ನಾಳೆ, ನಾಡಿದ್ದು ಮೈಸೂರಲ್ಲಿ ಜೆಡಿಎಸ್ ಬೈಠಕ್ 126 ಟಿಕೆಟ್ ಆಕಾಂಕ್ಷಿಗಳಿಗೆ ಕಾರ್ಯಾಗಾರ: ಎಚ್‌ಡಿಕೆ ಬಿಡದಿ ಕಾರಾರಯಗಾರದ ಟಾಸ್‌್ಕ ಪೂರ್ಣಗೊಂಡ ಬಗ್ಗೆ ಪರಿಶೀಲನೆ
ಬೆಂಗಳೂರು (ಅ.18) : ಕೆಲ ತಿಂಗಳಗಳ ಹಿಂದೆ ಬಿಡದಿಯಲ್ಲಿ ನಡೆದ ಜನತಾ ಪರ್ವ ಕಾರ್ಯಾಗಾರದಲ್ಲಿ ನೀಡಿದ ಟಾಸ್‌್ಕಗಳನ್ನು ಪೂರ್ಣ ಮಾಡಲಾಗಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಪರಿಶೀಲನೆ ನಡೆಸುವ ಸಂಬಂಧ ಮೈಸೂರಿನಲ್ಲಿ ಇದೇ ತಿಂಗಳು 19 ಮತ್ತು 20ರಂದು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
Mysuru : 2023ಕ್ಕೆ ಜೆಡಿಎಸ್ ಅಧಿಕಾರಕ್ಕೆ ತನ್ನಿ ಎಂದು ಮುಖಂಡರ ಕರೆ
ಸೋಮವಾರ ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ 126 ಆಕಾಂಕ್ಷಿ ಅಭ್ಯರ್ಥಿಗಳಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಬಿಡದಿಯಲ್ಲಿ ನಡೆದ ಜನತಾ ಪರ್ವ ಕಾರ್ಯಾಗಾರದಲ್ಲಿ ನೀಡಿದ ಟಾಸ್‌್ಕಗಳನ್ನು ಪರಿಶೀಲನೆ ನಡೆಸಲಾಗುವುದು. ಚುನಾವಣೆಗೆ ಹೇಗೆ ಕೆಲಸ ಮಾಡಬೇಕು ಎಂಬುದರ ಕುರಿತು ಸೂಚನೆ ನೀಡಲಾಗುವುದು. ರಾಜ್ಯದಲ್ಲಿ ಬಿಜೆಪಿ-ಕಾಂಗ್ರೆಸ್ ಭರಾಟೆ ಏನೇ ಇದ್ದರೂ ಜೆಡಿಎಸ್ ಪರ ಜನರ ಭಾವನೆ ಇದೆ. ಈ ಬಾರಿ ಕುಮಾರಸ್ವಾಮಿಗೆ ಅವಕಾಶ ನೀಡಬೇಕು ಎಂಬುದು ಜನತೆಯ ಮನಸ್ಸಲ್ಲಿದೆ. ಹೀಗಾಗಿ ಕಾರ್ಯಾಗಾರ ಮಹತ್ವವಾಗಿದೆ ಎಂದು ಹೇಳಿದರು.
ಪಂಚರತ್ನ ರಥಯಾತ್ರೆ ಕಾರ್ಯಕ್ರಮವು ನ.1ರಿಂದ ಪ್ರಾರಂಭವಾಗಲಿದ್ದು, 2-3 ಹಂತದಲ್ಲಿ ರಥಯಾತ್ರೆ ಇರಲಿದೆ. ನ.1ರಿಂದ ಫೆಬ್ರವರಿ ತಿಂಗಳ ಅಂತ್ಯದವರೆಗೂ ನಿರಂತರವಾಗಿ ಯಾತ್ರೆ ನಡೆಯಲಿದೆ ಎಂದು ಹೇಳಿದ ಅವರು, ಯಾರೋ ಮಾಡುವ ಸಮೀಕ್ಷೆ ವರದಿ ನನಗೆ ಮುಖ್ಯವಲ್ಲ. ನನ್ನ ಗುರಿ 123 ಇದ್ದು, ಅದಕ್ಕೆ ನಾವು ಕೆಲಸ ಮಾಡುತ್ತೇವೆ. ನಾವು ಸಹ ಸಮೀಕ್ಷೆ ಮಾಡಿಸುತ್ತಿದ್ದೇವೆ. 30-40 ಕ್ಷೇತ್ರ ಸಮೀಕ್ಷೆಯಾಗಿದೆ. ಅಲ್ಲಿ ಕೆಲವು ಗೊಂದಲ ಸರಿ ಮಾಡುವ ಕೆಲಸ ಮಾಡುತ್ತಿದ್ದೇವೆ. ಸಮೀಕ್ಷೆ ವರದಿ ನಮ್ಮ ಪರ ಇದೆ ಎಂದು ಮೈಮರೆಯೋದು ಬೇಡ. ಸಮೀಕ್ಷೆ ನೆಗೆಟಿವ್ ಇರಲಿ ಅಥವಾ ಪಾಸಿಟಿವ್ ಇರಲಿ, ನಾವು ಚುನಾವಣೆ ಗೆಲ್ಲುವುದಕ್ಕೆ ಕೆಲಸ ಮಾಡುತ್ತೇವೆ ಎಂದರು.
ಕೆಲವು ಕ್ಷೇತ್ರಗಳಲ್ಲಿ ಜೆಡಿಎಸ್ ಟಿಕೆಟ್‌ಗಾಗಿ ಪೈಪೋಟಿ ಇದೆ. ಒಬ್ಬರಿಗೆ ಮಾತ್ರ ಟಿಕೆಟ್ ಕೊಡಲು ಸಾಧ್ಯ. ಹೀಗಾಗಿ ಆಕಾಂಕ್ಷಿಗಳನ್ನು ಕರೆದು ಮಾತನಾಡುತ್ತಿದ್ದೇವೆ. ಕ್ಷೇತ್ರಗಳಲ್ಲಿ ಇರುವ ಸಣ್ಣಪುಟ್ಟಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ. ಕ್ಷೇತ್ರವಾರು ಆಕಾಂಕ್ಷಿಗಳನ್ನು, ಮುಖಂಡರನ್ನು ಕರೆದು ಚರ್ಚೆ ಮಾಡುತ್ತಿದ್ದೇವೆ. ಎಲ್ಲ ಕಡೆ ಜನರ ಒಲವು ನಮ್ಮ ಪಕ್ಷದ ಕಡೆ ಇದೆ ಎಂದು ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ತಿಪ್ಪೇಸ್ವಾಮಿ ಇತರರು ಉಪಸ್ಥಿತರಿದ್ದರು.
ಜೆಡಿಎಸ್ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಯಾರಿಗೂ ಸಾಧ್ಯವಿಲ್ಲ: ಹೆಚ್.ಡಿ.ಕುಮಾರಸ್ವಾಮಿ
ಮನೆ ಮನೆ ಮೇಲೆ ಕನ್ನಡ ಬಾವುಟ
ಬರುವ ನ.1ರಂದು ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆ ಪಕ್ಷದ ವತಿಯಿಂದ ಮನೆ ಮನೆ ಮೇಲೆ ಕನ್ನಡ ಬಾವುಟ ಹಾರಿಸುವ ಸಂಕಲ್ಪ ಮಾಡಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದರು. ರಾಜ್ಯದ ಜನರು ಇದರಲ್ಲಿ ಭಾಗವಹಿಸಬೇಕು. ಬುಧವಾರ ಈ ಸಂಬಂಧ ಶಾಸಕರ ಸಭೆ ಕರೆಯಲಾಗಿದೆ. ಅದರಲ್ಲಿ ಕನ್ನಡ ಬಾವುಟ ಹಾರಿಸುವ ಕಾರ್ಯಕ್ರಮದ ರೂಪುರೇಷೆ ಸಿದ್ಧ ಮಾಡುತ್ತೇವೆ ಎಂದು ಹೇಳಿದರು.
