ಲೋಕಸಭೆ ಬಳಿಕ ತಾ.ಪಂ, ಜಿ.ಪಂ. ಚುನಾವಣೆ: ಸಿಎಂ ಸಿದ್ದರಾಮಯ್ಯ

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಬಿಬಿಎಂಪಿಗೆ ಚುನಾವಣೆ ನಡೆಸಲು ನಾವು ತಯಾರಿದ್ದೇವೆ. ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಮುಗಿದ ಕೂಡಲೇ ಚುನಾವಣೆ ನಡೆಸುತ್ತೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಗತ್ಯವಾದ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಮೊದಲು ಕ್ಷೇತ್ರ ಪುನರ್ ವಿಂಗಡಣೆ ಆಗುತ್ತೆ. ನಂತರ ಮೀಸಲಾತಿ ಪ್ರಕಟಿಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ 

After the Lok Sabha, TP and ZP Elections in Karnataka CM Siddaramaiah grg

ಮೈಸೂರು(ಮೇ.25): ಲೋಕಸಭಾ ಚುನಾವಣಾ ಪ್ರಕ್ರಿಯೆ ಮುಗಿದ ಕೂಡಲೇ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಬಿಬಿಎಂಪಿ (ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ)ಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಬಿಬಿಎಂಪಿಗೆ ಚುನಾವಣೆ ನಡೆಸಲು ನಾವು ತಯಾರಿದ್ದೇವೆ. ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಮುಗಿದ ಕೂಡಲೇ ಚುನಾವಣೆ ನಡೆಸುತ್ತೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಗತ್ಯವಾದ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಮೊದಲು ಕ್ಷೇತ್ರ ಪುನರ್ ವಿಂಗಡಣೆ ಆಗುತ್ತೆ. ನಂತರ ಮೀಸಲಾತಿ ಪ್ರಕಟಿಸುತ್ತೇವೆ ಎಂದು ಹೇಳಿದರು.

ಗ್ಯಾರಂಟಿಗಳಿಂದ ರಾಜ್ಯ ಖಜಾನೆಗೆ ನಿಜಕ್ಕೂ ತೊಂದರೆ ಆಗಿಲ್ವಾ..? ಅಸಾಧ್ಯವನ್ನು ಸಾಧ್ಯವಾಗಿಸಿ ತೋರಿಸಿದ್ರಾ ಸಿದ್ದು, ಡಿಕೆಶಿ..?

ಎಲ್ಲರಿಗಿಂತ ಮೊದಲೇ ತಿಳಿಯುವುದು ಇಲ್ಲೇ

ಲೋಕಸಭೆ ಚುನಾವಣೆ ಬಳಿಕ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಗಳು ನಡೆಯುವ ಸಾಧ್ಯತೆಯಿದೆ ಎಂದು ಕನ್ನಡಪ್ರಭ ಮೇ 22ರಂದು ಪ್ರಕಟಿಸಿತ್ತು.

Latest Videos
Follow Us:
Download App:
  • android
  • ios