ಈಗಾಗಲೇ ನರೇಂದ್ರ ಮೋದಿ ಅವರು ಹುಬ್ಬಳ್ಳಿಯಿಂದ ಲೋಕಸಮರ ಪ್ರಚಾರಕ್ಕೆ ಚಾಲನೆ ಕೊಟ್ಟಿದ್ದಾರೆ. ಇದೀಗ ಕಾಂಗ್ರೆಸ್ ಸರದಿ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲು ಮುಹೂರ್ತ ಫಿಕ್ಸ್ ಆಗಿದೆ.
ಬೆಂಗಳೂರು, [ಫೆ.22]: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಿಂದ ರಾಜ್ಯದಿಂದಲೇ ಲೋಕಸಬಾ ಚುನಾವಣೆ ಪ್ರಚಾರ ಆರಂಭಿಸಿದ್ದರು. ಇದೀಗ ರಾಹುಲ್ ಗಾಂಧಿ ಸಹ ರಾಜ್ಯದಿಂದಲೇ ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ.
ಮೋದಿ ಹುಬ್ಬಳ್ಳಿಯಿಂದ ಚಾಲನೆ ಕೊಟ್ಟಿದ್ರೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇದೇ ಮಾರ್ಚ್ 9 ರಂದು ಹಾವೇರಿಯಲ್ಲಿ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, 'ಬಿಜೆಪಿ ಶಕ್ತಿ ಕೇಂದ್ರ ಎಂಬ ಕಾರಣಕ್ಕೆ ಹಾವೇರಿ ಭಾಗದಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ಮೂಲಕ ರಾಹುಲ್ ಗಾಂಧಿ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ.
ಹಾವೇರಿಯಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ ನಂತರವೇ ಇತರ ರಾಜ್ಯಗಳಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಲಿದ್ದಾರೆ' ಎಂದು ಹೇಳಿದರು.
ಈಗಾಗಲೇ ರಾಜ್ಯ ನಾಯಕರಿಗೆ ಒಪ್ಪಿಗೆ ನೀಡಿರುವ ರಾಹುಲ್, ಸಮಾವೇಶಕ್ಕೆ ಬೇಕಾದ ಸಿದ್ಧತೆಯನ್ನು ಈಗಿನಿಂದಲೇ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಲಕ್ಷಾಂತರ ಜನ ಆ ಸಮಾವೇಶಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದರು.
ಅಲ್ಲದೇ, ರಾಯಚೂರಿನಲ್ಲಿ ನಾಳೆ ಸಮಾವೇಶ ನಡೆಸುತ್ತಿದ್ದೇವೆ. ನಂತರ ವಿಜಯಪುರದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ ಎಂದು ಹೇಳಿದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 22, 2019, 8:01 PM IST