ಮೈಸೂರು (ಫೆ.11): ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮನ ವೇಳೆ ಮೈಸೂರು - ಕೊಡಗು ಸಂಸದ ಪ್ರತಾಪ್‌ ಸಿಂಹ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ  ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಈ  ಘಟನೆ ನಡೆದಿದ್ದು, ಕೇಂದ್ರ ಗೃಹ ಸಚಿವರ ಸ್ವಾಗತಕ್ಕೆ ಲೈನಪ್ ಬಗ್ಗೆ ಸೂಚನೆ, ಪೊಲೀಸರ ಅನುಮತಿಯನ್ವಯ ನಿಲ್ಲುವಂತೆ ಮನವಿ ವೇಳೆ  ಮಾಜಿ ಶಾಸಕ ಪ್ರೀತಮ್ ಗೌಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿದ ಪ್ರತಾಪ್ ಸಿಂಹ ಇದೆಲ್ಲವನ್ನೂ ಹಾಸನದಲ್ಲಿ ಇಟ್ಕೋ, ನಮ್ಮಲ್ಲಿ ನಡೆಯಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ. ಇದರಿಂದ ಸಿಟ್ಟಿಗೆದ್ದ ಪ್ರೀತಂ ಗೌಡ ಸುಮ್ಮನಾಗದೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಇಬ್ಬರ ನಡುವಿನ ಮಾತಿನ ಚಕಮಕಿಯನ್ನು ಸ್ಥಳೀಯ ನಾಯಕರು ಸುಮ್ಮನಾಗಿಸಿದರು.

ಯುಪಿಎ ಸರ್ಕಾರ 10 ವರ್ಷದ ದುರಾಡಳಿತ ನಡೆಸಿತ್ತು: ಡಾ.ಸಿ.ಎನ್‌.ಅಶ್ವತ್ಥನಾರಾಯಣ

ಸುತ್ತೂರು ಜಾತ್ರೆ ವೇದಿಕೆಯಲ್ಲಿ ಮೈತ್ರಿ ನಾಯಕರು:
ಇನ್ನು ರಾಜ್ಯ ಪ್ರವಾಸದಲ್ಲಿರುವ ಅಮಿತ್ ಶಾ ಜೊತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ  ವೇದಿಕೆ ಹಂಚಿಕೊಳ್ಳಲಿದ್ದಾರೆ. ನಾಯಕರು ಸುತ್ತೂರು ಜಾತ್ರಾಮಹೋತ್ಸವದಲ್ಲಿ  ಭಾಗಿಯಾಗಲಿದ್ದು, ಮೈತ್ರಿ ಬಳಿಕ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.  ಮಾತ್ರವಲ್ಲ ಸಿಎಂ ಸಿದ್ದರಾಮಯ್ಯ ಅವರ ಸ್ವಕ್ಷೇತ್ರದಲ್ಲೆ ವೇದಿಕೆ ಹಂಚಿಕೊಳ್ಳುತ್ತಿರುವುದು ಕುತೂಹಲ ಹೆಚ್ಚಿಸಿದೆ. ಕುಮಾರಸ್ವಾಮಿ ಹಾಗೂ ವಿಜಯೇಂದ್ರರಿಗೆ 5 ನಿಮಿಷ ಭಾಷಣಕ್ಕೆ ಅವಕಾಶ ನೀಡಲಾಗಿದೆ. ಅಮಿತ್ ಶಾ ಹೊರತು ಕೇವಲ ಇಬ್ಬರು ನಾಯಕರುಗಳಿಗೆ ಭಾಷಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಾರ್ಯಕ್ರಮ ಮುಗಿದ ಬಳಿಕ ಅಮಿತ್ ಶಾ ಜೊತೆ ಭೋಜನ ಕೂಟ ಕೂಡ ಇರಲಿದೆ.

ಈಶ್ವರಪ್ಪ, ಅನಂತಕುಮಾರ್ ಹೆಗಡೆಗೆ ಗುಂಡಿಕ್ಕಲಿ: ಸಚಿವ ಚಲುವರಾಯಸ್ವಾಮಿ ತಿರುಗೇಟು

ಸುತ್ತೂರು ಕಾರ್ಯಕ್ರಮದಲ್ಲಿ ಅಮಿತ್ ಶಾ ಜೊತೆಗೆ ಶ್ರೀಮತಿ ಸೊನಾಲ್ ಶಾ, ಬಿಎಲ್ ಸಂತೋಷ್, ಪ್ರಹ್ಲಾದ್ ಜೋಶಿ, ಬಸವರಾಜ ಬೊಮ್ಮಾಯಿ, ಹೆಚ್ ಡಿ ಕುಮಾರಸ್ವಾಮಿ, ಆರ್ ಅಶೋಕ್, ಬಿವೈ ವಿಜಯೇಂದ್ರ, ಪ್ರಭಾಕರ ಖೋರೆ ಭಾಗಿಯಾಗಲಿದ್ದಾರೆ.