ಎಲ್ಲಾ ಶಾಸಕರಿಗೂ ಟಿಕೆಟ್ ಸಿಗಲ್ಲ, ಹಾಲಿ ಬಿಜೆಪಿ ಶಾಸಕರಿಗೆ ಶಾಕ್ ಕೊಟ್ಟ ಸಿಎಂ ಬೊಮ್ಮಾಯಿ!

70 ವಯಸ್ಸು ದಾಟಿದವರಿಗೆ ಟಿಕೆಟ್ ನೀಡಬೇಕೇ? ಬೇಡವೇ? ಎನ್ನುವ ವಿಚಾರ ನಮ್ಮ ಮುಂದೆ ಇಲ್ಲ ಎಂದು ಹೇಳಿದ ಸಿಎಂ ಬೊಮ್ಮಾಯಿ ಪ್ರತಿಯೊಂದು ಕ್ಷೇತ್ರದ ಕುರಿತು ಸಂಸದೀಯ ಮಂಡಳಿಯಲ್ಲಿ ಚರ್ಚೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

All sitting MLAs may not get party ticket says CM basavaraj Bommai gow

ವರದಿ: ಷಡಕ್ಷರಿ‌ ಕಂಪೂನವರ್ ಏಷ್ಯಾನೆಟ್ ಸುವರ್ಣ ನ್ಯೂಸ್

ವಿಜಯಪುರ (ಮಾ.9): ಒಂದು ಎಲೆಕ್ಷನ್ ಗಿಂತ ಇನ್ನೊಂದು ಎಲೆಕ್ಷನ್ ಭಿನ್ನವಾಗಿರುತ್ತೆ. ಎಲ್ರಿಗೂ ಹಂಡ್ರೆಡ್ ಪರ್ಸೆಂಟ್ ಟಿಕೆಟ್ ಕೊಟ್ಟ ಉದಾಹರಣೆಗಳಿಲ್ಲ. ಸರ್ವೇ, ಪರ್ಪಾರ್ಮೆನ್ಸ್ ಸೇರಿ ಎಲ್ಲಾ ಕ್ರೈಟೆರಿಯಾ ನೋಡಿಕೊಂಡು ಟಿಕೆಟ್ ನೀಡಲಾಗುತ್ತದೆ ಎನ್ನುವ ಮೂಲಕ ಕೆಲವರಿಗೆ ಟಿಕೆಟ್ ತಪ್ಪಲಿದೆ ಎನ್ನುವ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆಗೆ ಬೊಮ್ಮಾಯಿ ಸಹಮತ ವ್ಯಕ್ತಪಡಿಸಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದಲ್ಲಿ ನಡೆದ KBJNL 3ನೇ ಹಂತದ ಪರಿಹಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾಧ್ಯಮಗಳ ಜೊತೆಗೆ ಸಿಎಂ ಮಾತನಾಡಿದರು.

ಬಿಜೆಪಿಯಲ್ಲಿ ಹಾಲಿ ಶಾಸಕರಿಗೆ ತಪ್ಪಲಿದೇಯಾ ಟಿಕೆಟ್: 
ಬಿಜೆಪಿ ಹಾಲಿ ಶಾಸಕರಿಗೆ ಟಿಕೆಟ್ ತಪ್ಪಲಿದೆ ಎನ್ನುವ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಯಡಿಯೂರಪ್ಪನವರು ಸಂಸದೀಯ ಮಂಡಳಿ ಸದಸ್ಯರು, ಅವರಿಗೆ ಮಾಹಿತಿ ಇರಬಹುದು, 70 ವಯಸ್ಸು ದಾಟಿದವರಿಗೆ ಟಿಕೆಟ್ ನೀಡಬೇಕೇ? ಬೇಡವೇ? ಎನ್ನುವ ವಿಚಾರ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಪ್ರತಿಯೊಂದು ಕ್ಷೇತ್ರದ ಕುರಿತು ಸಂಸದೀಯ ಮಂಡಳಿಯಲ್ಲಿ ಚರ್ಚೆ ನಡೆಯುತ್ತಿದೆ ಎಂದರು. ಆದರೆ ನೂರಕ್ಕೆ ನೂರರಷ್ಟು ಎಲ್ಲರಿಗೂ ಟಿಕೆಟ್ ಸಿಗುತ್ತದೆ ಅಂತ ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಲೋಕಾಯುಕ್ತರು ಸರ್ವಸ್ವತಂತ್ರರು: ಸಿಎಂ
ವಿಜಯಪುರದ ಚಿಕ್ಕಗಲಗಲಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದ ವಿಚಾರದಲ್ಲಿ ತನಿಖೆ ನಡೆಸಲು ಲೋಕಾಯುಕ್ತರು ಸರ್ವಸ್ವತಂತ್ರರು, ನ್ಯಾಯಾಲಯ ತೀರ್ಮಾನಕ್ಕೆ ನಾವೆಲ್ಲಾ ತಲೆ ಬಾಗಬೇಕಾಗುತ್ತದೆ, ಇದರ ನಂತರ ಲೋಕಾಯುಕ್ತರು ಮುಂದಿನ ತನಿಖೆ ನಡೆಸಿದ್ದಾರೆ. ಇದರಲ್ಲಿ ಯಾವುದನ್ನೂ  ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಬೊಮ್ಮಾಯಿ:
ಕಾಂಗ್ರೆಸ್ ಸುಖಾಸುಮ್ಮನೆ ನಮ್ಮ ಮೇಲೆ ಆರೋಪ ಮಾಡುತ್ತಿದೆ. ಈ ತರ ಆಪಾದನೆ ಮಾಡೋ ಮೂಲಕ ಅವರು ಮಾಡಿರೋ ಭ್ರಷ್ಟಾಚಾರ ತೊಳೆದು ಹೋಗೋಲ್ಲ. ಅವರ ಕರ್ಮ, ಪಾಪ ತೊಳೆದು ಹೋಗೋಲ್ಲ ಅದು ಮತ್ತೆ ಬಂದೆ ಬರುತ್ತದೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಇದೆ ವೇಳೆ ಮಾಡಾಳ ವಿರೂಪಾಕ್ಷಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ಕುರಿತಂತೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಈ ಪ್ರಕರಣದ ವಿಚಾರದಲ್ಲಿ ತನಿಖೆ ನಡೆಸಲು ಲೋಕಾಯುಕ್ತರು ಸರ್ವಸ್ವತಂತ್ರರು. ನ್ಯಾಯಾಲಯ ತೀರ್ಮಾನಕ್ಕೆ ನಾವೆಲ್ಲಾ ತಲೆ ಬಾಗಬೇಕಾಗುತ್ತದೆ. ಇದರ ನಂತರ ಲೋಕಾಯುಕ್ತರು ಮುಂದಿನ ತನಿಖೆ ನಡೆಸಿದ್ದಾರೆ. ಇದರಲ್ಲಿ ಯಾವುದನ್ನೂ  ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಎಲ್ಲಾ ಕಡೆ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗೋದು ಗ್ಯಾರೆಂಟಿ:

ಎಸಿಬಿಗೆ ಕೊಟ್ಟಿದ್ದ 59 ಪ್ರಕರಣ ಲೋಕಾಯುಕ್ತಕ್ಕೆ:
59 ಪ್ರಕರಣಗಳನ್ನು ಎಸಿಬಿಗೆ ಕೊಟ್ಟದ್ದು, ಲೋಕಾಯುಕ್ತಕ್ಕೆ ಕೊಡುತ್ತೇವೆ. ಅಲ್ಲಿ ಕಾಂಗ್ರೆಸ್ ಬಣ್ಣ ಬಹಳಷ್ಟು ಬಯಲಾಗುತ್ತದೆ ಎಂದರು. ಇದೇ ವೇಳೆ ಮಾಡಾಳ ವಿರೂಪಾಕ್ಷಪ್ಪ ಮೆರವಣಿಗೆಗೆ ಇದು ಸರಿಯಲ್ಲ ಎಂಬ ಸ್ಪಷ್ಟ ಸೂಚನೆ ಕೊಟ್ಟಿದ್ದಾಗಿ ಹೇಳಿದರು.

ಕರ್ನಾಟಕದಲ್ಲಿ 140ಕ್ಕೂ ಹೆಚ್ಚು ಬಿಜೆಪಿ ಅಭ್ಯರ್ಥಿಗಳು ಜಯ: ಬಿ.ಎಸ್‌.ಯಡಿಯೂರಪ್ಪ

ಡಿಕೆಶಿಗೂ ಭ್ರಷ್ಟಾಚಾರಕ್ಕೂ ಬಿಡದ ನಂಟು:
ತಮ್ಮ ಮೇಲೆ ಡಿ.ಕೆ.ಶಿವಕುಮಾರ್. ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದ ಬೊಮ್ಮಾಯಿ, ಆ ಪುಣ್ಯಾತ್ಮನಿಗೂ ಭ್ರಷ್ಟಾಚಾರಕ್ಕೂ ಬಿಡದ ನಂಟಿದೆ. ಅವರ ಬಾಯಲ್ಲಿ ಈ ರೀತಿ ಬರುವುದು ಸಹಜ ಎಂದರು. ಕಾಂಗ್ರೆಸ್ ನವರಿಗೆ ದೇಶಭಕ್ತರು ಉಗ್ರರ ಹಾಗೆ ಕಾಣುತ್ತಾರೆ, ನಮ್ಮ ದೇಶದ್ರೋಹಿಗಳು ಉಗ್ರರ ಬಾಗೇ ಕಾಣುತ್ತಾರೆ ಎಂದು ಸಿಎಂ ವಾಗ್ದಾಳಿ ನಡೆಸಿದರು.

Latest Videos
Follow Us:
Download App:
  • android
  • ios