Asianet Suvarna News Asianet Suvarna News

ಕಾರ್ಯಕರ್ತನ ಗುರುತಿಸಿ ಸಚಿವನನ್ನಾಗಿ ಮಾಡಿದ ಬಿಜೆಪಿಯನ್ನು ಶ್ಲಾಘಿಸಿದ ನಾಯ್ಡು: ವೀಡಿಯೋ ವೈರಲ್‌

ಬಿಜೆಪಿ ಸಾಮಾನ್ಯರಲ್ಲಿ ಸಾಮಾನ್ಯರೆನಿಸಿದ ಕಾರ್ಯಕರ್ತರೊಬ್ಬರಿಗೆ ಟಿಕೆಟ್ ನೀಡಿ ಗೆಲ್ಲಿಸಿ ಬಳಿಕ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನವನ್ನು ಕೂಡ ನೀಡಿರುವುದಕ್ಕೆ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.  

Andhra pradesh CM chandrababu Naidu praises BJP for recognizing an common party worker and making him a minister Video viral akb
Author
First Published Jun 12, 2024, 3:08 PM IST

ವಿಜಯವಾಡ: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಆಂಧ್ರಪ್ರದೇಶದಲ್ಲಿ ಬಿಜೆಪಿಯೂ ಸಾಮಾನ್ಯರಲ್ಲಿ ಸಾಮಾನ್ಯರೆನಿಸಿದ ಕಾರ್ಯಕರ್ತರೊಬ್ಬರಿಗೆ ಟಿಕೆಟ್ ನೀಡಿ ಗೆಲ್ಲಿಸಿ ಬಳಿಕ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನವನ್ನು ಕೂಡ ನೀಡಿರುವುದಕ್ಕೆ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.  

ಆಂಧ್ರಪ್ರದೇಶದಲ್ಲಿ ಇಂದು ಟಿಡಿಪಿ ಚಂದ್ರಬಾಬು ನಾಯ್ಡು ನೇತೃತ್ವದ ಎನ್‌ಡಿ ಮೈತ್ರಿಕೂಟ ಸರ್ಕಾರ ರಚನೆ ಮಾಡಿದ್ದು, ಟಿಡಿಪಿಯ ಚಂದ್ರಬಾಬು ನಾಯ್ಡು ಅವರು ಸಿಎಂ ಆಗಿದ್ದರೆ, ಜನಸೇನಾದ ಪವನ್ ಕಲ್ಯಾಣ್ ಅವರು ಡಿಸಿಎಂ ಆಗಿದ್ದಾರೆ. ಜೊತೆಗೆ 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.  ಆದರೆ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ರಚನೆಯಾದ ನಂತರ ರಾಜ್ಯದಲ್ಲಿ ನಡೆದ ಮಿತ್ರಪಕ್ಷಗಳ ಸಭೆಯಲ್ಲಿ ಚಂದ್ರಬಾಬು ನಾಯ್ಡು ಅವರು ಬಿಜೆಪಿ ಪಕ್ಷವನ್ನು ಹೊಗಳಿ ಮಾತನಾಡಿರುವ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾಲಿಗೆ ಬೀಳಲು ಮುಂದಾದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ತಬ್ಬಿಕೊಂಡ ಪ್ರಧಾನಿ ಮೋದಿ

ಈ ಸಭೆಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು ಅವರು, ಒಬ್ಬ ಸಾಮಾನ್ಯರೆನಿಸಿದ ಕಾರ್ಯಕರ್ತ ಶ್ರೀನಿವಾಸ ವರ್ಮಾ ನರಸಾಪುರ ಅವರಿಗೆ ಬಿಜೆಪಿ ಎಂಪಿ ಟಿಕೆಟ್ ಕೊಟ್ಟಾಗ ನನಗೆ ಅಶ್ಚರ್ಯವಾಯ್ತು, ಇಂದು ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನವೂ ಸಿಕ್ಕಿದೆ. ಇದೇ ಬಿಜೆಪಿಯ ವಿಶೇಷತೆ. ಅವರಿಗೆ ಸಂಸದ ಸೀಟು ಕೊಟ್ಟಾಗ ನನಗೆ ಅಶ್ಚರ್ಯವಾಯ್ತು  ಅವರೊಬ್ಬ ಸಾಮಾನ್ಯ ವ್ಯಕ್ತಿ, ಅದರೂ ಸಂಸದ ಸೀಟು ಕೊಟ್ಟರು. ಆಗ ನಾನು ಅಲೋಚನೆ ಮಾಡಿದೆ ಹಾಗೂ ಕೇಂದ್ರದಲ್ಲಿ ಮಿತ್ರಪಕ್ಷಗಳ ಮೊದಲ ಸಭೆ ನಡೆದಾಗ ಅವರು ಕೂಡ ಬಂದಿದ್ದರು. ಆಗ ನಾನು ಅವರ ಬಗ್ಗೆ ವಿಚಾರಿಸಿದಾಗ, ಅವರೊಬ್ಬ ಪಕ್ಷಕ್ಕಾಗಿ ತಳಮಟ್ಟದಲ್ಲಿ ಕಷ್ಟಪಟ್ಟು ದುಡಿದ ಸಾಮಾನ್ಯ ಕಾರ್ಯಕರ್ತ ಎಂಬುದು ತಿಳಿಯಿತು. ಒಬ್ಬ ಪಕ್ಷಕ್ಕಾಗಿ ಕೆಲಸ ಮಾಡಿದ ಕಾರ್ಯಕರ್ತನೋರ್ವನಿಗೆ ಬಿಜೆಪಿ ಗುರುತಿಸಿ ಟಿಕೆಟ್ ನೀಡಿದೆ.  ಪಕ್ಷಕ್ಕಾಗಿ ದುಡಿದ ಕಾರ್ಯಕರ್ತನನ್ನು ಗುರುತಿಸಿದ ಪಕ್ಷ ಅಂದರೆ ಅದು ಬಿಜೆಪಿ ಎಂದು ಚಂದ್ರಬಾಬು ನಾಯ್ಡು ಅವರು ಹೇಳಿದ್ದಾರೆ.

ಆಂಧ್ರ ಪ್ರದೇಶ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಪವನ್ ಕಲ್ಯಾಣ್

ಚಂದ್ರಬಾಬು ನಾಯ್ಡು ಅವರು ಬಿಜೆಪಿ ಬಗ್ಗೆ ಮಾತನಾಡಿದ ಈ ವೀಡಿಯೋ ಈಗ ಸಖತ್ ವೈರಲ್ ಆಗುತ್ತಿದೆ. ಅಂದಹಾಗೆ ಶ್ರೀನಿವಾಸ ನರಸಾಪುರ ಅವರು ಕೇಂದ್ರದಲ್ಲಿ ಸ್ಟೀಲ್‌ ಹಾಗೂ ಹೆವಿ ಇಂಡಸ್ಟ್ರಿ ಇಲಾಖೆಯ ರಾಜ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಇತ್ತ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಲ್ಲಿಯೂ ಮಿತ್ರ ಪಕ್ಷ ಟಿಡಿಪಿ ಪ್ರಮುಖ ಪಾತ್ರವಹಿಸಿದೆ. ಟಿಡಿಪಿಯ ಚಂದ್ರಬಾಬು ನಾಯ್ಡು ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್ ಕೇಂದ್ರದಲ್ಲಿ ಸರ್ಕಾರ ರಚನೆಯಲ್ಲಿ ಕಿಂಗ್ ಮೇಕರ್‌ ಆಗಿದ್ದಾರೆ. ಹಾಗೆಯೇ ಈಗ ರಚನೆಯಾಗಿರುವ ಆಂಧ್ರ ಸರ್ಕಾರವೂ ಕೂಡ ಮೈತ್ರಿಕೂಟವಾಗಿದ್ದು, ಬಿಜೆಪಿ ಒಬ್ಬರು ಹಾಗೂ ಜನಸೇನಾದ 21 ಶಾಸಕರು ಟಿಡಿಪಿಯ ಚಂದ್ರಬಾಬು ನಾಯ್ಡು ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿವೆ.

ಆಂಧ್ರದ ಸಿಎಂ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿರುವ ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್

ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ಗನ್ನವರಂ ಏರ್‌ಪೋರ್ಟ್ ಬಳಿ ಇರುವ ಕೆಸರಪಲ್ಲಿ ಐಟಿ ಪಾರ್ಕ್‌ನಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ರಾಜ್ಯಪಾಲರಾದ ಅಬ್ದುಲ್ ನಜೀರ್ ಅವರು ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಹಾಗೂ 24 ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಸಮಾರಂಭದಲ್ಲಿ ಪ್ರಧಾನಿ ಮೋದಿ, ಅಮಿತ್ ಷಾ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಅವರ ಪತ್ನಿ, ತೆಲುಗು ನಟ ನಂದಮುರಿ ಬಾಲಕೃಷ್ಣ, ನಟ ಚಿರಂಜೀವಿ, ನಿತಿನ್ ಗಡ್ಕರಿ, ತೆಲಂಗಾಣ ಮಾಜಿ ಗವರ್ನರ್ ತಮಿಳ್ ಸೆಲ್ವಿ, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

ನಾಯ್ಡು ಅವರ ಸಚಿವ ಸಂಪುಟದಲ್ಲಿ 17 ಹೊಸ ಮುಖಗಳಿಗೆ ಜಾಗ ನೀಡಲಾಗಿದೆ. ಉಳಿದವರು ಈ ಹಿಂದೆಯೂ ಸಚಿವರಾಗಿ ಕೆಲಸ ಮಾಡಿದ ಅನುಭವ ಇರುವವರಾಗಿದ್ದಾರೆ.  ಹಾಗೆಯೇ ಸಚಿವ ಸಂಪುಟದಲ್ಲಿ ಮೂವರು ಮಹಿಳೆಯರಿಗೂ ಸ್ಥಾನ ನೀಡಲಾಗಿದೆ. ಬಿಜೆಪಿ ಶಾಸಕ ಸತ್ಯ ಕುಮಾರ್ ಯಾದವ್ ಅವರು ಆಂಧ್ರ ಪ್ರದೇಶ ಸರ್ಕಾರದಲ್ಲಿ ಸಚಿವರಾದ ಬಿಜೆಪಿಯ ಏಕೈಕ ನಾಯಕರಾಗಿದ್ದಾರೆ. ಹಾಗೆಯೇ ಜನಸೇನಾ ಪಕ್ಷದ ಪವನ್ ಕಲ್ಯಾಣ್ ನಂದೆಂಡ್ಲಾ ಮನೋಹರ್ ಹಾಗೂ ಕಂಡುಲಾ ದುರ್ಗೇಶ್ ಅವರು ಕೂಡ ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 

 

Latest Videos
Follow Us:
Download App:
  • android
  • ios