ಹೊಸಪೇಟೆ: ಕಾಂಗ್ರೆಸ್‌ನ ಇಬ್ಬರು ಮಹಿಳಾ ಮುಖಂಡರ ಗಲಾಟೆ, ಯೋಗಲಕ್ಷ್ಮೀ ಸೇರಿ ಇಬ್ಬರ ಬಂಧನ
ಹೋಟೆಲ್‌ನಿಂದ ಹೊರ ಹೋಗುವಾಗ ತನ್ನ ಮೇಲೆ ಯೋಗಲಕ್ಷ್ಮೀ ಹಾಗೂ ಆತನ ಬೆಂಬಲಿಗ ಸಂದೀಪ್ ಎಂಬವರು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ ಕಾಂಗ್ರೆಸ್ ಪಕ್ಷದ ಕಲ್ಯಾಣ ಕರ್ನಾಟಕ ಸಂಘಟನಾ ಕಾರ್ಯದರ್ಶಿ ಡಿ.ಶಿಲ್ಪಾ.
ಹೊಸಪೇಟೆ(ಜ.05): ನಗರದ ಮಲ್ಲಿಗೆ ಹೋಟೆಲ್ ಆವರಣದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಟಿಕೆಟ್ ಆಕಾಂಕ್ಷಿಗಳ ಸಭೆಯ ವೇಳೆ ಕಾಂಗ್ರೆಸ್ ಪಕ್ಷದ ಇಬ್ಬರು ಮಹಿಳಾ ಮುಖಂಡರು ಗಲಾಟೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಪೇಟೆ ಬ್ಲಾಕ್ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷೆ ಯೋಗಲಕ್ಷ್ಮೀ ಸೇರಿ ಇಬ್ಬರನ್ನು ಪಟ್ಟಣ ಠಾಣೆ ಪೊಲೀಸರು ಇಂದು(ಬುಧವಾರ) ಬಂಧಿಸಿದ್ದಾರೆ.
ನಗರದ ಮಲ್ಲಿಗೆ ಹೋಟೆಲ್‌ನಲ್ಲಿ ಎಐಸಿಸಿ ಕಾರ್ಯದರ್ಶಿ ಶ್ರೀಧರ್ ಬಾಬು ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ನಡೆದ ಆಕಾಂಕ್ಷಿಗಳ ಸಭೆಯ ವೇಳೆ ಇಬ್ಬರು ಮಹಿಳಾ ಕಾರ್ಯಕರ್ತೆಯರ ನಡುವೆ ಗಲಾಟೆ ನಡೆದಿತ್ತು.
ಬಳಿಕ ಹೋಟೆಲ್‌ನಿಂದ ಹೊರ ಹೋಗುವಾಗ ತನ್ನ ಮೇಲೆ ಯೋಗಲಕ್ಷ್ಮೀ ಹಾಗೂ ಆತನ ಬೆಂಬಲಿಗ ಸಂದೀಪ್ ಎಂಬವರು ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಕಲ್ಯಾಣ ಕರ್ನಾಟಕ ಸಂಘಟನಾ ಕಾರ್ಯದರ್ಶಿ ಡಿ.ಶಿಲ್ಪಾ ಎಂಬವರು ಪೊಲೀಸರಿಗೆ ದೂರು ನೀಡಿದ್ದರು.
ಸಿಎಂ ಬೊಮ್ಮಾಯಿಯನ್ನು ನಾಯಿಗೆ ಹೋಲಿಸಿದ ಸಿದ್ದರಾಮಯ್ಯ
ಜ.3ರಂದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಕೈಗೊಂಡು, ಯೋಗಲಕ್ಷ್ಮೀ ಮತ್ತು ಸಂದೀಪ್ ಎಂಬವರನ್ನು ಬಂಧಿಸಿದ್ದಾರೆ. ಈ ವೇಳೆ ಯೋಗಲಕ್ಷ್ಮೀ ಕೂಡ ಡಿ.ಶಿಲ್ಪಾ ಹಾಗೂ ಇತರೆ ಇಬ್ಬರ ವಿರುದ್ಧ ಪ್ರತಿ ದೂರು ಸಲ್ಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.