ಲೋಕಸಭಾ ಚುನಾವಣೆಯಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ನಮಗೆ ಪೂರಕ ವಾತಾವರಣವಿದೆ. ಪಕ್ಷ ವಿರೋಧಿ ಕೆಲಸ ಮಾಡಿದರೆ ಸಹಿಸುವುದಿಲ್ಲ ಎಂದು ಪಕ್ಷದ ಎಲ್ಲ ಜನಪ್ರತಿನಿಧಿಗಳು, ಮುಖಂಡರಿಗೆ ಖಡಕ್ ಎಚ್ಚರಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 

ಬೆಂಗಳೂರು(ಮಾ.24):  ಲೋಕಸಭಾ ಚುನಾವಣೆಯಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ನಮಗೆ ಪೂರಕ ವಾತಾವರಣವಿದೆ. ಪಕ್ಷ ವಿರೋಧಿ ಕೆಲಸ ಮಾಡಿದರೆ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ ಎಲ್ಲ ಜನಪ್ರತಿನಿಧಿಗಳು, ಮುಖಂಡರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಲೋಕಸಭಾ ಚುನಾವಣೆಯ ಮೊದಲ ಹಂತದ 14ಕ್ಷೇತ್ರಗಳ ಹಾಲಿ ಮಾಜಿ ಶಾಸಕರು, ಸಚಿವರ, ಮುಖಂಡರೊಂದಿಗಿನ ಸಭೆಯನ್ನು ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಆರಂಭಿಸಲಾಯಿತು.

ಮೊದಲ ದಿನ ಕೋಲಾರ, ಹಾಸನ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಜನ ಪ್ರತಿನಿಧಿಗಳು ಹಾಗೂ ಮುಖಂಡ ರೊಂದಿಗೆ ಉಭಯ ನಾಯಕರು ಸಭೆ ನಡೆಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವಂತೆ ಸೂಚಿಸಿದರು.

Lok Sabha Election 2024: ರಾಜಕೀಯ ವಿರೋಧಿಗಳ ಬೇಟೆಯಾಡಲು ಡಿಕೆಶಿ ರಣತಂತ್ರ

ಈಗಾಗಲೇ ಹಾಸನ ಕ್ಷೇತ್ರದ ಅಭ್ಯರ್ಥಿಯಾಗಿ ಶ್ರೇಯಸ್ ಪಟೇಲ್ ಅವರನ್ನು ಘೋಷಿಸಲಾಗಿದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ಶೀಘ್ರದಲ್ಲೇ ಅಭ್ಯ ರ್ಥಿಯ ಹೆಸರನ್ನು ಪಕ್ಷ ಅಂತಿಮಗೊಳಿಸಿ ಪ್ರಕಟಿಸಲಿದೆ. ಈಮೂರೂ ಕ್ಷೇತ್ರಗಳೂಸೇರಿ ದಂತೆ ಅನೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳುಗೆಲುವಿಗೆ ಪೂರಕವಾತಾವರಣ ಕಂಡುಬರುತ್ತಿದೆ. ಹಾಗಾಗಿ ಆಯಾ ಜಿಲ್ಲಾ ವ್ಯಾಪ್ತಿಯಶಾಸಕರು, ವಿಧಾನ ಪರಿಷತ್‌ ದ ಸ್ಯರು, ಮುಖಂಡರು, ಕಾರ್ಯಕರ್ತರು ಎಲ್ಲ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಟ್ಟಾಗಿ ಕೆಲಸ ಮಾಡಿ. ಹೆಚ್ಚಿನ ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಎಲ್ಲ ರೀತಿಯಲ್ಲೂ ಶ್ರಮಿಸಬೇಕೆಂದರು.

ಇದೇ ವೇಳೆ ಯಾವುದೇ ಪಕ್ಷ ವಿರೋಧಿ ಚಟುವಟಿಕೆಗಳನ್ನು ಸಹಿಸುವುದಿಲ್ಲ. ಅಂತಹ ಮನಸ್ಥಿತಿ ಯಾರಿಗಾದರೂ ಇದ್ದರೆ ಈಗಲೇ ಪಕ್ಷ ಬಿಟ್ಟು ಹೋಗಬಹುದು ಎಂದು ಕೂಡ ಉಭಯ ನಾಯಕರು ಖಡಕ್ ಎಚ್ಚರಿಕೆ ನೀಡಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರತ್ಯೇಕವಾಗಿ ನಡೆದ ಮೂರೂ ಕ್ಷೇತ್ರಗಳ ಮುಖಂಡರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ, ಬೈರತಿ ಸುರೇಶ್, ಡಾ.ಎಂ.ಸಿ.ಸುಧಾಕರ್, ರಾಜ್ಯಸಭೆ ಮಾಜಿ ಸದಸ್ಯ ಜವರೇಗೌಡ, ಶಾಸಕ ಆನಂದ್, ಮಾಜಿ ಸಚಿವ ಶಿವರಾಂ, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಶಾಸಕರಾದ ಪ್ರದೀಪ್ ಈಶ್ವರ್, ಶಿವಲಿಂಗೇಗೌಡ, ಸಂಪಂಗಿ ಮತ್ತಿತರರು ಭಾಗವಹಿಸಿದ್ದರು.