2028ರ ಚುನಾವಣೆ ನಂತರ ಸಿಎಂ ಸ್ಥಾನಕ್ಕೆ ಬೇಡಿಕೆ ಇಡುವೆ: ಸಚಿವ ಸತೀಶ್‌ ಜಾರಕಿಹೊಳಿ

ಮುಖ್ಯಮಂತ್ರಿ ಬದಲಾವಣೆ ಚರ್ಚೆ ವಿಚಾರ ಸದ್ಯ ಮುಗಿದ ಅಧ್ಯಾಯ. ನಮ್ಮ ಪಕ್ಷದ ಮುಖಂಡರು ದೆಹಲಿ, ಬೆಂಗಳೂರಿನಲ್ಲಿ ಸಾಕಷ್ಟು ವಿಚಾರಗಳನ್ನು ಹೇಳಿದ್ದಾರೆ. ಸದ್ಯ ಈ ವಿಷಯ ಮುಂದುವರಿಸುವ ಅವಶ್ಯಕತೆ ಇಲ್ಲ. ಯಾರು ಏನೇ ಹೇಳಿದರೂ ಮುಖ್ಯಮಂತ್ರಿ ಬದಲಾವಣೆ ವಿಚಾರ ಮುಗಿದಿದೆ ಎಂದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ 

After the 2028 Elections I will demand the CM Post Says Minister Satish Jarkiholi grg

ಬೆಳಗಾವಿ(ಜೂ.30):  2028ರ ಚುನಾವಣೆ ಬಳಿಕ ನಾನು ಮುಖ್ಯಮಂತ್ರಿ ಅಭ್ಯರ್ಥಿ. ಅವತ್ತಿನ ಪರಿಸ್ಥಿತಿ, ಸನ್ನಿವೇಶ ನೋಡಿಕೊಂಡು ನಾನು ಬೇಡಿಕೆ ಮಂಡಿಸುತ್ತೇನೆಯೇ ಹೊರತು ಈಗಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ದಲಿತ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ ಚಿಕ್ಕೋಡಿಯಲ್ಲಿ ಶನಿವಾರ ಪ್ರತಿಕ್ರಿಯಿಸಿದ ಅವರು, ಈ ವಿಚಾರ ನನ್ನ ಬಳಿ ಕೇಳಬೇಡಿ. ಸಿದ್ದರಾಮಯ್ಯ, ರಾಹುಲ್ ಗಾಂಧಿ ಅವರನ್ನೇ ಕೇಳಿ. ನಮ್ಮ ಕೆಲಸ, ಅಭಿವೃದ್ಧಿ ಬಗ್ಗೆ ಕೇಳಿ. ನಾನು ಅಷ್ಟಕ್ಕೇ ಮಾತ್ರ ಸೀಮಿತ ಎಂದು ಹೇಳಿದರು.

ಮತ್ತೆ ಮುನ್ನೆಲೆಗೆ ಬಂದ ಡಿಸಿಎಂ ಹುದ್ದೆ ಸೃಷ್ಟಿ: ಸತೀಶ್‌ ಜಾರಕಿಹೊಳಿ ಹೇಳಿದ್ದಿಷ್ಟು

ಮುಖ್ಯಮಂತ್ರಿ ಬದಲಾವಣೆ ಚರ್ಚೆ ವಿಚಾರ ಸದ್ಯ ಮುಗಿದ ಅಧ್ಯಾಯ. ನಮ್ಮ ಪಕ್ಷದ ಮುಖಂಡರು ದೆಹಲಿ, ಬೆಂಗಳೂರಿನಲ್ಲಿ ಸಾಕಷ್ಟು ವಿಚಾರಗಳನ್ನು ಹೇಳಿದ್ದಾರೆ. ಸದ್ಯ ಈ ವಿಷಯ ಮುಂದುವರಿಸುವ ಅವಶ್ಯಕತೆ ಇಲ್ಲ. ಯಾರು ಏನೇ ಹೇಳಿದರೂ ಮುಖ್ಯಮಂತ್ರಿ ಬದಲಾವಣೆ ವಿಚಾರ ಮುಗಿದಿದೆ ಎಂದರು.

ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೋ ಸಭೆ, ಸಮಾರಂಭಗಳಲ್ಲಿ, ವೈಯಕ್ತಿಕವಾಗಿ ಹೇಳಿದರೆ ಅದಕ್ಕೆ ಮಹತ್ವ ಇರುವುದಿಲ್ಲ. ಇದು ಪಕ್ಷದ ವೇದಿಕೆಯಲ್ಲೇ ಚರ್ಚೆ ಆಗಬೇಕು. ಉಪಮುಖ್ಯಮಂತ್ರಿ ಸ್ಥಾನ ಹೆಚ್ಚಿಸುವ ವಿಚಾರದಲ್ಲಿ ಚುನಾವಣೆಗೂ ಮೊದಲೇ ಕೂಗು ಇತ್ತು. ಉಪಮುಖ್ಯಮಂತ್ರಿ ಸ್ಥಾನ ಹೆಚ್ಚಿಸಬೇಕೇ, ಬೇಡವೇ ಎನ್ನುವ ವಿಚಾರ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು ಎಂದು ಇದೇ ವೇಳೆ ತಿಳಿಸಿದರು.

Latest Videos
Follow Us:
Download App:
  • android
  • ios