Assembly election: ರಾಮನಗರದಲ್ಲಿಯೂ ಶ್ರೀರಾಮ ಮಂದಿರ ನಿರ್ಮಿಸಲು ಬಜೆಟ್‌ನಲ್ಲಿ ಘೋಷಣೆ: ಆಶ್ವತ್ಥನಾರಾಯಣ
ದೇಶದಲ್ಲಿ ಉತ್ತರ ಪ್ರದೇಶ ರಾಜ್ಯದಲ್ಲಿರುವ ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಿದ ಮಾದರಿಯಲ್ಲಿಯೇ ಕರ್ನಾಟಕದ ರಾಮನಗರದಲ್ಲಿ ರಾಮ ಮಂದಿರ ನಿರ್ಮಾಣ ಮಾಡಲಾಗುವುದು.
ಬೆಳಗಾವಿ (ಡಿ.28): ನಮ್ಮ ದೇಶದಲ್ಲಿ ಉತ್ತರ ಪ್ರದೇಶ ರಾಜ್ಯದಲ್ಲಿರುವ ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಿದ ಮಾದರಿಯಲ್ಲಿಯೇ ಕರ್ನಾಟಕದ ರಾಮನಗರದಲ್ಲಿ ರಾಮ ಮಂದಿರ ನಿರ್ಮಾಣ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಮತ್ತು ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮನಗರದಲ್ಲಿ ರಾಮಭೂಮಿ ನಿರ್ಮಾಣ ಮಾಡಲಾಗುತ್ತಿದೆ. ಶ್ರೀರಾಮನ ಕುರಿತ ದೇವಾಲಯಗಳು ಹಾಗೂ ಇತರೆ ಸಂದೇಶಗಳನ್ನು ಸಾರುವ ನಿಟ್ಟಿನಲ್ಲಿ ರಾಮನಗರದಲ್ಲಿಯೂ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು. ಉತ್ತರ ಭಾರತದದಂತೆ ದಕ್ಷಿಣ ಭಾರತದಲ್ಲೂ ರಾಮ ಮಂದಿರ ನಿರ್ಮಾಣ ಆಗುವ ವಿಶ್ವಾಸ ಇದೆ. ರಾಜ್ಯದ ಮುಂಬರುವ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾತಿ ಅವರು ರಾಮ ಮಂದಿರ ನಿರ್ಮಾಣ ಮಾಡುವುದಕ್ಕಾಗಿ ಅನುದಾನ ಮೀಸಲಿಡಲು ಬಜೆಟ್ ಘೋಷಣೆ ಮಾಡಬಹುದು ಎಂದು ತಿಳಿಸಿದರು.
ಸಂಘಟನೆ ಬಲಪಡಿಸಲು ಅಮಿತ್ ಶಾ ಆಗಮನ: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅವಧಿ ಪೂರ್ಣ ಚುನಾವಣೆ ಎನ್ನುವ ವಿಚಾರ ಉದ್ಭವ ಆಗುವುದಿಲ್ಲ. ನಿಗದಿತ ಸಮಯಕ್ಕೆ ಕೇಂದ್ರ ಚುನಾವಣಾ ಆಯೋಗದಿಂದ ಚುನಾವಣೆಯನ್ನು ಘೋಷಣೆ ಮಾಡಲಾಗುತ್ತದೆ. ಆದರೆ, ಈಗ ಅಮಿತ್ ಶಾ ಸವರು ಬರುತ್ತಿರುವುದು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಪಕ್ಷ ಸಂಘಟನೆ ಮಾಡಲು ಬರುತ್ತಿದ್ದಾರೆ. ನಮ್ಮ ಸಂಘಟನೆ ಭದ್ರ ಮಾಡಿಕೊಳ್ಳಬೇಕು. ಹೆಚ್ಚು ಶಾಸಕರು ಆಯ್ಕೆ ಆಗಬೇಕು. ಈ ನಿಟ್ಟಿನಲ್ಲಿ ಅಮಿತ್ ಶಾ ರಾಜ್ಯಕ್ಕೆ ಬರ್ತಿದ್ದಾರೆ ಎಂದು ತಿಳಿಸಿದರು.
ಅಯೋಧ್ಯೆ ಮಾದರಿಯಲ್ಲಿ ರಾಮದೇವರ ಬೆಟ್ಟ ಅಭಿವೃದ್ಧಿ: ಸಚಿವ ಅಶ್ವತ್ಥನಾರಾಯಣ
ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ: ಈಗಾಗಲೇ ಪ್ರತಿಪಕ್ಷ ಜೆಡಿಎಸ್ ಮಂಡ್ಯದಲ್ಲಿ ಮೈ ಶುಗರ್ ಕಾರ್ಖಾನೆ ನಿರ್ವಹಣೆ ಮಾಡದೇ ಅತೀ ಹೆಚ್ಚು ಸಮಸ್ಯೆಗೆ ಸಿಲುಕಿಸಿದೆ. ಜೊತೆಗೆ ಇಂದು ಮಂಡ್ಯ ಜಿಲ್ಲೆ ಯಾವ ಪರಿಸ್ಥಿತಿಗೆ ಬಂದಿದೆ ಅಂತ ಇಡೀ ದೇಶಕ್ಕೆ ಗೊತ್ತಿದೆ. ಅವರನ್ನು ನಂಬಿ ಯಾವ ಅಭಿವೃದ್ಧಿಯೂ ಮಂಡ್ಯದಲ್ಲಿ ಆಗಿಲ್ಲ. ನಮ್ಮ ಸರ್ಕಾರ ಎಲ್ಲಾ ಕ್ಷೇತ್ರದಲ್ಲಿ ಒತ್ತು ನೀಡಿ ಆ ಭಾಗದ ಜನರಿಗೆ ಮೂಲ ಸೌಕರ್ಯಗಳು ನೀಡಿದೆ. ರಾಜ್ಯದಲ್ಲಿ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿ ಒತ್ತು ನೀಡಿದೆ. ಕೇವಲ ರಾಜಕೀಯ ಮಾಡೋಕಷ್ಟೇ ಜೆಡಿಎಸ್ ಇರೊದು. ನಮ ಪಕ್ಷಕ್ಕೆ ಯಾವ ಕೊರತೆ ಇಲ್ಲ. ಎಲ್ಲಾ ವರ್ಗದ, ಸಮುದಾಯದ ನಾಯಕರನ್ನು ಬಿಜೆಪಿ ಪ್ರತಿನಿಧಿಸುತ್ತಿದ್ದೇವೆ. ಅಂಬೇಡ್ಕರ್, ಕೆಂಪೇಗೌಡ, ಸಂಗೊಳ್ಳಿ ರಾಯಣ್ಣ, ನಾರಾಯಣ ಗುರು ಸೇರಿದಂತೆ ಮಹಾಪುರುಷರಿಗೆ ಗೌರವ ಸಲ್ಲಿಸುತ್ತೇವೆ. ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಹೆಸರು ಕೂಡ ಘೋಷಣೆ ಮಾಡಿದೆ. ಬಿಜೆಪಿ ಜನರ ಪಕ್ಷವಾಘಿದ್ದು ಇದು ಒಂದು ಕುಟುಂಬದ ಪಕ್ಷ ಅಲ್ಲ ಎಂದು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.
ಹಲೇ ಮೈಸೂರು ಭಾಗದಲ್ಲಿ ಬಿಜೆಪಿ ಶಕ್ತಿ ಹೆಚ್ಚಳ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ಕೊಡ್ತಿದ್ದಾರೆ. ಅಮಿತ್ ಶಾ ಭೇಟಿಯಿಂದ ದೊಡ್ಡ ಸಂಚಲನ ಶಕ್ತಿ ತುಂಬುವಂತಾಗಲಿದೆ. ಪಕ್ಷಕ್ಕೆ ದೊಡ್ಡ ಶಕ್ತಿ ಬರಲಿದೆ. ಹಳೆ ಮೈಸೂರು ಭಾಗದಲ್ಲಿ ಸಂಖ್ಯೆ ಹೆಚ್ಚಿಸುವ ಪ್ರಯತ್ನ ಮಾಡಲಾಗುತ್ತಿದೆ. ಮಂಡ್ಯದ ಜೀವನಾಡಿಯಾಗಿದ್ದ ಮೈಶುಗರ್ ಕಾರ್ಖಾನೆಯನ್ನೇ ಸರಿಯಾಗಿ ನಿರ್ವಹಣೆ ಮಾಡುವುದಕ್ಕೆ ಜೆಡಿಎಸ್ ಕಾಂಗ್ರೆಸ್ ಗೆ ಆಗಲಿಲ್ಲ. ಹಳೆ ಮೈಸೂರು ಭಾಗದ ಜನ ಜೆಡಿಎಸ್ ಕಾಂಗ್ರೆಸ್ ಅನ್ನು ಬಹಳ ನಂಬಿದ್ದರು. ಅವರನ್ನು ನಂಬಿ ಏನೂ ಆಗಿಲ್ಲ. ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಮಂಡ್ಯದ ಮೈಶುಗರ್ ಸೇರಿದಂತೆ ಎಲ್ಲ ಅಭಿವೃದ್ಧಿ ಕೂಡ ಬಿಜೆಪಿಯಿಂದಲೇ ಆಗಿದೆ. ಎಲ್ಲ ವರ್ಗದ ಜನರನ್ನು ಪ್ರತಿನಿಧಿಸಿ ಸರ್ವಾಂಗೀಣ ಅಭಿವೃದ್ಧಿ ಗೆ ನಾವು ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಸಚಿವ ಅಶ್ವತ್ಥನಾರಾಯಣ ನೇತೃತ್ವದಲ್ಲಿ ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ ಸಮರ್ಪಿಸಿದ ರಾಮನಗರ ಭಕ್ತರು
ನಾಳೆ ಸಂಜೆಯೇ ಅಧಿವೇಶನ ಮೊಟಕು: ರಾಜ್ಯದ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಶುಕ್ರವಾರಕ್ಕೆ ಕೊನೆಗೊಳ್ಳಬೇಕಿತ್ತು. ಆದರೆ, ನಿಗದಿತ ಅವಧಿಗಿಂದ ಒಂದು ದಿನ ಮುಂಚಿತವಾಗಿಯೇ ಮುಕ್ತಾಯಗೊಳಿಸಲಾಗುತ್ತದೆ. ಈ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಚೇರಿಯಲ್ಲಿ ಚರ್ಚೆ ನಡೆಯುತ್ತಿದೆ. ಸಿಎಂ ಬಸವರಾಜ್ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವ ಮಾಧುಸ್ವಾಮಿ ಸೇರಿದಂತೆ ಹಲವರು ಚರ್ಚೆಯಲ್ಲಿ ಭಾಗಿಯಾಗಿದ್ದಾರೆ. ಒಂದು ದಿನ ಮೊದಲೇ ಅಧಿವೇಶನ ಮುಕ್ತಾಯ ಮಾಡಲು ನಿರ್ಧಾರ ಮಾಡಲಾಗುತ್ತಿದೆ. ಹೀಗಾಗಿ, ನಾಳೆ ಸಂಜೆ ಚಳಿಗಾಲದ ಅಧಿವೇಶನಕ್ಕೆ ತೆರೆ ಎಳೆಯಲು ತೀರ್ಮಾನ ಮಾಡಲಾಗುತ್ತಿದೆ ಎಂದರು.