Asianet Suvarna News Asianet Suvarna News

ಭಾರತದಲ್ಲಿ ಅನಧಿಕೃತ ತುರ್ತುಪರಿಸ್ಥಿತಿ ಘೋಷಣೆ ಆಗಿದೆ: ಸಿದ್ದರಾಮಯ್ಯ

ರಾಹುಲ್‌ ಅನರ್ಹತೆಯಿಂದ ಮೋದಿ ಹೇಡಿತನ ಸಾಬೀತು, ಪ್ರಜಾತಂತ್ರದಲ್ಲಿ ಇದು ಕರಾಳ ದಿನ, ಅನ್ಯಾಯದ ವಿರುದ್ಧ ಒಗ್ಗಟ್ಟಾಗಿ ಹೋರಾಡೋಣ: ವಿಪಕ್ಷ ನಾಯಕ ಸಿದ್ದರಾಮಯ್ಯ 

An Unofficial Emergency has been Declared in India Says Siddaramaiah grg
Author
First Published Mar 26, 2023, 12:00 AM IST

ಬೆಂಗಳೂರು(ಮಾ.26):  ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳುವ ಸತ್ಯ ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ. ಈ ಅನ್ಯಾಯದ ವಿರುದ್ಧ ನ್ಯಾಯಾಲಯ ಹಾಗೂ ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವದ ಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಸಿಸ್ಟ್‌ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ಧ ಪಕ್ಷ, ಪಂಥ ಮರೆತು ಎಲ್ಲರೂ ಒಟ್ಟಾಗಿ ಪ್ರತಿಭಟನೆ ನಡೆಸಬೇಕಾಗಿದೆ ಎಂದು ಕರೆ ನೀಡಿದ್ದಾರೆ.

ಸಿದ್ದರಾಮಯ್ಯಗೆ ಕ್ಷೇತ್ರ ಗೊಂದಲ, ರೇವಣ್ಣಗೆ ಪತ್ನಿ ಸ್ಪರ್ಧಿಸುವ ಚಿಂತೆ: ಪ್ರತಾಪ ಸಿಂಹ ಲೇವಡಿ!

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಭಾರತದಲ್ಲಿ ಅನಧಿಕೃತವಾಗಿ ತುರ್ತುಪರಿಸ್ಥಿತಿ ಘೋಷಿಸಲಾಗಿದೆ. ನರೇಂದ್ರ ಮೋದಿ, ಬಿಜೆಪಿ ಮತ್ತು ಎನ್‌ಡಿಎ ಸರ್ಕಾರದ ವಿರುದ್ದ ಮಾತನಾಡುವವರಿಗೆಲ್ಲರಿಗೂ ಎಚ್ಚರಿಕೆಯ ರೂಪದಲ್ಲಿ ರಾಹುಲ್‌ ಗಾಂಧಿಯವರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ.

ಇದು ಕೇವಲ ಕಾಂಗ್ರೆಸ್‌ ಪಕ್ಷ ಇಲ್ಲವೇ ರಾಹುಲ್‌ ಗಾಂಧಿಯವರಿಗೆ ನೀಡಿರುವ ಬೆದರಿಕೆ ಅಲ್ಲ, ಅನ್ಯಾಯ-ಅಕ್ರಮದ ವಿರುದ್ದ ಧ್ವನಿ ಎತ್ತುವ ಎಲ್ಲ ಪ್ರಜಾಪ್ರಭುತ್ವ ಪ್ರೇಮಿಗಳಿಗೆ ಒಡ್ಡಿರುವ ಬೆದರಿಕೆ. ಪಕ್ಷ, ಪಂಥ ಮರೆತು ಎಲ್ಲರೂ ಒಟ್ಟಾಗಿ ಇದರ ವಿರುದ್ದ ಪ್ರತಿಭಟನೆ ನಡೆಸಬೇಕಾಗಿದೆ ಎಂದು ಹೇಳಿದ್ದಾರೆ.

ಶಿಸ್ತು, ಸಂಯಮದಿಂದ ವರ್ತಿಸಿ- ಸಿದ್ದು:

ರಾಹುಲ್‌ ಗಾಂಧಿಯವರ ವಿರುದ್ದ ಕೈಗೊಳ್ಳಲಾದ ಕ್ರಮದಿಂದ ಕಾಂಗ್ರೆಸ್‌ ಪಕ್ಷದ ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವಾಗಿರುವುದು ನಿಜ. ಆದರೂ ಈ ಸಂದರ್ಭದಲ್ಲಿ ಸಂಯಮದಿಂದ ವರ್ತಿಸುವುದು ಅಗತ್ಯ. ಯಾರೂ ಕೂಡಾ ಸಿಟ್ಟು-ಆಕ್ರೋಶದ ಕೈಗೆ ಬುದ್ದಿ ಕೊಡದೆ ಶಾಂತಿಯುತ ಪ್ರತಿಭಟನೆ ನಡೆಸಬೇಕೆಂದು ಕೋರುತ್ತೇನೆ ಎಂದು ಸಲಹೆ ನೀಡಿದ್ದಾರೆ.

Follow Us:
Download App:
  • android
  • ios