ಕೇವಲ 14 ಸೈಟ್‌ಗಳಿಗಾಗಿ ನಾನು ತಪ್ಪು ಮಾಡ್ತೀನಾ?: ಸಿಎಂ ಸಿದ್ದರಾಮಯ್ಯ
ನಲವತ್ತು ವರ್ಷಗಳಿಂದ ನಾನು, ಮಂತ್ರಿಯಾಗಿದ್ದೀನಿ ಮುಖ್ಯಮಂತ್ರಿಯಾಗಿದ್ದೀನಿ. ಸಣ್ಣ ಕಪ್ಪು ಚುಕ್ಕೆ ಕೂಡ ನನ್ನ ಮೇಲಿಲ್ಲ, ಕೇವಲ 14 ಸೈಟ್ ಗಳಿಗಾಗಿ ನಾನು ತಪ್ಪು ಮಾಡುತ್ತೀನಾ?.
ಹಾವೇರಿ (ಶಿಗ್ಗಾಂವಿ): ನಲವತ್ತು ವರ್ಷಗಳಿಂದ ನಾನು, ಮಂತ್ರಿಯಾಗಿದ್ದೀನಿ ಮುಖ್ಯಮಂತ್ರಿಯಾಗಿದ್ದೀನಿ. ಸಣ್ಣ ಕಪ್ಪು ಚುಕ್ಕೆ ಕೂಡ ನನ್ನ ಮೇಲಿಲ್ಲ, ಕೇವಲ 14 ಸೈಟ್ ಗಳಿಗಾಗಿ ನಾನು ತಪ್ಪು ಮಾಡುತ್ತೀನಾ?. ಬಿಜೆಪಿ ಮತ್ತು ದೇವೇಗೌಡರ ಷಡ್ಯಂತ್ರಗಳಿಗೆ ನಾನು ಜಗ್ಗುವುದಿಲ್ಲ. ಎಲ್ಲಿಯವರೆಗೆ ರಾಜ್ಯದ ಜನರ ಆಶೀರ್ವಾದ ಇರುತ್ತದೆಯೋ ಅಲ್ಲಿಯವರೆಗೂ ಬಿಜೆಪಿ ಕುತಂತ್ರಗಳಿಗೆ ನಾನು ಬಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಚಂದಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮಂಗಳವಾರ ಪ್ರಚಾರ ಕೈಗೊಂಡು ಅವರು ಮಾತನಾಡಿದರು. ದುಡ್ಡು ಮಾಡಬೇಕು ಎಂದಿದ್ದರೆ ಬೇಕಾದಷ್ಟು ಮಾಡಬಹುದಿತ್ತು.
ಆದರೆ, ಯಾವುದೇ ತಪ್ಪಿಲ್ಲದ ಕಾರಣ ಸುಳ್ಳು ಆರೋಪ ಹೊರಿಸಿ ಷಡ್ಯಂತ್ರ ಹೆಣೆದು ನನ್ನನ್ನು ಕೆಳಗಿಳಿಸಲು ಯತ್ನಿಸುತ್ತಿದ್ದಾರೆ. ನಾಡಿನ ಜನತೆಯ ಪ್ರೀತಿ, ಆಗ್ರಹಗಳಿಗೆ ನಾನು ಬಗ್ಗುತ್ತೇನೆಯೇ ಹೊರತು ಇವರ ಕುತಂತ್ರಕ್ಕೆ ಅಲ್ಲ. ಇದಕ್ಕೆ ನಾಡಿನ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ಗ್ಯಾರಂಟಿ ನನಗಿದೆ. ಆದರೂ ನನ್ನ ಪತ್ನಿ ಮೇಲೆ ಸುಳ್ಳು ಆರೋಪ ಮಾಡಿ ನನ್ನ ತೇಜೋವಧೆ ಮಾಡುತ್ತಿದ್ದಾರೆ ಎಂದರು. ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಯೋಜನೆ ಮಾಡಿಕೊಂಡಿದ್ದರು. ಅದಕ್ಕೆ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು ಎಂದು ವ್ಯಂಗ್ಯವಾಡಿದ ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ ಅವರನ್ನು ಶಕುನಿ ಎಂದು ಈಗಷ್ಟೆ ಎಲ್ಲ ಹೇಳಿದರು.
ಬಿಬಿಎಂಪಿಯಲ್ಲಿ ₹46 ಸಾವಿರ ಕೋಟಿ ದುರ್ಬಳಕೆ: ಬಿಜೆಪಿ ಮುಖಂಡ ಎನ್.ಆರ್.ರಮೇಶ್ ದೂರು
ಒಳ ಒಪ್ಪಂದ ಮಾಡಿಕೊಂಡು ರಾಜಕಾರಣ ಮಾಡುವ ಬೊಮ್ಮಾಯಿ ಅಂಥವರು ರಾಜಕಾರಣದಲ್ಲಿ ಇರಬಾರದು. ಕ್ಷೇತ್ರದ ಸರ್ವತೋ ಮುಖ ಅಭಿವೃದ್ಧಿಗೆ ಅಭ್ಯರ್ಥಿಯನ್ನು ಆರಿಸುವ ಮತ್ತೊಂದು ಅವಕಾಶ ಶಿಗ್ಗಾಂವಿ ಕ್ಷೇತ್ರದ ಜನತೆಗೆ ಸಿಕ್ಕಿದೆ. ಯಾಸೀರ್ ಖಾನ್ ಪಠಾಣ್ ಅವರನ್ನು ಈ ಸಲ ಗೆಲ್ಲಿಸಬೇಕು. ಇಲ್ಲಿನ ಬಿಜೆಪಿ ಅಭ್ಯರ್ಥಿ ಅತ್ಯಂತ ಶ್ರೀಮಂತ ಕುಟುಂಬದಿಂದ ಬಂದವರು. ಅವರಿಗೆ ಹಳ್ಳಿ ಬದುಕು ಗೊತ್ತಿಲ್ಲ. ಬಡವರ ಬದುಕು ಗೊತ್ತಿಲ್ಲ. ಆದರೆ ಕಾಂಗ್ರೆಸ್ ಅಭ್ಯರ್ಥಿ ಅತ್ಯಂತ ಸಾಮಾನ್ಯ ಕುಟುಂಬದಿಂದ ಬಂದು ಬಡವರ ಕಷ್ಟ ಸುಖ ಗೊತ್ತಿರುವವರು. ಇವರನ್ನು ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ಆಗುತ್ತದೆ. ಮೋದಿ ಕುಟುಂಬ ರಾಜಕಾರಣದ ಬಗ್ಗೆ ಭರ್ಜರಿ ಭಾಷಣ ಮಾಡುತ್ತಾರೆ. ಆದರೆ ಇಲ್ಲಿ ಮಾಜಿ ಸಿಎಂಗಳ ಮೊಮ್ಮಗ, ಮಗನಿಗೆ ಟಿಕೆಟ್ ನೀಡಿದ್ದಾರೆ. ಇದು ಕುಟುಂಬ ರಾಜಕಾರಣ ಅಲ್ಲವೇ ಎಂದರು.
ಕಾಂಗ್ರೆಸ್ ಗೆಲ್ಲುವುದು ಶತಸಿದ್ಧ: ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಮೂರೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಶತಸಿದ್ದ. ರಾಜ್ಯದಲ್ಲಿ ಇವತ್ತಿನವರೆಗೂ ಬಿಜೆಪಿ ಬಹುಮತ ಪಡೆದು ಅಧಿಕಾರ ನಡೆಸಿಲ್ಲ. ಮೂರು ಬಾರಿಯೂ ಕಾಂಗ್ರೆಸ್ ಶಾಸಕರನ್ನು ಖರೀದಿಸಿ ಅಧಿಕಾರ ನಡೆಸಿದರು ಎಂದರು.
Muda Case: ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಪೊಲೀಸರ ಗ್ರಿಲ್!
ನನ್ನ ಮತ್ತು ನನ್ನ ಪತ್ನಿ ವಿರುದ್ಧ ಷಡ್ಯಂತ್ರ ನಡೆಸಿ ಸುಳ್ಳು ಕೇಸು ಹಾಕಿಸಿದ್ದಾರೆ. ಬುಧವಾರ ಲೋಕಾಯುಕ್ತ ಪೊಲೀಸರ ಎದುರು ಸುಳ್ಳು ಕೇಸಿನ ಬಗ್ಗೆ ಹೇಳಿಕೆ ಕೊಟ್ಟೇಕಾಗಿದೆ. ಎಂಥಾ ಕುತಂತ್ರ ಮಾಡಿದ್ದಾರೆ ನೋಡಿ. ಇದಕ್ಕೆಲ್ಲಾ ಉತ್ತರ ಕೊಡಬೇಕು ಅಂದರೆ ಉಪ ಚುನಾವಣೆಯಲ್ಲಿ ಪಠಾಣ್ ಗೆಲ್ಲಿಸಿ. ಇಲ್ಲಿ ಪಠಾಣ್ ಗೆದ್ದರೆ ನನಗೆ ಶಕ್ತಿ ಬರುತ್ತದೆ. ಬಿಜೆಪಿಯ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಿದಂತಾಗುತ್ತದೆ.
-ಸಿದ್ದರಾಮಯ್ಯ ಸಿಎಂ.