ಸಿಎಂ ಸಿದ್ದರಾಮಯ್ಯರದ್ದು ದುರಹಂಕಾರಿ ವರ್ತನೆ: ಪ್ರಲ್ಹಾದ್‌ ಜೋಶಿ ಕಿಡಿ

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯಿಂದ ಹಿಂಪಡೆಯದಂತೆ ಬಿಜೆಪಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲು ಮುಂದಾದರೆ ಸ್ವೀಕರಿಸದೆ ದುರಹಂಕಾರದಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕಿಡಿಕಾರಿದರು.

Arrogant attitude of CM Siddaramaiah Says Pralhad Joshi gvd

ಹುಬ್ಬಳ್ಳಿ (ಅ.14): ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯಿಂದ ಹಿಂಪಡೆಯದಂತೆ ಬಿಜೆಪಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲು ಮುಂದಾದರೆ ಸ್ವೀಕರಿಸದೆ ದುರಹಂಕಾರದಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕಿಡಿಕಾರಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿಯ ಭದ್ರತೆ ನೆಪದಲ್ಲಿ ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರನ್ನು ಪೊಲೀಸರಿಂದ ತಡೆಯುವ ಕೆಲಸ ಮಾಡಲಾಗಿದೆ. ಆದರೆ, ಬಂಧಿಸಿ ಜೈಲಿಗಟ್ಟಿದರೂ ಸರಿ, ನಾವು ಮನವಿ ಸಲ್ಲಿಸಿಯೇ ಸಲ್ಲಿಸುತ್ತೇವೆ ಎಂದು ಸವಾಲು ಹಾಕಿದರು.

ವಿಜಯೇಂದ್ರ ಪುರೋಹಿತನಾ? ಜ್ಯೋತಿಷಿನಾ?: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿಗೆ ಬಿಜೆಪಿ ಮನವಿ ಸಲ್ಲಿಸುವುದು ತಪ್ಪೇ? ಸಿದ್ದರಾಮಯ್ಯ ಅವರು ಮನವಿ ಸ್ವೀಕರಿಸಲೇಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳ್ಳುತ್ತದೆ. ಅವರು ನಮ್ಮ ಶಾಸಕರ, ಕಾರ್ಯಕರ್ತರ ಮನವಿ ಸ್ವೀಕರಿಸದಿದ್ದರೆ ಮತಾಂಧ ಇಸ್ಲಾಮಿಕ್‌ ಭಯೋತ್ಪಾದಕರಿಗೆ ಬೆಂಬಲವಾಗಿ ನಿಂತಿರುವುದು ಸಾಬೀತಾದಂತೆ ಎಂದು ಎಚ್ಚರಿಕೆ ನೀಡಿದರು.

ಹಿಂದೆ ಜೆ.ಎಚ್. ಪಟೇಲ್, ಎಸ್.ಎಂ. ಕೃಷ್ಣ, ಧರ್ಮಸಿಂಗ್ ಅವರಿದ್ದಾಗ ನಾವು ಮನವಿ ಸಲ್ಲಿಸಲಿಲ್ಲವೇ? ಅಷ್ಟೇ ಏಕೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಕಾಂಗ್ರೆಸ್‌ನವರು ಮನವಿ ಸ್ವೀಕರಿಸಲಿಲ್ಲವೇ ಎಂದು ಪ್ರಶ್ನಿಸಿದ ಜೋಶಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ದುರಹಂಕಾರದಿಂದ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂ ದೇಗುಲಗಳಿಗಾಗಿ ನಮ್ಮಂಥ ಯೋಜನೆ ಬಿಜೆಪಿಗರು ತಂದಿಲ್ಲ: ಸಿದ್ದರಾಮಯ್ಯ ಟಾಂಗ್‌

ವೋಟ್ ಬ್ಯಾಂಕ್ ರಾಜಕಾರಣ?: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುವುದು ಖಚಿತವಾಗುತ್ತಲೇ ಸಿದ್ದರಾಮಯ್ಯ ಅವರು ಗಾಂಧಿದ್ವಯರನ್ನು ಮೆಚ್ಚಿಸಿಕೊಳ್ಳಲು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ಈ ಮೂಲಕ ಮುಡಾ ಹಗರಣ, ಹೋರಾಟದ ವಿಷಯಾಂತರ ಮಾಡಲು ಯತ್ನಿಸುತ್ತಿದ್ದಾರೆ ಎಂದು ಜೋಶಿ ಆರೋಪಿಸಿದರು.

Latest Videos
Follow Us:
Download App:
  • android
  • ios