ಇಂದು ಬಂದು ನಾಳೆ ವಾಪಸು ಹೋಗಬಾರದು: ಖರ್ಗೆ ಚಾಟಿ
ನಮ್ಮ ಪಕ್ಷವು ತತ್ವ ಸಿದ್ದಾಂತದ ಆಧಾರದ ಮೇಲೆ ನಿಂತಿದೆ. ತತ್ವಕ್ಕಾಗಿಯೇ ಇಂದಿರಾಗಾಂಧಿ, ರಾಜೀವ್ ಗಾಂಧಿಯವರು ತಮ್ಮ ಜೀವವನ್ನೆ ತ್ಯಾಗ ಮಾಡಿದ್ದಾರೆ. ಇಂತಹ ಪಕ್ಷಕ್ಕೆ ನಿಷ್ಠಾವಂತರಾಗಿರಬೇಕು. ಇವತ್ತು ಬಂದು ನಾಳೆ ಹೋಗುವಂತೆ ಇರಬಾರದು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು(ಜ.27): ಕಾಂಗ್ರೆಸ್ ಪಕ್ಷಕ್ಕೆ ಯಾರನ್ನಾದರೂ ಸೇರಿಸಿಕೊಳ್ಳುವ ಮೊದಲು ಅವರ ಹಿನ್ನೆಲೆ, ಗುಣ, ಸಿದ್ಧಾಂತ ಪರಿಶೀಲಿಸಿ. ಇವತ್ತು ಬಂದು ನಾಳೆ ಹೋಗುವಂತಿರಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಈ ಮೂಲಕ ಕಾಂಗ್ರೆಸ್ ತೊರೆದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರಳಿದ್ದರ ಬಗ್ಗೆ ಪರೋಕ್ಷ ವಾಗ್ದಾಳಿ ನಡೆಸಿದರು.
ಗಣರಾಜ್ಯೋತ್ಸವ ಭಾಷಣ ಮಾಡಿದ ಅವರು, ನಮ್ಮ ಪಕ್ಷವು ತತ್ವ ಸಿದ್ದಾಂತದ ಆಧಾರದ ಮೇಲೆ ನಿಂತಿದೆ. ತತ್ವಕ್ಕಾಗಿಯೇ ಇಂದಿರಾಗಾಂಧಿ, ರಾಜೀವ್ ಗಾಂಧಿಯವರು ತಮ್ಮ ಜೀವವನ್ನೆ ತ್ಯಾಗ ಮಾಡಿದ್ದಾರೆ. ಇಂತಹ ಪಕ್ಷಕ್ಕೆ ನಿಷ್ಠಾವಂತರಾಗಿರಬೇಕು. ಇವತ್ತು ಬಂದು ನಾಳೆ ಹೋಗುವಂತೆ ಇರಬಾರದು ಎಂದು ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿ ಖರ್ಗೆ ಕೈ ಬಲಪಡಿಸೋಣ: ಶಾಸಕ ಎಂ.ವೈ.ಪಾಟೀಲ್
ನಾವು ಒಂದು ವಸ್ತುವನ್ನು ಕೊಳ್ಳಬೇಕಾದರೆ ಅನೇಕ ಪರೀಕ್ಷೆಗಳನ್ನು ಮಾಡಿ ತೆಗೆದುಕೊಳ್ಳುತ್ತೇವೆ. ಹಾಗೆ ಪಕ್ಷಕ್ಕೆ ಯಾರನ್ನಾದರೂ ಸೇರಿಸಿಕೊಳ್ಳುವಾಗ ಅವರ ಹಿನ್ನೆಲೆ, ಗುಣ, ಸಿದ್ಧಾಂತವೇನು? ಅವರು ಯಾವ ತತ್ವಗಳನ್ನು ಪಾಲಿಸುತ್ತಿದ್ದಾರೆ. ಕಾಂಗ್ರೆಸ್ ತತ್ವ, ಸಿದ್ದಾಂತ ಪಾಲಿಸುತ್ತಾರಾ ಎಂಬುದನ್ನು ಪರಿಶೀಲಿಸು ವುದು ಬಹಳ ಮುಖ್ಯ ಎಂದರು.