Asianet Suvarna News Asianet Suvarna News

ಮಹಾರಾಷ್ಟ್ರ ಸಿಎಂ ಉದ್ಧವ್, ರಾಜ್ಯಪಾಲ ಕೋಶಿಯಾರಿಗೆ ಕೋವಿಡ್ ಪಾಸಿಟಿವ್!

ಮಹಾರಾಷ್ಟ್ರ ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ಉಲ್ಬಣವಾಗಿರುವ ನಡುವೆಯೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಕೋವಿಡ್ ಪಾಸಿಟಿವ್ ಆಗಿದ್ದಾರೆ. ರಾಜ್ಯಪಾಲರು ಆಸ್ಪತ್ರೆಗೆ ದಾಖಲಾಗಿದ್ದರೆ. ಉದ್ಧವ್ ಠಾಕ್ರೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕ್ಯಾಬಿನೆಟ್ ಸಭೆ ನಡೆಸಲಿದ್ದಾರೆ.
 

Amid political crisis CM Uddhav Thackeray and Governor Bhagat Singh Koshyari Tests Positive For Covid in Maharashtra san
Author
Bengaluru, First Published Jun 22, 2022, 2:08 PM IST

ಮುಂಬೈ (ಜೂನ್ 22): ಮಹಾರಾಷ್ಟ್ರದಲ್ಲಿ (Maharashtra ) ರಾಜಕೀಯ ಕ್ಷಿಪ್ರಕ್ರಾಂತಿ ನಡುವೆಯೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (CM Uddhav Thackeray) ಹಾಗೂ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ (Governor Bhagat Singh Koshyari ) ಇಬ್ಬರೂ ಕೋವಿಡ್ ಪಾಸಿಟಿವ್ (Tests Positive For Covid) ಆಗಿದ್ದಾರೆ. ಉದ್ಧವ್ ಠಾಕ್ರೆಗೆ ಕೋವಿಡ್ ಪಾಸಿಟಿವ್ ಆಗಿರುವ ಹಿನ್ನಲೆಯಲ್ಲಿ ಅವರನ್ನು ಭೇಟಿ ಮಾಡಲು ಸಾಧ್ಯವಾಗಗಿಲ್ಲ ಎಂದು ಕಾಂಗ್ರೆಸ್ ನಾಯಕ ಕಮಲ್‌ನಾಥ್ ಹೇಳಿದ್ದಾರೆ.

ಇನ್ನು ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಕೊರೊನಾವೈರಸ್ ಪಾಸಿಟಿವ್ ಪರೀಕ್ಷೆಯ ನಂತರ ದಕ್ಷಿಣ ಮುಂಬೈನ ಖಾಸಗಿ ಆಸ್ಪತ್ರೆಗೆ ಬುಧವಾರ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರ್ವಜನಿಕ ಕಾರ್ಯಕ್ರಮಗಳಲ್ಲಿ ಯಾವಾಗಲೂ ಮಾಸ್ಕ್ ಧರಿಸಿ ಕಾಣಿಸಿಕೊಳ್ಳುತ್ತಿದ್ದ ಕೊಶ್ಯಾರಿ (80) ಅವರನ್ನು ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

"ನಾವು ಉದ್ಧವ್ ಠಾಕ್ರೆ ಅವರೊಂದಿಗೆ ಸಭೆ ನಡೆಸಿದ್ದೇವೆ ಆದರೆ ಅವರು ಕೋವಿಡ್‌ ಪಾಸಿಟಿವ್ ಆಗಿದ್ದಾರೆ. ಅದಕ್ಕಾಗಿಯೇ ನಾನು ಅವರನ್ನು ಭೇಟಿಯಾಗಲು ಸಾಧ್ಯವಿಲ್ಲ" ಎಂದು ಪಕ್ಷದ ಶಾಸಕರನ್ನು ಒಟ್ಟಿಗೆ ಇರಿಸಲು ಪ್ರಯತ್ನಗಳನ್ನು ನಡೆಸುತ್ತಿರುವಾಗ ಕಮಲ್‌ನಾಥ್ (Kamalnath) ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಶಿವಸೇನೆ ನಾಯಕ ಉದ್ಧವ್ ಠಾಕ್ರೆ ತಮ್ಮ ಸಂಪುಟ ಸಭೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಿದ್ದಾರೆ. ಶಿವಸೇನೆಯ ಬಂಡಾಯ ಸಚಿವ ಏಕನಾಥ್ ಶಿಂಧೆ ಅವರು ಇಂದು ಬೆಳಗ್ಗೆ ಬಿಜೆಪಿ ಆಡಳಿತವಿರುವ ಅಸ್ಸಾಂನ ಗುವಾಹಟಿಗೆ ತೆರಳಿದ್ದು,  ಪಕ್ಷದ 55 ಶಾಸಕರ ಪೈಕಿ 40 ಶಾಸಕರು ಮತ್ತು ಆರು ಸ್ವತಂತ್ರರ ಬೆಂಬಲವನ್ನು ಹೊಂದಿರುವುದಾಗಿ ಹೇಳಿಕೊಂಡಿದ್ದರಿಂದ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಇನ್ನಷ್ಟು ಉಲ್ಬಣವಾಗಿದೆ.

"ಪಕ್ಷಗಳನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ. ನಾವು ಬಾಳಾಸಾಹೇಬ್ ಠಾಕ್ರೆಯವರ ಹಿಂದುತ್ವವನ್ನು ಅನುಸರಿಸುತ್ತೇವೆ" ಎಂದು ಎಂದು ಶಿಂಧೆ ಗುವಾಹಟಿಗೆ ಆಗಮಿಸಿದ ನಂತರ ತಿಳಿಸಿದ್ದಅರೆ. ಗುಜರಾತಿನ ಸೂರತ್‌ನಿಂದ ಚಾರ್ಟರ್ಡ್ ಫ್ಲೈಟ್‌ನಲ್ಲಿ ಪ್ರಯಾಣಿಸುತ್ತಿದ್ದ ಬಂಡಾಯ ಶಿವಸೇನೆ ಶಾಸಕರ ನಿಖರ ಸಂಖ್ಯೆಯನ್ನು ಖಚಿತಪಡಿಸಲು ಸಾಧ್ಯವಾಗಲಿಲ್ಲ, ಆದರೆ ವಿಮಾನದಲ್ಲಿ ಸಿಬ್ಬಂದಿ ಸೇರಿದಂತೆ 89 ಪ್ರಯಾಣಿಕರಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.ಸೂರತ್‌ನಿಂದ  ಗುವಾಹಟಿಗೆ ಬಂದ ಶಾಸಕರನ್ನು ಅಸ್ಸಾಂ ರಾಜ್ಯ ಸಾರಿಗೆ ಸಂಸ್ಥೆಯ ಮೂರು ಬಸ್‌ ಗಳಲ್ಲಿ ಹೋಟೆಲ್‌ಗೆ ಕರೆತರಲಾಗಿದೆ.

ಮಹಾ ವಿಕಾಸ್ ಅಘಾಡಿಯನ್ನು ಶಿವಸೇನೆ ಮುನ್ನಡೆಸುತ್ತಿದ್ದು, ತನ್ನ 55 ಶಾಸಕರನ್ನು ಒಳಗೊಂಡಿದೆ. ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ 53 ಶಾಸಕರನ್ನು ಒಳಗೊಂಡಿದ್ದರೆ, ಕಾಂಗ್ರೆಸ್ 44 ಶಾಸಕರನ್ನು ಒಳಗೊಂಡಿದೆ. ಒಟ್ಟು 288 ಸದಸ್ಯ ಬಲದ ವಿಧಾನಸಭೆಯಲ್ಲಿ ಬಹುಮತಕ್ಕೆ 144 ಸ್ಥಾನ ಪಡೆದುಕೊಳ್ಳಬೇಕಿದೆ.

ಶಿವಸೇನೆ ಸುತ್ತ ಸದ್ದಿಲ್ಲದೆ ಬಲೆ ಹೆಣೆದ ಫಡ್ನವೀಸ್‌, ಉದ್ಧವ್‌ಗೆ ಸುಳಿವೂ ಸಿಕ್ಕಿರಲಿಲ್ಲ!

ಮಂಗಳವಾರ ಮುಂಬೈನಿಂದ ಸೂರತ್‌ಗೆ ಶಾಸಕರನ್ನು ಕರೆದೊಯ್ಯಲಾಯಿತು ಮತ್ತು ಭದ್ರತಾ ಕಾರಣಗಳಿಗಾಗಿ ಅವರನ್ನು ಗುವಾಹಟಿಗೆ ಸ್ಥಳಾಂತರಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ ಎಂದು ಪಿಟಿಐ ವರದಿ ಮಾಡಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸರ್ಕಾರವು ಏಕ್‌ನಾಥ್ ಶಿಂಧೆ ನೇತೃತ್ವದ ಶಾಸಕರ ಬಂಡಾಯದ ನಂತರ ಬಿಕ್ಕಟ್ಟನ್ನು ಎದುರಿಸುತ್ತಿದೆ. ಕೋವಿಡ್‌ಗೆ ಪಾಸಿಟಿವ್ ಆದ ಬಳಿಕ ಉದ್ಧವ್ ಠಾಕ್ರೆ ಅವರು ತಮ್ಮ ಸಂಪುಟದ ನಿರ್ಣಾಯಕ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಇದೀಗ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ನಿವಾಸದಲ್ಲಿ ಶಿವಸೇನೆ ಎಲ್ಲಾ ಶಾಸಕರ ಸಭೆ ಕರೆದಿದೆ. ಹಾಜರಾಗದವರ ಸದಸ್ಯತ್ವವನ್ನು ರದ್ದುಗೊಳಿಸಬಹುದು ಎಂದು ಪಕ್ಷ ಎಚ್ಚರಿಸಿದೆ.

ಮಹಾರಾಷ್ಟ್ರ ಸಿಎಂ ಉದ್ಧವ್, ರಾಜ್ಯಪಾಲ ಕೋಶಿಯಾರಿಗೆ ಕೋವಿಡ್ ಪಾಸಿಟಿವ್!

ಮಹಾರಾಷ್ಟ್ರ ಬಿಜೆಪಿ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ತಮ್ಮ ಮುಂಬೈ ನಿವಾಸದಲ್ಲಿ ತಮ್ಮ ಪಕ್ಷದ ನಾಯಕರೊಂದಿಗೆ ಸಭೆ ನಡೆಸುತ್ತಿದ್ದು, ಸರ್ಕಾರ ರಚನೆಗೆ ಹಕ್ಕು ಸಾಧಿಸಲು ಬೇಕಾದ ಸಾಂವಿಧಾನಿಕ ನಿಬಂಧನೆಗಳು ಮತ್ತು ಬಹುಮತದ ಲೆಕ್ಕಾಚಾರದ ಬಗ್ಗೆ ಚರ್ಚಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow Us:
Download App:
  • android
  • ios