ಸಿಎಂ ಸ್ಥಾನ ಬಿಟ್ಟ ಮೇಲೆ ಬಿಎಸ್‌ವೈ ವರ್ಚಸ್ಸು ಹೆಚ್ಚಿದೆ: ಬಿ.ವೈ.ವಿಜಯೇಂದ್ರ

ಯಡಿಯೂರಪ್ಪ ಅವರ ರಾಜಕೀಯ ಶಕ್ತಿ, ವರ್ಚಸ್ಸು ಕುಗ್ಗಿಲ್ಲ. ಬದಲಾಗಿ ಅವರು ಸಿಎಂ ಸ್ಥಾನದಿಂದ ಕೆಳಗಿಳಿದ ಮೇಲೆ ಅವರ ವರ್ಚಸ್ಸು, ಶಕ್ತಿ ಇನ್ನೂ ಹೆಚ್ಚಿದೆ. ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ್ಣಿಸಿದರು.

After leaving the post of CM BS Yediyurappas influence has increased Says BY Vijayendra gvd

ಮೈಸೂರು (ಏ.23): ಯಡಿಯೂರಪ್ಪ ಅವರ ರಾಜಕೀಯ ಶಕ್ತಿ, ವರ್ಚಸ್ಸು ಕುಗ್ಗಿಲ್ಲ. ಬದಲಾಗಿ ಅವರು ಸಿಎಂ ಸ್ಥಾನದಿಂದ ಕೆಳಗಿಳಿದ ಮೇಲೆ ಅವರ ವರ್ಚಸ್ಸು, ಶಕ್ತಿ ಇನ್ನೂ ಹೆಚ್ಚಿದೆ. ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ್ಣಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಡಿಯೂರಪ್ಪ ಯಡಿಯೂರಪ್ಪನೆ, ಅವರೊಂದು ಮಹಾಶಕ್ತಿ. ಅವರು ತಾವು ರಾಜ್ಯಪಾಲರಾಗಬೇಕು, ತಮ್ಮ ಮಗ ಮುಖ್ಯಮಂತ್ರಿ ಆಗಬೇಕು ಎಂಬ ಕನಸನ್ನು ಕಂಡಿಲ್ಲ. 

ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂಬುದೇ ಅವರ ಗುರಿ, ಸಂಕಲ್ಪ, ಕನಸು. ಅದಕ್ಕಾಗಿ ಅವರು ಶ್ರಮಿಸುತ್ತಿದ್ದಾರೆ ಎಂದರು. ವರುಣ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ನಡೆಸುತ್ತೇನೆ. ಅವರೊಂದಿಗೆ ನನಗೆ ಯಾವುದೇ ವೈಮನಸ್ಸು ಇಲ್ಲ. ವರುಣದಲ್ಲಿ ನಾನು ಕಣಕ್ಕಿಳಿಯದಿರಲು ಯಡಿಯೂರಪ್ಪ-ಸಿದ್ದರಾಮಯ್ಯ ನಡುವೆ ಒಳ ಒಪ್ಪಂದವಾಗಿದೆ ಎಂಬ ಆರೋಪ ಸರಿಯಲ್ಲ. ಅದು ಪಕ್ಷದ ತೀರ್ಮಾನ. ನನ್ನನ್ನು ರಾಜ್ಯಕ್ಕೆ ಪರಿಚಯ ಮಾಡಿಕೊಟ್ಟವರು ವರುಣ ಕ್ಷೇತ್ರದ ಕಾರ್ಯಕರ್ತರು. ಅವರ ಪ್ರೀತಿ-ವಿಶ್ವಾಸಕ್ಕೆ ಬೆಲೆ ಕಟ್ಟಲಾಗದು. 

ಎಚ್‌ಡಿಕೆಗೆ ಅನಾರೋಗ್ಯ: ಮಣಿಪಾಲ್‌ ಆಸ್ಪತ್ರೆಗೆ ದಾಖಲು! ವೈದ್ಯರು ಹೇಳಿದ್ದೇನು?

ಮುಂದಿನ ದಿನಗಳಲ್ಲಿ ಅವರು ಹೆಮ್ಮೆ ಪಡುವಂತೆ ದುಡಿಯುತ್ತೇನೆ. ನಾನು ಶಿಕಾರಿಪುರದಲ್ಲಿಯೇ ನಿಲ್ಲಬೇಕು ಎಂಬುದು ಅಲ್ಲಿಯ ಕಾರ್ಯಕರ್ತರ ತೀರ್ಮಾನ. 30-40 ವರ್ಷದಿಂದ ಯಡಿಯೂರಪ್ಪ ಅವರಿಗೆ ಶಕ್ತಿ ನೀಡಿದ ತಾಲೂಕು. ಅವರ ಅಭಿಪ್ರಾಯಕ್ಕೆ ಗೌರವ ನೀಡಿ ನನಗೆ ಟಿಕೆಟ್‌ ನೀಡಿದ್ದಾರೆ. ಶಿಕಾರಿಪುರವಷ್ಟೇ ಅಲ್ಲದೇ ರಾಜ್ಯಾದ್ಯಂತ ಪ್ರಚಾರ ಕಾರ್ಯ ನಡೆಸಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟಿಸಿ ಬಲಪಡಿಸುವ ಗುರಿಯನ್ನೂ ವರಿಷ್ಠರು ನೀಡಿದ್ದಾರೆ ಎಂದು ಹೇಳಿದರು. ಬಿಜೆಪಿ, ಕಾರ್ಯಕರ್ತರೇ ಕಟ್ಟಿರುವ ಪಕ್ಷ. ಬೂತ್‌ ಮಟ್ಟದ ಕಾರ್ಯಕರ್ತರ ಅಭಿಪ್ರಾಯಗಳಿಗೂ ಮನ್ನಣೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು, ರಾಜ್ಯದ ಭವಿಷ್ಯದ ದೃಷ್ಟಿಯಿಂದ ಹೊಸಮುಖಗಳಿಗೆ ಅವಕಾಶ ನೀಡಿದ್ದಾರೆ. 

ಬಿಸಿಲು, ಚುನಾವಣೆ: ರಾಜ್ಯದಲ್ಲೀಗ ಮದ್ಯದ ಕೊರತೆ: 20%ರಷ್ಟು ಬೇಡಿಕೆ ಹೆಚ್ಚಳ

ಉತ್ತರ ಪ್ರದೇಶ, ಗುಜರಾತನಲ್ಲೂ ಈ ಪ್ರಯೋಗ ನಡೆದಿತ್ತು. ರಾಜ್ಯದಲ್ಲೂ ಅದೇ ಫಲಿತಾಂಶ ಪುನರಾವರ್ತನೆ ಆಗಲಿದೆ. ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ. ದೇಶದ ಬೆಳವಣಿಗೆಯಲ್ಲಿ ಕರ್ನಾಟಕ ತನ್ನದೆ ಆದ ಕೊಡುಗೆ ನೀಡುತ್ತಿದೆ. ಜಿಎಸ್‌ಟಿ ನೀಡಿಕೆಯಲ್ಲಿ ಇಡೀ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ಹಾಗಾಗಿ ಈ ಚುನಾವಣೆ ಮಹತ್ತರ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು. ಇನ್ನು ಕರ್ನಾಟಕದಲ್ಲಿ ಚುನಾವಣೆ ಹಿನ್ನೆಲೆ ಈಗಾಗಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದು, ಪರಿಶೀಲನೆ ಕೂಡ ಮುಗಿದಿದೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್‌ 24 ಆಗಿದೆ. ಮೇ 10ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ.

Latest Videos
Follow Us:
Download App:
  • android
  • ios