Karnataka Politics ಸಿದ್ದರಾಮಯ್ಯಗೆ ರಮೇಶ್ ಜಾರಕಿಹೊಳಿ ಸವಾಲ್!
* ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ
* ಸಿದ್ದರಾಮಯ್ಯಗೆ ರಮೇಶ್ ಜಾರಕಿಹೊಳಿ ಸವಾಲ್
* ಕರ್ನಾಟಕದಲ್ಲಿ ಮತ್ತೆ ಬೊಮ್ಮಾಯಿ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದ ಜಾರಕಿಹೊಳಿ
ಬೆಂಗಳೂರು, (ಜ.25): ಬಿಜೆಪಿಯಲ್ಲಿ(BJP) ನಿರೀಕ್ಷಿತ ಸ್ಥಾನ ಸಿಗದೆ ಅಸಮಾಧಾನಗೊಂಡ ನಾಲ್ವರು ಸಚಿವರು(Ministers)ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಈಗಾಗಲೇ ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal)ಸುಳಿವು ಕೊಟ್ಟಿದ್ದು, ಈಗಾಗಲೇ ಬಿಜೆಪಿ ಕೆಲವರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್9DK Shivakumar) ಮನೆಗೆ ಟಿಕೆಟ್ ಬುಕ್ ಮಾಡಿಕೊಂಡು ಬಂದಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
Karnataka Politics ಬಿಜೆಪಿಯಲ್ಲಿ ಸಂಚಲನ ಮೂಡಿಸಿದ ಯತ್ನಾಳ್ ಕೊಟ್ಟ ಸುಳಿವು
ಇನ್ನು ಈ ಬಗ್ಗೆ ರಮೇಶ್ ಜಾರಕಿಹೊಳಿ(Ramesh Jarkiholi) ಪ್ರತಿಕ್ರಿಯಿಸಿದ್ದು, ವಿಧಾನ ಸಭೆ ಒಳಗೆ ಏನು ಹೇಳಿದ್ರು ಒಮ್ಮೆ ಸಿದ್ದರಾಮಯ್ಯ ಜ್ಞಾಪಿಸಿಕೊಳ್ಳಲಿ. ಟೇಬಲ್ ಕುಟ್ಟಿ ಹೇಳಿದ್ರು. ಯಾವುದೇ ಕಾರಣಕ್ಕೂ ಈ ದ್ರೋಹಿಗಳನ್ನ ಸೇರ್ಪಡೆ ಮಾಡಿಕೊಳ್ಳಲ್ಲ ಎಂದಿದ್ರು. ಈಗ ಯಾಕೆ ಬೇಕು ಇವರಿಗೆ ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗೋಕೆ ಮತ್ತೆ ಕರೆಯುತ್ತಿದ್ದಾರಾ. ಯಾವುದೇ ಕಾರಣಕ್ಕೂ ಇದು ಸಾಧ್ಯವಿಲ್ಲ. ಮತ್ತೆ ಬೊಮ್ಮಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಬರುತ್ತೆ ಎಂದು ಸಿದ್ದರಾಮಯ್ಯಗೆ ರಮೇಶ್ ಜಾರಕಿಹೊಳಿ ಸವಾಲು ಹಾಕಿದರು.
ಇನ್ನು ಇದೇ ವೇಳೆ ರಮೇಶ್ ಜಾರಕಿಹೊಳಿ, ನನ್ನ ಜತೆ 36 ಜನ ಇದ್ರು, 17 ಜನ ನನ್ನ ಜತೆ ಬಂದ್ರು ತಾಂತ್ರಿಕ ಕಾರಣದಿಂದ ಅಲ್ಲಿಯೇ ಇದ್ದಾರೆ. ಆ ಸಂದರ್ಭದಲ್ಲಿ ನಮ್ಮ ಜತೆ ಬರಲಿಲ್ಲ. ಕಾಂಗ್ರೆಸ್‌ನ 16 ಶಾಸಕರು ನನ್ನ ಸಂಪರ್ಕದಲ್ಲಿರುವುದು ನಿಜ. ಬಿಜೆಪಿ ಹೈಕಮಾಂಡ್ ಒಪ್ಪಿದರೆ ಅವರನ್ನು ಪಕ್ಷಕ್ಕೆ ಕರೆತರುವೆ ಎಂದು ಸ್ಪಷ್ಟಪಡಿಸಿದರು.
ಜೆಡಿಎಸ್‌ನ ಮೂವರು ಶಾಸಕರು ಕೂಡ ಸಂಪರ್ಕದಲ್ಲಿದ್ದಾರೆ. ಕುಮಾರಸ್ವಾಮಿ ಒಳ್ಳೆಯವರು, ಜೆಡಿಎಸ್‌ನವರನ್ನು ಸೆಳೆಯಲ್ಲ. ಬೆಳಗಾವಿ ಜಿಲ್ಲೆಯ ಮೂವರು ಶಾಸಕರು ಸಂಪರ್ಕದಲ್ಲಿದ್ದಾರೆ. ಮೂವರ ಪೈಕಿ ಇಬ್ಬರು ಬಿಜೆಪಿಗೆ ಬಂದರೆ ಅಭ್ಯಂತರವಿಲ್ಲ. ಅವನೊಬ್ಬ ಬಿಜೆಪಿಗೆ ಬಂದರೆ ನಾನೇ ಬೇರೆ ಕಡೆ ಹೋಗುತ್ತೇನೆ ಎಂದರು.
ನಮ್ಮ ಜತೆ ಬಿಜೆಪಿಗೆ ಬಂದವರು ಯಾರೂ ಪಕ್ಷ ಬಿಡುವುದಿಲ್ಲ. ವಿಧಾನಸಭಾ ಚುನಾವಣೆ ಹತ್ತಿರ ಬಂದಾಗ ಎಲ್ಲಾ ಗೊತ್ತಾಗುತ್ತೆ. ನಾನು ಸಚಿವಸ್ಥಾನದ ಆಕಾಂಕ್ಷಿಯಲ್ಲ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ. ನಮ್ಮ ಹೈಕಮಾಂಡ್ ಅಮಿತ್ ಶಾ, ನಮ್ಮ ಜತೆ ಚೆನ್ನಾಗಿದ್ದಾರೆ. ನಾನು ಇಲ್ಲೇ ಇದ್ದು ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ, ಜೆಡಿಎಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದ ಸಿದ್ದು
ಬಿಜೆಪಿ, ಜೆಡಿಎಸ್ ಶಾಸಕರು ಕಾಂಗ್ರೆಸ್ಗೆ ಬರುತ್ತಾರೆ. ಬಿಜೆಪಿ, ಜೆಡಿಎಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಆದರೆ ನನ್ನ ಸಂಪರ್ಕದಲ್ಲಿರುವವರ ಬಗ್ಗೆ ಬಹಿರಂಗಪಡಿಸಲ್ಲ ಎಂದು ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ಬಾದಾಮಿಯಲ್ಲಿ ಮಾತನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ವಲಸಿಗರು ಕಾಂಗ್ರೆಸ್‌ಗೆ ವಾಪಸಾಗ್ತಾರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದು, ನಮ್ಮ ಪಕ್ಷದ ಸಿದ್ಧಾಂತದ ಮೇಲೆ ನಂಬಿಕೆ ಇರಬೇಕು. ಕಂಡಿಷನ್ ಹಾಕದೆ ಯಾರೇ ಬಂದರೂ ಸ್ವಾಗತವಿದೆ. ಪಕ್ಷದ ಸಿದ್ಧಾಂತ, ನಾಯಕತ್ವವನ್ನು ಒಪ್ಪಿಕೊಳ್ಳಬೇಕು ಎಂದು ತಿಳಿಸಿದರು.
ಶಾಸಕರ ಹೆಸರು ಬಹಿರಂಗಪಡಿಸುವಂತೆ ಸವಾಲು
ಕಾಂಗ್ರೆಸ್ ಸಂಪರ್ಕದಲ್ಲಿರುವ ಒಬ್ಬೇ ಒಬ್ಬ ಶಾಸಕರಾಗಲಿ ಅಥವಾ ಸಚಿವರ ಹೆಸರಾಗಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲವೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಹಿರಂಗಪಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಕತ್ತಲಲ್ಲಿ ಬೆಕ್ಕು ಹುಡುಕುವ ಕಳ್ಳಾಟ ಮಾಡುತ್ತಿದ್ದಾರೆ. ನಿಮ್ಮ ಪಕ್ಷದ ಸಹವಾಸವೇ ಬೇಡ ಎಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಯ ತತ್ವ ಸಿದ್ದಾಂತವನ್ನು ಒಪ್ಪಿ ಬಂದಿರುವವರು ಪುನಃ ಆ ಪಕ್ಷಕ್ಕೆ ಹೋಗಲು ಸಾಧ್ಯವೇ ಎಂದು ಪ್ರಶ್ನಿಸಿದರು.