಾಗ್ದಾನ ನೀಡಿ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಹಾಗಾಗಿ ಬಿಜೆಪಿ ಸೇರಿದ ಕೆಲವರು ಬಾಯಿ ಬಡ್ಕೊತಿರೋದು ಎಂದು ಪರೋಕ್ಷವಾಗಿ ವಿಶ್ವನಾಥ್ ಗೆ ಟಾಂಗ್ ನೀಡಿದ್ದಾರೆ.