ಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ ಜತೆ ಮೈತ್ರಿ: ಜಿಟಿಡಿ
ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ. ಈ ಹಿಂದೆ ಹೊಟ್ಟೆ ಉರಿಯಿಂದ ಕುಮಾರಸ್ವಾಮಿಯನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರು. ಕಾಂಗ್ರೆಸ್ ಹೊಡೆತ ತಡೆಯಲು ಆಗುತ್ತಿಲ್ಲ. ಹೀಗಾಗಿ, ಲೋಕಸಭಾ ಚುನಾವಣೆಯನ್ನು ಬಿಜೆಪಿ ಜೊತೆ ಒಟ್ಟಾಗಿ ಎದುರಿಸೋಣ ಎನ್ನುವುದು ಜೆಡಿಎಸ್ ನಾಯಕರ ಅಭಿಪ್ರಾಯ; ಜಿ.ಟಿ.ದೇವೇಗೌಡ
ಮೈಸೂರು(ಸೆ.09): ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಸೋಲಿಸಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲಾಗುವುದು ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ, ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.
ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ. ಈ ಹಿಂದೆ ಹೊಟ್ಟೆ ಉರಿಯಿಂದ ಕುಮಾರಸ್ವಾಮಿಯನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರು. ಕಾಂಗ್ರೆಸ್ ಹೊಡೆತ ತಡೆಯಲು ಆಗುತ್ತಿಲ್ಲ. ಹೀಗಾಗಿ, ಲೋಕಸಭಾ ಚುನಾವಣೆಯನ್ನು ಬಿಜೆಪಿ ಜೊತೆ ಒಟ್ಟಾಗಿ ಎದುರಿಸೋಣ ಎನ್ನುವುದು ಜೆಡಿಎಸ್ ನಾಯಕರ ಅಭಿಪ್ರಾಯ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಬೇಕು. ಈ ಕಾರಣಕ್ಕೆ ಬಿಜೆಪಿ ಜೊತೆ ಮೈತ್ರಿಗೆ ಎಲ್ಲರ ಒಲವು ಇದೆ. ಸೆ. 6ರಂದು ದೇವೇಗೌಡರ ನೇತೃತ್ವದಲ್ಲಿ ನಡೆದ ಜೆಡಿಎಸ್ ನಾಯಕರ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ. ಕುಮಾರಸ್ವಾಮಿ ಅವರಿಗೆ ಬಿಜೆಪಿ ಜೊತೆ ಯಾವುದೇ ವಿರೋಧ ಇಲ್ಲ. ನಾನು ಕಾರ್ಯಕರ್ತರು, ಮುಖಂಡರ ಅಭಿಪ್ರಾಯದ ಪರ ಇರುತ್ತೇನೆ. ಹಿಂದೆ ಬಿಜೆಪಿ ಜೊತೆ ಹೋಗಿದ್ದಕ್ಕೆ ಜನ ನನ್ನನ್ನೇ ಸೋಲಿಸಿದ್ದರು. ಹುಣಸೂರಿನಲ್ಲಿ ನನ್ನನ್ನು ಸೋಲಿಸಿದ್ದರು. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ಈಗ ಯಾರೂ ವಿರೋಧ ಮಾಡುತ್ತಿಲ್ಲ. ಕಾಂಗ್ರೆಸ್ ಪಕ್ಷದ ವಿರುದ್ಧ ಜನ ಧಂಗೆ ಎದ್ದಿದ್ದಾರೆ ಎಂದು ಹೇಳಿದರು.
ರಾಜ್ಯ ಸರ್ಕಾರಕ್ಕೆ ದೇವಾಲಯ ಅಭಿವೃದ್ಧಿಗಿಂತ ಮಹಿಷ ದಸರಾವೇ ಮುಖ್ಯ: ಸಂಸದ ಪ್ರತಾಪ ಸಿಂಹ ಟೀಕೆ
ಸೆ.10ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಜೆಡಿಎಸ್ ಸಮಾವೇಶದ ಮೂಲಕ ಪಕ್ಷದ ಶಕ್ತಿ ಪ್ರದರ್ಶನ ಮಾಡಲಾಗುವುದು ಎಂದು ತಿಳಿಸಿದರು.