Asianet Suvarna News Asianet Suvarna News

ತಿರುಪತಿಯಲ್ಲಿ ದಕ್ಷಿಣ ಭಾರತ ಸಿಎಂಗಳ ಸಭೆ : ಬೊಮ್ಮಾಯಿ ಭಾಗಿ

  • ದಕ್ಷಿಣ ಭಾರತದ ವಿವಿಧ ರಾಜ್ಯಗಳ ನಡುವೆ ಸಮನ್ವಯತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಮ್ಮೇಳನ
  • ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮೇಳನ
Amit Shah to chair Southern Zonal Council meet in Tirupati snr
Author
Bengaluru, First Published Nov 14, 2021, 6:41 AM IST
  • Facebook
  • Twitter
  • Whatsapp

 ಬೆಂಗಳೂರು (ನ.14):  ದಕ್ಷಿಣ ಭಾರತದ (south india) ವಿವಿಧ ರಾಜ್ಯಗಳ ನಡುವೆ ಸಮನ್ವಯತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಭಾನುವಾರ ತಿರುಪತಿಯಲ್ಲಿ (Tirupathi) ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amith shah) ನೇತೃತ್ವದಲ್ಲಿ ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳ (CM) ಸಮ್ಮೇಳನ ನಡೆಯಲಿದೆ. 

ಈ ಸಭೆಯಲ್ಲಿ ಕರ್ನಾಟಕ (karnataka), ಆಂಧ್ರಪ್ರದೇಶ (andhrapradesh), ತೆಲಂಗಾಣ, ತಮಿಳುನಾಡು (tailnadu), ಕೇರಳ, ಪುದುಚೇರಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಗಡಿಭಾಗದಲ್ಲಿನ ನೀರಾವರಿ ಯೋಜನೆಗಳು ಸೇರಿದಂತೆ ವಿವಿಧ ವಿಚಾರಗಳು ಪ್ರಸ್ತಾಪವಾಗಲಿವೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (basavaraj Bommai) ಅವರು ಭಾನುವಾರ ಮಧ್ಯಾಹ್ನ 12ಗಂಟೆಗೆ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಲಿದ್ದಾರೆ. ಭಾನುವಾರ ತಿರುಪತಿಯಲ್ಲೇ ವಾಸ್ತವ್ಯ ಹೂಡುವ ಅವರು ಸೋಮವಾರ ಬೆಳಗ್ಗೆ ದೇವರ ದರ್ಶನ ಪಡೆದು ಬೆಂಗಳೂರಿಗೆ ಹಿಂತಿರುಗಲಿದ್ದಾರೆ.

ಸಭೆಯಲ್ಲಿ ಹೆಚ್ಚಾಗಿ ಗಡಿಭಾಗದಲ್ಲಿ ಕೈಗೊಂಡಿರುವ ನೀರಾವರಿ ಯೋಜನೆಗಳ ಕುರಿತು ಚರ್ಚೆ ನಡೆಯಲಿದೆ.

ತುಂಗಾಭದ್ರಾ ನದಿಗೆ ಅಡ್ಡಲಾಗಿ ಆಂಧ್ರಪ್ರದೇಶ ಸರ್ಕಾರವು ಗುಡ್ರವುಳು ಯೋಜನೆ ನಿರ್ಮಿಸುವ ಸಂಬಂಧ ರಾಜ್ಯ ಸರ್ಕಾರ (karnataka Govt) ಉತ್ತರ ನೀಡಲಿದೆ. ಅಲ್ಲಿ ಎರಡು ರಾಜ್ಯಗಳ ಜಂಟಿ ಸಮೀಕ್ಷೆ ನಡೆಸಬೇಕಾದ ಅಗತ್ಯತೆ, ರಾಜ್ಯಕ್ಕೆ ಲಭ್ಯವಾಗುವ ನೀರಿನ ಪ್ರಮಾಣದ ಬಗ್ಗೆ ಮಾಹಿತಿ ಕೋರಲಾಗುತ್ತದೆ. ತೆಲಂಗಾಣ ಸರ್ಕಾರದ ರಾಜೀವ್‌ಗಾಂಧಿ ಸಂಗಮಬಂಡ ಬ್ಯಾರೇಜ್‌ ಯೋಜನಾ ಕುರಿತು ಚರ್ಚೆ ನಡೆಸಲಾಗುತ್ತದೆ. ಕೃಷ್ಣಾ ನದಿ ಅಡ್ಡಲಾಗಿ ನಿರ್ಮಿಸುವ ಈ ಯೋಜನೆಯ ಸಮೀಕ್ಷೆ, ನೀರಿನ ಲಭ್ಯತೆ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಯಲಿದೆ. ಕೇಂದ್ರದ ಯೋಜನೆಗಳ ಕುರಿತು, ಕೇಂದ್ರ ಆರೋಗ್ಯ ಇಲಾಖೆಯ ಯೋಜನೆಗಳ ಅನುಷ್ಠಾನದ ಕುರಿತು ಸಹ ಸಭೆಯಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗಿದೆ.

 ಸಿಎಂಗಳ ಸಮ್ಮೇಳನ: ಅಮಿತ್‌ ಶಾ ಭಾಗಿ

 ದಕ್ಷಿಣ ಭಾರತದ ವಿವಿಧ ರಾಜ್ಯಗಳ ನಡುವೆ ಸಮನ್ವಯತೆ ಸಾಧಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಧ್ಯಕ್ಷತೆಯಲ್ಲಿ ಭಾನುವಾರ ತಿರುಪತಿಯಲ್ಲಿ ಮುಖ್ಯಮಂತ್ರಿಗಳ ಸಮ್ಮೇಳನ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಷಯ ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳುತ್ತೇನೆ. ಅದಕ್ಕೆ ಪೂರ್ವಭಾವಿಯಾಗಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು.

ನಾಯಕತ್ವ ಬದಲಾವಣೆ ವಿಚಾರ : 

ರಾಜ್ಯದಲ್ಲಿ ನಾಯಕತ್ವ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ (BJP National Secretary Arun Singh), ಪ್ರತಿಪಕ್ಷ ಕಾಂಗ್ರೆಸ್‌ ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಆಪಾದಿಸಿದ್ದಾರೆ.

ಸೋಮವಾರ ಸಂಜೆ ಬೆಂಗಳೂರಿಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ (Congress) ಬಳಿ ಯಾವುದೇ ವಿಷಯಗಳಿಲ್ಲದ ಕಾರಣ ಅದು ಬಿಜೆಪಿ ಬಗ್ಗೆ ಸುಳ್ಳು ಆರೋಪ- ಆಧಾರರಹಿತ ಟೀಕೆ ಮಾಡುತ್ತಿದೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶಂಸಿಸಿದರು. ಅಲ್ಲದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj Bommai) ಕಾರ್ಯಚಟುವಟಿಕೆಯನ್ನೂ ಶ್ಲಾಘಿಸಿದರು.

ಬಿಟ್‌ ಕಾಯಿನ್‌ ಹಗರಣದಲ್ಲಿ (Bitcoin Scam) ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ ಎಂಬ ಕಾಂಗ್ರೆಸ್‌ ಆರೋಪ ಕುರಿತ ಪ್ರಶ್ನೆಗೆ ಉತ್ತರಿಸಿದ ಸಿಂಗ್‌, ಆ ಕುರಿತು ನಮ್ಮ ಮುಖ್ಯಮಂತ್ರಿಗಳು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಕಾಂಗ್ರೆಸ್‌ ನಾಯಕರು ಆಧಾರರಹಿತವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ಯಾವುದೇ ಹುರುಳಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದರು.

ಕಾಂಗ್ರೆಸ್‌ ಪಕ್ಷವು ಒಡೆದ ಮನೆಯಾಗಿದೆ. ಸಿದ್ದರಾಮಯ್ಯ (Siddaramaiah) ಮತ್ತು ಡಿ.ಕೆ.ಶಿವಕುಮಾರ್‌ (DK Shivakumar) ಅವರ ನಡುವೆ ತೀವ್ರ ಭಿನ್ನಾಭಿಪ್ರಾಯವಿದೆ. ಆ ಪಕ್ಷಕ್ಕೆ ಹೋರಾಟ ಮಾಡಲು ವಿಷಯಗಳೇ ಇಲ್ಲದಂತಾಗಿದೆ. ಕಾಂಗ್ರೆಸ್‌ ಒಳಜಗಳ ಕೇವಲ ಕರ್ನಾಟಕದಲ್ಲಷ್ಟೇ (karnataka) ಇಲ್ಲ. ಛತ್ತೀಸ್‌ಗಢ, ಪಂಜಾಬ್‌ ರಾಜ್ಯಗಳಲ್ಲೂ ಇದೆ. ಕಾಂಗ್ರೆಸ್‌ ನಾಯಕತ್ವದ ವೈಫಲ್ಯವೇ ಇದಕ್ಕೆ ಕಾರಣ ಎಂದು ಹರಿಹಾಯ್ದರು.

ಇತ್ತೀಚೆಗೆ ನಡೆದ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಮತಗಳ ಅಂತರದಿಂದ ಬಿಜೆಪಿ ಗೆಲುವು ಸಾಧಿಸಿದೆ. ಹಾನಗಲ್‌ ವಿಧಾನಸಭಾ ಕ್ಷೇತ್ರದಲ್ಲಿ ಕಡಮೆ ಮತಗಳ ಅಂತರದಿಂದ ಸೋಲು ಉಂಟಾಗಿದೆ. ಅಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಚೆನ್ನಾಗಿ ಕೆಲಸ ಮಾಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

‘ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಬೆಲೆಯನ್ನು ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಡಮೆ ಮಾಡಿವೆ. ಇದಕ್ಕಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ. ಮುಂಬರುವ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ’ ಎಂದು ಅರುಣ್‌ ಸಿಂಗ್‌ ವಿಶ್ವಾಸ ವ್ಯಕ್ತಪಡಿಸಿದರು.

ಇತ್ತೀಚೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಬಿಟ್‌ ಕಾಯಿನ್‌ ಹಗರಣದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆದರೆ ರಾಜ್ಯ ಸರ್ಕಾರಕ್ಕೆ ಕಂಟಕ ಎದುರಾಗಲಿದೆ ಎಂದು ಹೇಳಿದ್ದರು.

Follow Us:
Download App:
  • android
  • ios