Asianet Suvarna News Asianet Suvarna News

ಶಾಸಕಿಯಾಗಿ ಅನಿತಾ ಕುಮಾರಸ್ವಾಮಿ ಶಪಥ

ರಾಮನಗರ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಶಾಸಕಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

Anitha Kumaraswamy Took Oath As MLA
Author
Bengaluru, First Published Nov 16, 2018, 8:47 AM IST

ಬೆಂಗಳೂರು :  ಉಪಚುನಾವಣೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರದಿಂದ ಜಯಗಳಿಸಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಶಾಸಕರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸೌಧದ ಸಭಾಧ್ಯಕ್ಷ ರಮೇಶ್‌ ಕುಮಾರ್‌ ಕಚೇರಿಯಲ್ಲಿ ಭಗವಂತ ಮತ್ತು ಸತ್ಯ ನಿಷ್ಠೆ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸಭಾಧ್ಯಕ್ಷ ರಮೇಶ್‌ ಕುಮಾರ್‌ ಪ್ರತಿಜ್ಞಾ ವಿಧಿ ಬೋಧಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರಕ್ಕೆ ನಾನೇ ಮೊದಲ ಮಹಿಳಾ ಶಾಸಕಿ. ಪತಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದು, ಅವರ ಮಾರ್ಗದರ್ಶನದಲ್ಲಿ ಕ್ಷೇತ್ರದ ಅಭಿವೃದ್ಧಿ ಕೆಲಸ ಮಾಡುತ್ತೇನೆ. ಕ್ಷೇತ್ರದ ಜನತೆಯ ನಿರೀಕ್ಷೆಗೆ ತಕ್ಕಂತೆ ರಾಮನಗರ ಕ್ಷೇತ್ರವನ್ನು ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ. ಅವರಿಗೆ ನಾನು ಋುಣಿಯಾಗಿರುತ್ತೇನೆ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಒಂದು ವೇಳೆ ಜವಾಬ್ದಾರಿ ನೀಡಿದರೆ ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ಆದರೆ, ಸಚಿವ ಸ್ಥಾನಕ್ಕೆ ಬೇಡಿಕೆ ಇಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ವೇಳೆ ಸಾರಿಗೆ ಡಿ.ಸಿ.ತಮ್ಮಣ್ಣ, ಶಾಸಕ ಕೆ.ಗೋಪಾಲಯ್ಯ, ಬಿಬಿಎಂಪಿ ಸದಸ್ಯ ಇಮ್ರಾನ್‌ ಪಾಷಾ ಸೇರಿದಂತೆ ರಾಮನಗರ ಕ್ಷೇತ್ರದ ಜೆಡಿಎಸ್‌ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.

Follow Us:
Download App:
  • android
  • ios