ಪಕ್ಷದ 18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯುವಂತೆ ಕೋರಿ ಪ್ರತಿಪಕ್ಷ ಬಿಜೆಪಿ ನಾಯಕರ ನಿಯೋಗ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಬೆಂಗಳೂರು (ಏ.22): ಪಕ್ಷದ 18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯುವಂತೆ ಕೋರಿ ಪ್ರತಿಪಕ್ಷ ಬಿಜೆಪಿ ನಾಯಕರ ನಿಯೋಗ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿದೆ. ಪ್ರತಿಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಶಾಸಕರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಸಿ.ಕೆ.ರಾಮಮೂರ್ತಿ, ಮುನಿರಾಜು ಮತ್ತಿತರರು ವಿಧಾನಸೌಧದಲ್ಲಿ ಸ್ಪೀಕರ್ ಕಚೇರಿಗೆ ತೆರಳಿ ಕೆಲಕಾಲ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ವಿಧಾನಸಭೆಯಲ್ಲಿ ನಡೆದ ಘಟನೆ ವಿಧಾನಸಭೆಗೆ ಸೀಮಿತವಾಗಬೇಕಿತ್ತು. ಇದು ಮುಂದುವರೆದು ಸಮಿತಿ ಸಭೆಗಳಿಗೂ ಅಮಾನತು ಆದೇಶ ಅನ್ವಯಯವಾಗುವಂತೆ ಮಾಡಿರುವುದು ಸರಿಯಲ್ಲ ಎಂದರು.
ಈ ರೀತಿಯ ಘಟನೆ ಇದೇ ಮೊದಲ ಬಾರಿ ನಡೆದಿಲ್ಲ. ಹಿಂದೆಯೂ ಇಂಥ ಅನೇಕ ಘಟನೆಗಳು ನಡೆದಿವೆ. ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರುವ ಉದ್ದೇಶ ಪಕ್ಷದ ಶಾಸಕರಿಗೆ ಇರಲಿಲ್ಲ. ಸಚಿವ ಕೆ.ಎನ್.ರಾಜಣ್ಣ ಅವರ ಹನಿಟ್ರ್ಯಾಪ್ ವಿಷಯ ಮುಂದಿಟ್ಟುಕೊಂಡು ನಾವು ಒಂದು ಪ್ರತಿಪಕ್ಷವಾಗಿ ಹೋರಾಟ ಮಾಡಿದ್ದೇವೆ ಅಷ್ಟೇ ಎಂಬುದನ್ನು ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಹೇಳಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅಶೋಕ್, ಈ ಬಗ್ಗೆ ಪರಿಶೀಲಿಸಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರೊಂದಿಗೆ ಚರ್ಚಿಸಿ ತಿಳಿಸುವುದಾಗಿ ಸ್ಪೀಕರ್ ಖಾದರ್ ಅವರು ಭರವಸೆ ನೀಡಿದ್ದಾರೆ. ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.
ಅಭಿವೃದ್ಧಿ ಕೆಲಸಗಳಲ್ಲಿ ರಾಜ್ಯ ಸರ್ಕಾರ ಫೇಲ್: ಜನಾಕ್ರೋಶ ಸಭೆಯಲ್ಲಿ ನಿರೀಕ್ಷೆ ಮಾಡದಷ್ಟು ಜನರು ಪಾಲ್ಗೊಂಡಿದ್ದರು. ರಾಜ್ಯಾಧ್ಯಕ್ಷರ ನೇತೃತ್ವದ ಹೋರಾಟಕ್ಕೆ ಪೂರಕವಾದ ಸಭೆ ಮಾಡಿದ್ದಾರೆ. ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ನು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ಸರ್ಕಾರ ಸಂಪೂರ್ಣವಾಗಿ ಫೇಲ್ ಆಗಿದೆ. ಅಭಿವೃದ್ಧಿ ಕೆಲಸ ಮಾಡಲಾಗದೆ ಸಿಎಂ ಅವರೇ ಹಣೆ ಹಣೆ ಚಚ್ಚಿಕೊಳ್ತಿದ್ದಾರೆ. ಕಾಂಗ್ರೆಸ್ ಶಾಸಕರು ಬಾರಿ ಬಾಯಿ ಬಡ್ಕೊಳ್ತಿದಾರೆ.
ಜನಿವಾರ ತೆಗೆಸಿದ ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ
ಹಳ್ಳಿಗಳಲ್ಲಿನ ರಸ್ತೆಗಳಲ್ಲಿ ಎಮ್ಮೆಗಳು ಸಹ ತಿರುಗಾಡದಂತಾಗಿದೆ. ಅಂತಹ ರಸ್ತೆಗಳಲ್ಲಿ ಜನರು ಓಡಾಡಲು ಆಗುತ್ತಿಲ್ಲ. ಹೀಗಾಗಿಯೇ ನಾವು ಕಾಂಗ್ರೆಸ್ ಸರ್ಕಾರದ ಭಷ್ಟಾಚಾರದ ವಿರುದ್ಧ ಹೋರಾಟ ಮಾಡಿದ್ದೇವೆ. ಇದುವರೆಗೂ ನಡೆದ ಜನಾಕ್ರೋಶ ಕಾರ್ಯಕ್ರಮಗಳಲ್ಲಿ ವಿಜಯಪುರದಲ್ಲೇ ನಂಬರ್ ಒನ್ ಆಗಿದೆ ಎಂದು ರಾಜ್ಯಾಧ್ಯಕ್ಷರೇ ಹೇಳಿದ್ದಾರೆ, ಇದಕ್ಕಿಂದ ಇನ್ನೇನು ಬೇಕು ಎಂದು ತಿಳಿಸಿದರು. ಶಾಸಕ ಯತ್ನಾಳ ಹಿರಿಯರಿಗೆ ಕೇವಲವಾಗಿ ಮಾತನಾಡುವ ವಿಚಾರದ ಬಗ್ಗೆ ಮಾತನಾಡಿ, ರಾಜಕಾರಣದಲ್ಲಿ ಯಾವಾಗಲೂ ಬೈದಿರುವ ವ್ಯಕ್ತಿ ದೊಡ್ಡವನಾಗಲ್ಲ, ಬೈಸಿಕೊಂಡವನು ಮಾತ್ರ ಬೆಳೆಯುತ್ತಾನೆ. ನನ್ನ ಹಿಂದೆ ಹಣವಿದೆ. ಜಾತಿಇದೆ ಎಂದು ಹೋದರೆ ಆಗೋದಿಲ್ಲ. ವ್ಯಕ್ತಿಗಿಂತ ಪಕ್ಷ ದೊಡ್ಡದು ಎನ್ನುವುದನ್ನು ಅರಿಯಬೇಕು ಎಂದು ಎಚ್ಚರಿಸಿದರು.
