Asianet Suvarna News Asianet Suvarna News

ದೇಶದ್ರೋಹಿ ಕೃತ್ಯ ಯಾರೇ ಮಾಡಿದರೂ ಕ್ಷಮಿಸಲ್ಲ: ಶಾಸಕ ಶರತ್ ಬಚ್ಚೇಗೌಡ

ದೇಶ ದ್ರೋಹದ ಕೃತ್ಯ ಯಾರೇ ಮಾಡಿದ್ರೂ ಅದು ತಪ್ಪು. ಆದ್ದರಿಂದ ಅಂತಹವನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕುರಿತು ಶಾಸಕ ಶರತ್ ಬಚ್ಚೇಗೌಡ ಪ್ರತಿಕ್ರಿಯಿಸಿದರು.

Anyone who commits treason is not excused Says MLA Sharath Bachegowda gvd
Author
First Published Feb 29, 2024, 10:43 PM IST

ಹೊಸಕೋಟೆ (ಫೆ.29): ದೇಶ ದ್ರೋಹದ ಕೃತ್ಯ ಯಾರೇ ಮಾಡಿದ್ರೂ ಅದು ತಪ್ಪು. ಆದ್ದರಿಂದ ಅಂತಹವನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕುರಿತು ಶಾಸಕ ಶರತ್ ಬಚ್ಚೇಗೌಡ ಪ್ರತಿಕ್ರಿಯಿಸಿದರು. ನಗರದ ಟಿಜಿ ಬಡಾವಣೆಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಭೂಮ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಭಾರತ ಮಾತೆ ಎಂದಿಗೂ ಬಿಜೆಪಿಯವರ ಸ್ವತ್ತಲ್ಲ. ಬದಲಾಗಿ ದೇಶದ ಪ್ರತಿಯೊಬ್ಬ ನಾಗರಿಕರ ಸ್ವತ್ತು. ಆದರೆ ದೇಶದ ಮಣ್ಣಿನಲ್ಲಿ ಹುಟ್ಟಿ, ದೇಶದ ಅನ್ನವನ್ನು ತಿಂದು ಇಲ್ಲೆ ಜೀವಿಸುವವರು ಎಂದಿಗೂ ದೇಶ ವಿರೋಧಿ ಕೃತ್ಯ ಮಾಡಬಾರದು. ಅಲ್ಲದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಕಿ ಜೈ ಎಂದು ಘೋಷಣೆ ಕೂಗಿದ ಬಗ್ಗೆ ಸಮಗ್ರ ತನಿಖೆ ಆಗಬೇಕು. ಅವರು ನಿಜವಾಗಿ ಘೋಷಣೆ ಕೂಗಿದ್ದರೆ, ಖಂಡಿತ ಕ್ರಮ ಜರುಗಿಸಬೇಕು ಎಂದು ಹೇಳಿದರು.

KLE ಶಾಲೆ ಉದ್ಘಾಟನೆ: ಡಾಟಾ ಬಳಕೆಯಲ್ಲಿ ನಾವೇ ನಂ.1: ಕೇಂದ್ರ ಸಚಿವ ಜೈಶಂಕರ್

ರಾಜಕೀಯ ಲೇಪನ ಬೇಡ: ಅಲ್ಲದೆ ಯಾರೋ ಒಬ್ಬರು ಘೋಷಣೆ ಕೂಗಿದರು ಎಂದು ಬಿಜೆಪಿಯವರು ವಿನಾಕಾರಣ ರಾಜಕೀಯ ಲೇಪನ ಮಾಡಿ ರಾಜ್ಯಾಧ್ಯಂತ ಪ್ರತಿಭಟನೆ ಮಾಡುವುದು ಸರಿಯಲ್ಲ. ಅಲ್ಲದೆ ಎಲ್ಲರನ್ನೂ ಒಂದೇ ದೃಷ್ಠಿಕೋನದಲ್ಲಿ ನೋಡುವುದು ಸರಿಯಲ್ಲ. ಆದ್ದರಿಂದ ಸಮಗ್ರ ತನಿಖೆ ನಂತರ ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ. ವಿನಾಕಾರಣ ರಾಜಕೀಯಗಿ ಅಸ್ತ್ರವಾಗಿ ಮಾಡಿಕೊಳ್ಳುವುದು ಸರಿಯಲ್ಲ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಅಭಿವೃದ್ದಿಗೆ ಆದ್ಯತೆ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದ ಬಡ, ಮಧ್ಯಮ ವರ್ಗ ಸೇರಿದಂತೆ ಎಲ್ಲಾ ವರ್ಗದ ಸಮಗ್ರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದೆ. ಪ್ರಮುಖವಾಗಿ ಗ್ರಾಮೀಣ ಭಾಗದಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದು, ಹೊಸಕೋಟೆಯನ್ನು ಮಾದರಿ ನಗರವನ್ನಾಗಿ ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದರು.

ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಕ್ರಮ: ನಗರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಅನುದಾನ ಒದಗಿಸಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ನಗರದ ಕೆಕೆ ಬಡಾವಣೆಯಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿ ಹಾಗೂ ನೂತನ ಕೊಳವೆಬಾವಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ನಗರದ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ವಿವಿಧ ವಾರ್ಡ್‌ಗಳಲ್ಲಿ ಸೌಕರ್ಯ ಕಲ್ಪಿಸಲು ಕೋಟ್ಯಂತರ ರು. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. 

ಕಾಂಗ್ರೆಸ್‌ಗೆ ದೇಶಕಿಂತ ದೇಶದ್ರೋಹಿಗಳೇ ಮೆಚ್ಚು: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

ಗುತ್ತಿಗೆದಾರರು ಕಾಮಗಾರಿ ವಿಳಂಬ ಮಾಡದೆ ತ್ವರಿತವಾಗಿ ಪೂರ್ಣಗೊಳಿಸಿ ಗುಣಮಟ್ಟಕ್ಕೆ ಮುಂದಾಗಬೇಕು ಎಂದರು. ಕೆಕೆ ಬಡಾವಣೆಯಲ್ಲಿ ಮಳೆ ಬಂದಾಗ ನೀರು ಸರಾಗವಾಗಿ ಹರಿಯಲಾಗದೆ ಮನೆಗಳಿಗೆ ನುಗ್ಗುವ ಬಗ್ಗೆ ನಾಗರಿಕರು ಶಾಸಕ ಶರತ್ ಬಚ್ಚೇಗೌಡರ ಗಮನ ಸೆಳೆದರು. ಅದಕ್ಕೆ ಮಳೆ ನೀರನ್ನು ವರದಾಪುರ ಕೆರೆಗೆ ಸೇರುವಂತೆ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದರು. ಈ ವೇಳೆ ಉದ್ಯಮಿ ಬಿವಿ ಬೈರೇಗೌಡ, ಮುಖಂಡರಾದ ಡಾ.ಎಚ್.ಎಂ. ಸುಬ್ಬರಾಜ್, ಡಿಸಿ ನಾಗರಾಜ್, ನಿಸಾರ್ ಅಹಮದ್, ಹರೀಶ್ ಗೌಡ, ಮೋಹನ್ ಬಾಬು, ಕುಮಾರ್, ಸವಿತಾ ಶ್ರೀನಿವಾಸ್, ಪುಷ್ಪಮ್ಮ, ಸಾವಿತ್ರಿ, ಪವಿತ್ರ, ಗುತ್ತಿಗೆದಾರ ಈರಣ್ಣ, ತಗ್ಲಿ ನಾರಾಯಣಸ್ವಾಮಿ ಇತರರು ಹಾಜರಿದ್ದರು.

Follow Us:
Download App:
  • android
  • ios