ಪಕ್ಷ ವಿರೋಧಿ ಚಟುವಟಿಕೆ, ಗುಬ್ಬಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಪ್ರಸನ್ನಕುಮಾರ್ ಉಚ್ಛಾಟನೆ

ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಸನ್ನ ಕುಮಾರ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದರು ಎಂಬ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ.

anti party activity Gubbi constituency Congress ticket aspirants Prasanna Kumar expelled gow

ತುಮಕೂರು (ಏ.5): ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಸನ್ನ ಕುಮಾರ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದರು ಎಂಬ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ. ಈ ಮೂಲಕ ಹೊಸದಾಗಿ ಪಕ್ಷ ಸೇರ್ಪಡೆಗೊಂಡ‌ ಮಾಜಿ ಶಾಸಕ ಎಸ್.ಆರ್. ಶ್ರೀನಿವಾಸ್ ವಿರುದ್ದ ಧ್ವನಿ ಎತ್ತುವವರಿಗೆ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ.

ಜೆಡಿಎಸ್ ಗೆ ರಾಜಿನಾಮೆ ನೀಡಿದ ಎಸ್.ಆರ್.ಶ್ರೀನಿವಾಸ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳದಂತೆ ವರಿಷ್ಠರ ಮೇಲೆ ಒತ್ತಡ ಹೇರಿದ್ದ ಪ್ರಸನ್ನಕುಮಾರ್ ಅವರು ಮೂಲ ಕಾಂಗ್ರೆಸ್ ಮುಖಂಡರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದರು.

ಬಿಜೆಪಿ ಮುಖಂಡ Yogesh Gowda ಹತ್ಯೆ ಪ್ರಕರಣ, ಬಿರಾದಾರ್‌ ಮಾಫಿ ಸಾಕ್ಷಿಗೆ ಹೈಕೋರ್ಟ್ ಒಪ್ಪಿಗೆ

ಅಲ್ಲದೆ ಎಸ್.ಆರ್.ಶ್ರೀನಿವಾಸ್ ಅವರನ್ನು ಕಾಂಗ್ರೆಸ್ ಗೆ ಸೇರಿಸಿಕೊಳ್ಳಬಾರದೆಂದು ಮಾಧ್ಯಮಗೋಷ್ಠಿ ನಡೆಸಿ ವಿರೋಧ ವ್ಯಕ್ತಪಡಿಸಿದ್ದರು ಪ್ರಸನ್ನಕುಮಾರ್. ಅಲ್ಲದೆ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ದತೆ ಕೂಡ  ನಡೆಸಿದ್ದರು. ಹಿನ್ನೆಲೆಯಲ್ಲಿ ಪ್ರಸನ್ನ ಕುಮಾರ್ ಅವರನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಮಾನತುಗೊಳಿ ಆದೇಶ ಹೊರಡಿಸಿದ್ದಾರೆ.

BENGALURU: ವಿಚ್ಛೇದನದ ಬಳಿಕ ಒಂಟಿ ಹೆಣ್ಣಿನ ಬಾಳಿಗೆ ಸಂಗಾತಿಯಾದ, ಕೊಂದು ಗುರುತೇ ಸಿಗದಂತೆ ಸುಟ್ಟ!

ಮಾಜಿ ಶಾಸಕ ಶ್ರೀನಿವಾಸ್ ಅವರನ್ನು ಗೆಲ್ಲಿಸಲು ಒಗ್ಗೂಡಿ ಕೆಲಸ ಮಾಡುವಂತೆ ಪಕ್ಷದ ಮುಖಂಡರಿಗೆ ವರಿಷ್ಠರು ಸೂಚನೆ ನೀಡಿದ್ದರೂ, ವರಿಷ್ಠರ ಸೂಚನೆಯನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬಂಡಾಯ ಶಮನಗೊಳಿಸಲು ಪ್ರಸನ್ನಕುಮಾರ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಶೇಖರ ಗೌಡ ಸ್ಪಷ್ಟಪಡಿಸಿದ್ದಾರೆ.

Latest Videos
Follow Us:
Download App:
  • android
  • ios