Asianet Suvarna News Asianet Suvarna News

ಸತತ 2 ಬಾರಿ ಶಾಸಕರನ್ನಾಗಿ ಆಯ್ಕೆ ಮಾಡಿದಲ್ಲಿ ಸಕಲ ಸೌಲಭ್ಯ ಕಲ್ಪಿಸುವೆ: ಪ್ರದೀಪ್‌ ಈಶ್ವರ್‌

ಮುಂದಿನ ಐದು ವರ್ಷಗಳಲ್ಲಿ ಪ್ರತಿಗ್ರಾಮಕ್ಕೆ ಕನಿಷ್ಠ ಮೂವರು ವಿದ್ಯಾರ್ಥಿಗಳನ್ನು ಐಎಎಸ್‌, ಐಪಿಎಸ್‌, ಡಾಕ್ಟರ್‌, ಎಂಜಿನಿಯರ್‌, ಕೆಎಎಸ್‌ ಅಧಿಕಾರಿ, ಮತ್ತು ಉದ್ಯಮಿಗಳನ್ನಾಗಿ ತಯಾರು ಮಾಡುವೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದರು. 
 

All facilities will be provided if elected as MLA for 2 consecutive times Says Pradeep Eshwar gvd
Author
First Published Aug 30, 2023, 10:43 PM IST

ಚಿಕ್ಕಬಳ್ಳಾಪುರ (ಆ.30): ಮುಂದಿನ ಐದು ವರ್ಷಗಳಲ್ಲಿ ಪ್ರತಿಗ್ರಾಮಕ್ಕೆ ಕನಿಷ್ಠ ಮೂವರು ವಿದ್ಯಾರ್ಥಿಗಳನ್ನು ಐಎಎಸ್‌, ಐಪಿಎಸ್‌, ಡಾಕ್ಟರ್‌, ಎಂಜಿನಿಯರ್‌, ಕೆಎಎಸ್‌ ಅಧಿಕಾರಿ, ಮತ್ತು ಉದ್ಯಮಿಗಳನ್ನಾಗಿ ತಯಾರು ಮಾಡುವೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದರು. ತಾಲೂಕಿನ ಪರೇಸಂದ್ರ ಗ್ರಾಮದ ಮಂಜುನಾಥ ಸಮುದಾಯ ಭವನದಲ್ಲಿ ತಾಲೂಕು ಆಡಳಿತ, ತಾಲ್ಲೂಕು ಪಂಚಾಯತಿ ಮತ್ತು ಪೆರೇಸಂದ್ರಗ್ರಾಮ ಪಂಚಾಯತಿ ವತಿಯಿಂದ ಏರ್ಪಡಿಸಿದ್ದ ಜನಸ್ಪಂಧನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ ತರಬೇತಿ: ಸತತ ಎರಡು ಬಾರಿಯಾದರೂ ತಮ್ಮನ್ನು ಮತ್ತೆ ಶಾಸಕರನ್ನಾಗಿ ಆಯ್ಕೆ ಮಾಡಿದಲ್ಲಿ ಕ್ಷೇತ್ರದ ಜನತೆಗೆ ಬೇಕಾದ ಆರೋಗ್ಯ, ರಸ್ತೆ, ಕುಡಿಯುವ ನೀರು,ಚರಂಡಿ, ಸೂರಿಲ್ಲದವರಿಗೆ ಸೂರು ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ನೀಡುವುದಾಗಿ, ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ನೀಡಿ ಉತ್ತಮ ಭವಿಷ್ಯ ರೂಪಿಸುತ್ತೇನೆ. ಕೇವಲ ನನ್ನ ಕ್ಷೇತ್ರದ ವಿದ್ಯಾರ್ಥಿಗಳಿಗೆ ಮಾತ್ರ ಉಚಿತವಾಗಿ ಸಿಇಟಿ, ಮತ್ತು ನೀಟ್‌ ತರಬೇತಿ ಕೇಂದ್ರ ತೆರೆದು ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದ ಎಲ್ಲಾ ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು ಎಂದರು.

ವಿದ್ಯಾರ್ಥಿಗಳು ಹೇಗೆ ಓದಬೇಕು ಅಂದ್ರೆ ರಿಸಲ್ಟ್ ದಿನ ಇಡೀ ಕರ್ನಾಟಕವೇ ನಿಮ್ಮ ಬಗ್ಗೆ ಓದಬೇಕು: ಪ್ರದೀಪ್‌ ಈಶ್ವರ್‌

ಸರ್ಕಾರಿ ಮತ್ತು ಅನುಧಾನಿತ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿಯ ವಿದ್ಯಾರ್ಥಿಗಳಿಗೆ ಕಾರ್ಪೊರೇಟ್‌ ಶಾಲೆಗಳ ಮಾದರಿಯಲ್ಲಿ ಡಿಸೆಂಬರ್‌ನಿಂದ ತರಬೇತಿಯನ್ನು ಬೆಂಗಳೂರಿನಲ್ಲಿ ನೀಡಿ, ಪರೀಕ್ಷೆಯಲ್ಲಿ 625 ಅಂಕಗಳಿಗೆ 625ದನ್ನು ಪಡೆಯುವಂತೆ ತಯಾರಿ ನೀಡಲಾಗುವುದು ಇದಕ್ಕೆ ಸುಮಾರು 10 ಕೋಟಿ ರುಪಾಯಿಗಳು ವೆಚ್ಚವಾಗಲಿದ್ದು, ಆ ಹಣವನ್ನು ತಾವೇ ಭರಿಸುವುದಾಗಿ ತಿಳಿಸಿದರು.

ವಯಸ್ಸಾಗಿದೆ, ನನಗೆ ಎಂಪಿ ಟಿಕೆಟ್‌ ಕೊಡಲ್ಲ: ಸಂಸದ ಬಚ್ಚೇಗೌಡ

2 ವರ್ಷದಲ್ಲಿ ನಿವೇಶನ ಹಂಚಿಕೆ: ಕಾರ್ಯಕ್ರಮದಲ್ಲಿ 130ಕ್ಕೂ ಹೆಚ್ಚು ಜನರಿಗೆ ವೃದ್ಧಾಪ್ಯ, ಅಂಗವಿಕಲ, ವಿಧವಾ ವೇತನಗಳನ್ನು ನೀಡುತ್ತಿದ್ದು ಪೆರೇಸಂದ್ರ ಪಂಚಾಯತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಿಗೆ ರಸ್ತೆ, ಚರಂಡಿ,ಸಾರಿಗೆ ಮತ್ತು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುವುದು. ಮುಂದಿನ ದಿನಗಳಲ್ಲಿ ವಸತಿ ರಹಿತರಿಗೆ ನಿವೇಶನಗಳನ್ನು ಗುರ್ತಿಸಿ ನೀಡಲು ಎರಡು ವರ್ಷಗಳ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಈ ವೇಳೆ ತಹಸೀಲ್ದಾರ್‌ ಅನಿಲ್‌, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್‌, ತಾಲ್ಲೂಕು ಆರೋಗ್ಯಧಿಕಾರಿ ಡಾ.ಮಂಜುಳ,ಗುಡಿಬಂಡೆ ಸರ್ಕಲ್‌ ಇನ್ಸ್‌ಪೆಕ್ಟರ್‌ ನಯಾಜ್‌ ಬೇಗ್‌,ಡೆಪ್ಯೂಟಿ ತಹಸೀಲ್ದಾರ್‌ ತುಳಸಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಯರಾಮ್‌, ಮತ್ತಿತರರು ಇದ್ದರು.

Follow Us:
Download App:
  • android
  • ios