ಸೂರತ್, ಇಂದೋರ್ ಬಳಿಕ ಪುರಿಯಲ್ಲೂ ಕಾಂಗ್ರೆಸ್‌ಗೆ ಕೈ ಕೊಟ್ಟ ಅಭ್ಯರ್ಥಿ

ಗುಜರಾತ್‌ನ ಸೂರತ್ ಹಾಗೂ ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದ ಬಳಿಕ ಈಗ ಕಾಂಗ್ರೆಸ್‌ಗೆ ಮತ್ತೊಂದು ಕ್ಷೇತ್ರದಲ್ಲಿ ಅಭ್ಯರ್ಥಿಯಿಂದ ಮೋಸವಾಗಿದೆ. 

After Surat and Indore, Puri Lok sabha constituency Congress candidate also withdraw her nomination before Election akb

ಪುರಿ: ಗುಜರಾತ್‌ನ ಸೂರತ್ ಹಾಗೂ ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದ ಬಳಿಕ ಈಗ ಕಾಂಗ್ರೆಸ್‌ಗೆ ಮತ್ತೊಂದು ಕ್ಷೇತ್ರದಲ್ಲಿ ಅಭ್ಯರ್ಥಿಯಿಂದ ಮೋಸವಾಗಿದೆ. ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಚರಿತಾ ಮೊಹಂತಿ ಅವರು ಚುನಾವಣೆಗೆ ಕೆಲವೇ ದಿನಗಳಿರುವಾಗ ತಾನು ಚುನಾವಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ಕಾಂಗ್ರೆಸ್ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ಇದರಿಂದ ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಕೆಲ ಕ್ಷೇತ್ರಗಳಲ್ಲಿ ಯುದ್ಧಕ್ಕೂ ಮೊದಲು ಸೋಲೊಪ್ಪುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. 

ತನ್ನ ಬಳಿ ಹಣದ ಕೊರತೆ ಇದ್ದು ಪುರಿಯಲ್ಲಿ ಚುನಾವಣೆ ಗೆಲುವಿಗೆ ಹಣಕಾಸಿ ಕೊರತೆ ಆಗಿದೆ. ತನ್ನ ಬಳಿ ಅಷ್ಟೊಂದು ಹಣವಿಲ್ಲ, ಕೇವಲ ಹಣದ ಕೊರತೆಯೊಂದೇ ನಮ್ಮನ್ನು ಕಣದಿಂದ ಹಿಂದೆ ಸರಿಯುವಂತೆ ಮಾಡುತ್ತಿದೆ. ಪಕ್ಷದಿಂದ ಹಣಕಾಸಿನ ನೆರವು ಸಿಗದೇ ಈ ಕ್ಷೇತ್ರದಲ್ಲಿ ಪ್ರಚಾರ ಮಾಡಿ ಗೆಲುವು ಸಾಧಿಸುವುದು ಕಷ್ಟ ಸಾಧ್ಯ. ಹೀಗಾಗಿ ಪುರಿ ವಿಧಾನಸಭಾ ಕ್ಷೇತ್ರದಿಂದ ನನಗೆ ಕಾಂಗ್ರೆಸ್‌ನಿಂದ ನೀಡಿರುವ ಟಿಕೆಟ್ ಅನ್ನು ಹಿಂದಿರುಗಿಸುತ್ತಿದ್ದೇನೆ ಎಂದು ಸುಚರಿತಾ ಮೊಹಂತಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಗೂ ಮೊದಲೇ ಬಿಜೆಪಿ ಭರ್ಜರಿ ಗೆಲುವು, ಸೂರತ್ ಅಭ್ಯರ್ಥಿ ಅವಿರೋಧ ಆಯ್ಕೆ!

ಒಡಿಶಾ ಕಾಂಗ್ರೆಸ್ ಉಸ್ತುವಾರಿ ಅಜಯ್ ಕುಮಾರ್ ತನಗೆ ತನ್ನ ಸ್ವಂತ ಹಣದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ ಎಂದು ಪತ್ರಕರ್ತೆಯಾಗಿ ರಾಜಕಾರಣಕ್ಕೆ ಬಂದ ಕಾಂಗ್ರೆಸ್ ನಾಯಕಿ ಸುಚರಿತಾ ಮೊಹಂತಿ ದೂರಿದ್ದಾರೆ. ನಾನು 10 ವರ್ಷಗಳ ಹಿಂದೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದ ಪ್ರತಿ ತಿಂಗಳಾಂತ್ಯಕ್ಕೆ ಸಂಬಳ ಪಡೆಯುವ ವೃತ್ತಿಪರ ಪತ್ರಕರ್ತೆಯಾಗಿದ್ದೆ. ನಾನು ಪುರಿಯಲ್ಲಿ ನನ್ನ ಪ್ರಚಾರಕ್ಕೆ ನನ್ನಲ್ಲಿರುವ ಎಲ್ಲವನ್ನೂ ನೀಡಿದ್ದೇನೆ. ನಾನು ಪ್ರಗತಿಪರ ರಾಜಕೀಯಕ್ಕಾಗಿ ನನ್ನ ಅಭಿಯಾನವನ್ನು ಬೆಂಬಲಿಸಲು ಸಾರ್ವಜನಿಕ ದೇಣಿಗೆ ಅಭಿಯಾನವನ್ನು ಕೂಡ ಮಾಡಿದೆ. ಆದರೆ ಅದು ಇದುವರೆಗೆ ಯಶಸ್ವಿಯಾಗಲಿಲ್ಲ. ಯೋಜಿತ ಪ್ರಚಾರದ ವೆಚ್ಚವನ್ನು ಕನಿಷ್ಠಕ್ಕೆ ಕಡಿತಗೊಳಿಸಲು ಕೂಡ  ನಾನು ನನ್ನಿಂದಾದ ಪ್ರಯತ್ನ ಮಾಡಿದೆ ಎಂದು ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇದಕ್ಕೂ ಮೊದಲು ಸೂರತ್‌ನ ಕಾಂಗ್ರೆಸ್ ಅಭ್ಯರ್ಥಿ ನಿಲೇಶ್ ಕುಂಭಾನಿ ನಾಮಪತ್ರ ತಿರಸ್ಕೃತಗೊಂಡು ಅಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪರೋಕ್ಷ ಕಾರಣರಾಗಿದ್ದರು. ನಿಲೇಶ್ ಕುಂಭಾನಿ ಅವರ ನಾಮಪತ್ರಕ್ಕೆ ಸೂಚಕರಾಗಿದ್ದ ಮೂವರು ತಮ್ಮ ಸಹಿ ನಕಲಿ ಮಾಡಲಾಗಿದೆ ಎಂದು ಆರೋಪಿಸಿದ ಮೇಲೆ ಚುನಾವಣಾ ಅಧಿಕಾರಿಗಳು ನಿಲೇಶ್ ಕುಂಭಾನಿ ನಾಮಪತ್ರವನ್ನು ತಿರಸ್ಕರಿಸಿದ್ದರು. ಇದಾದ ನಂತರ ನಿಲೇಶ್ ಕುಂಭಾನಿ ಅವರು ಬಿಜೆಪಿ ಜೊತೆ ಕೈ ಜೋಡಿಸಿ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರೆ, ಇತ್ತ ಗುಜರಾತ್ ಬಿಜೆಪಿ ಮುಖ್ಯಸ್ಥ ಆರ್‌.ಸಿ ಪಾಟೀಲ್ ಮಾತನಾಡಿ, ಸೂರತ್ ಕ್ಷೇತ್ರವೂ ಮೊದಲ ಕಮಲದ ಹೂವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಅರ್ಪಿಸುತ್ತಿದೆ.  ಅವಿರೋಧವಾಗಿ ಆಯ್ಕೆಯಾದ ಸೂರತ್ ಅಭ್ಯರ್ಥಿ,  ಮುಕೇಶ್ ದಲಾಲ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದರು. 

ಇಂದೋರ್‌ನಲ್ಲೂ ಕಾಂಗ್ರೆಸ್‌ ರನ್‌ಔಟ್‌? ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಸಾಧ್ಯತೆ

ಸೂರತ್ ಕ್ಷೇತ್ರದಿಂದ ಒಟ್ಟು 9 ಅಭ್ಯರ್ಥಿಗಳು ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಈ ಬೈಕಿ ಬಿಜೆಪಿಯಿಂದ ಮುಕೇಶ್ ದಲಾಲ್ ಹಾಗೂ ಕಾಂಗ್ರೆಸ್‌ನಿಂದ ನಿಲೇಶ್ ಕುಂಭಾನಿ ಪ್ರಮುಖರಾಗಿದ್ದರು. ಇವರಿಬ್ಬರ ನಡುವೆ ನೇರಾನೇರ ಸ್ಪರ್ಧೆ ಎರ್ಪಟ್ಟಿತ್ತು. ಆದರೆ ನಿಲೇಶ್ ಕುಂಭಾನಿ ನಾಮಪತ್ರ ತರಿಸ್ಕೃತಗೊಂಡಿತ್ತು. ಸಹಿ ಮಿಸ್‌ಮ್ಯಾಚ್ ಸೇರಿದಂತೆ ಇತರ ಕೆಲ ಕಾರಣದಿಂದ ನಿಲೇಶ್ ಕುಂಭಾನಿ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿತ್ತು.

ನಿಲೇಶ್ ಕುಂಭಾನಿ ಜೊತೆಗೆ ಇತರ 8 ಅಭ್ಯರ್ಥಿಗಳು ನಾಪತ್ರ ಸಲ್ಲಿಸಿದ್ದರು. ಇವರೆಲ್ಲರ ನಾಮಪತ್ರವನ್ನು ಚುನಾವಣಾ ಆಯೋಗ ಪುರಸ್ಕರಿಸಿತ್ತು. ಆದರೆ ಎಂಟೂ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ. ಹೀಗಾಗಿ ಕಣದಲ್ಲಿ ಬಿಜೆಪಿಯ ಮುಕೇಶ್ ದಲಾಲ್ ಒಬ್ಬರೆ ಸ್ಪರ್ಧೆಯಲ್ಲಿದ್ದರು. ನಾಮಪತ್ರ ಪರಿಶೀಲನೆ ಬಳಿಕ ಮುಕೇಶ್ ದಲಾಲ್ ಒಬ್ಬರೇ ಕಣದಲ್ಲಿರುವ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದರು.

ಇದಕ್ಕೂ ಮೊದಲು ಕಾಂಗ್ರೆಸ್‌ನ ಇಂದೋರ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಂಬ್ ಅವರು ಕೂಡ ಲೋಕಸಭೆ ಚುನಾವಣೆಗೆ ಮುನ್ನ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದರು.

Latest Videos
Follow Us:
Download App:
  • android
  • ios