7ನೇ ವೇತನ ಆಯೋಗ ವರದಿ ಬಳಿಕ ನೌಕರರ ವೇತನ ಪರಿಷ್ಕರಣೆ ತೀರ್ಮಾನ: ಸಿದ್ದರಾಮಯ್ಯ
ಏಳನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಬೆಂಗಳೂರು (ಜ.17): ಏಳನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗವು ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ, ಏಳನೇ ವೇತನ ಆಯೋಗ ರಚನೆಯಾಗಿ 12 ತಿಂಗಳಾಗಿದೆ. ಮಾರ್ಚ್‌ವರೆಗೆ ಕಾಲಾವಧಿ ವಿಸ್ತರಣೆಯಾಗಿದ್ದು, ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಮೊದಲೇ ವೇತನ ಪರಿಷ್ಕರಣೆ ಮಾಡಿ ಘೋಷಣೆ ಮಾಡುವಂತೆ ಮನವಿ ಸಲ್ಲಿಸಿತು.
ಇದಕ್ಕೆ ಮುಖ್ಯಮಂತ್ರಿ ಅವರು ಪ್ರತಿಕ್ರಿಯೆ ನೀಡಿ, ಏಳನೇ ವೇತನ ಆಯೋಗದ ವರದಿ ಬಂದ ಬಳಿಕ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನಿಸಲಾಗುವುದು ಎಂಬ ಭರವಸೆ ನೀಡಿದರಲ್ಲದೆ, ಇತರೆ ಬೇಡಿಕೆಗಳ ಬಗ್ಗೆಯೂ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಸಂಘದ ಪ್ರತಿನಿಧಿಗಳು ತಿಳಿಸಿದ್ದಾರೆ. ವಿವಿಧ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಅನಂತಕುಮಾರ್ ದೇಶದ್ರೋಹಿ ಕೂಡಲೇ ಸಿಎಂ ಕ್ಷಮೆ ಯಾಚಿಸಲಿ: ಸಚಿವ ಆರ್.ಬಿ.ತಿಮ್ಮಾಪುರ
ಪ್ರಖರ್ ಆಟ ಕೊಂಡಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ: ಕೂಚ್ ಬೆಹಾರ್ ಟ್ರೋಫಿಯಲ್ಲಿ ಚೊಚ್ಚಲ ಬಾರಿ ಚಾಂಪಿಯನ್ ಆದ ಕರ್ನಾಟಕ ತಂಡ ಹಾಗೂ ಫೈನಲ್‌ನಲ್ಲಿ ಔಟಾಗದೆ 404 ರನ್ ಗಳಿಸಿದ ಪ್ರಖರ್ ಚತುರ್ವೇದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 79 ವರ್ಷಗಳಲ್ಲಿ ಮೊದಲ ಬಾರಿಗೆ ಕೂಚ್ ಬಿಹಾರ್ ಟ್ರೋಫಿ ಗೆದ್ದಿರುವ ಕರ್ನಾಟಕದ 19 ವರ್ಷದೊಳಗಿನವರ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ಈ ಗೆಲುವು ಸಂಕ್ರಾಂತಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ ಎಂದಿದ್ದಾರೆ.
‘ಆರಂಭಿಕ ಬ್ಯಾಟರ್ ಪ್ರಖರ್ ಚತುರ್ವೇದಿ ಅಜೇಯ 404 ರನ್ ಗಳಿಸಿ ದಾಖಲೆ ನಿರ್ಮಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಕರ್ನಾಟಕ ತಂಡವು 890 ರನ್‌ಗಳ ದಾಖಲೆಯ ಮೊತ್ತವನ್ನು ಪೇರಿಸುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ. ಯುವ ಆಟಗಾರರು ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲಿ ಎಂದು ಮನಃಪೂರ್ವಕವಾಗಿ ಹಾರೈಸುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.
ಅನಂತ್ ಏನು ಕೆಲಸ ಮಾಡಿದ್ದಾರೆ?: ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅವರ ಕೊಡುಗೆ ಏನು? ಅವರು ಏನಾದರೂ ಕ್ಷೇತ್ರ ಅಭಿವೃದ್ಧಿ ಮಾಡಿದ್ದಾರಾ? ಬಡವರ ಕಷ್ಟ ಕೇಳಿದ್ದಾರಾ? ಈಗ ಲೋಕಸಭಾ ಚುನಾವಣೆ ಬಂದಿರುವುದರಿಂದ ಏನೇನೋ ಮಾತನಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.
ಶಾಲಾ ಶೌಚಾಲಯ ಸ್ವಚ್ಛತೆಗೆ ಶೀಘ್ರ ಪರ್‍ಯಾಯ ವ್ಯವಸ್ಥೆ: ಸಿಎಂ ಜತೆ ಚರ್ಚಿಸಿ ಕ್ರಮವೆಂದ ಮಧು ಬಂಗಾರಪ್ಪ
ತಾಲೂಕಿನ ನರಸೀಪುರದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಈಗಲಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ‘ಸಂಸ್ಕೃತಿ’ ಎಂಬ ಪದವಿದೆ ಎಂಬುದು ಗೊತ್ತಾಯಿತಲ್ಲ ಎಂಬ ಸಂಸದರ ಟೀಕೆಗೆ ಪ್ರತಿಕ್ರಿಯಿಸಿ, ಅನಂತಕುಮಾರ ಹೆಗಡೆ ಅವರು ಇಷ್ಟು ದಿನ ಎಲ್ಲಿದ್ದರು? ಅವರ ಪತ್ತೆಯೇ ಇರಲಿಲ್ಲ. ನಾಪತ್ತೆಯಾಗಿಬಿಟ್ಟಿದ್ದರು. ಅವರನ್ನು ಬಹುಮತದಿಂದ ಆರಿಸಿ ಕಳುಹಿಸಿದ ಕ್ಷೇತ್ರದ ಜನರಿಗೆ ಏನಾದರೂ ಸಹಾಯ ಮಾಡಿದ್ದಾರಾ? ಕ್ಷೇತ್ರಕ್ಕೆ ಏನಾದರೂ ಅಭಿವೃದ್ಧಿ ಕೆಲಸ ಮಾಡಿದ್ದಾರಾ? ಕ್ಷೇತ್ರದ ಬಡವರ ಕಷ್ಟ ಕೇಳಿದ್ದಾರಾ? ಈಗ ಚುನಾವಣೆ ಸಮೀಪಿಸುತ್ತಿದ್ದರಿಂದ ರಾಜಕೀಯವಾಗಿ ಏನೇನೋ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.