ಬಿಜೆಪಿಯಲ್ಲಿ ಯಡಿಯೂರಪ್ಪರನ್ನ ನಿರ್ಲಕ್ಷ್ಯ ಮಾಡಲಾಗ್ತಿದ್ಯಾ: ಅರುಣ್‌ ಸಿಂಗ್‌ ಹೇಳಿದ್ದಿಷ್ಟು

ಮತ್ತೊಮ್ಮೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ:  ಅರುಣ್‌ ಸಿಂಗ್‌ ವಿಶ್ವಾಸ

Arun Singh Talks Over Former CM BS Yediyurappa grg

ಬೆಳಗಾವಿ(ಅ.18):  ಕರ್ನಾಟಕದಲ್ಲಿ ಪ್ರಚಂಡ ಬಹುಮತದಿಂದ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, 150ಕ್ಕೂ ಅಧಿಕ ಬಿಜೆಪಿ ಸ್ಥಾನಗಳು ಬರಲಿವೆ. ರಾಜ್ಯದಲ್ಲಿ ವಿಜಯ ಸಂಕಲ್ಪ ಯಾತ್ರೆ ಮಾಡುತ್ತಿದ್ದೇವೆ. ಇದಕ್ಕೆ ಜನರಿಂದ, ಕಾರ್ಯಕರ್ತರಿಂದ ಉತ್ತಮ ಬೆಂಬಲ ಸಿಗುತ್ತಿದೆ. ಮೋದಿ, ಬೊಮ್ಮಾಯಿ ಸರ್ಕಾರದ ಸಾಧನೆ ಜನರಿಗೆ ತಲುಪಿಸುತ್ತೇವೆ. ದೇಶದಲ್ಲಿ ಬಿಜೆಪಿ ಪರ ಗೆಲುವಿನ ಟ್ರೆಂಡ್‌ ಇದೆ ಎಂದರು.

ಗೋವಾ, ಉತ್ತರಾಖಾಂಡ, ಮಣಿಪುರ, ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿದ್ದೇವೆ. ಹಿಮಾಚಲ ಮತ್ತು ಗುಜರಾತಿನಲ್ಲೂ ಬಿಜೆಪಿ ಸರ್ಕಾರ ರಚನೆ ಮಾಡುತ್ತೇವೆ. ಕಾಂಗ್ರೆಸ್‌ ಸೋಲುವ ಸ್ಥಿತಿಯಲ್ಲಿದೆ. ಬಿಜೆಪಿ ಗೆಲ್ಲುವ ಸ್ಥಿತಿಯಲ್ಲಿದೆ. ಕರ್ನಾಟಕದಲ್ಲಿ ಮೊದಲಿಗಿಂತ ಅಧಿಕ ಸ್ಥಾನ ಗೆದ್ದು ಸರ್ಕಾರ ಮಾಡುತ್ತೇವೆ. ಬಿಜೆಪಿ ಗೆಲುವಿನ ಹಾದಿಯಲ್ಲಿ ಇದ್ದರೆ ಕಾಂಗ್ರೆಸ್‌ ಸೋಲು ಹಾದಿಯಲ್ಲಿದೆ ಎಂದು ಹೇಳಿದರು.

ಮತ್ತೆ ಸಂಕಷ್ಟದಲ್ಲಿ ರಾಜಸ್ಥಾನ ಕಾಂಗ್ರೆಸ್ ಸರ್ಕಾರ, ವಿಶ್ವಾಸ ಮತ ಯಾಚನೆಗೆ ಸರ್ಕಸ್!

ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ನಿರ್ಲಕ್ಷ ಮಾಡುತ್ತಿಲ್ಲ. ಅವರು ವಿಜಯ ಸಂಕಲ್ಪ ಯಾತ್ರೆಯಲ್ಲಿ ಹೋಗುತ್ತಿದ್ದಾರೆ.ಯಡಿಯೂರಪ್ಪ ನಾಲ್ಕು ಬಾರಿ ಮುಖ್ಯಮಂತ್ರಿ ಆಗಿದ್ದಾರೆ. ಅನೇಕ ಬಾರಿ ವಿರೋಧ ಪಕ್ಷ ಪಕ್ಷದ ನಾಯಕರು ಆಗಿದ್ದರು. ಯಡಿಯೂರಪ್ಪ ಕರ್ನಾಟಕದ ಬಹಳ ದೊಡ್ಡ ಮತ್ತುಜನಪ್ರಿಯ ನಾಯಕರಾಗಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ 150 ಸ್ಥಾನ ಪಡೆಯಲು ಶ್ರಮಿಸುತ್ತಿದ್ದಾರೆ ಎಂದರು.

ಸಚಿವ ಸಂಪುಟ ವಿಸ್ತರಣೆ ಆದಷ್ಟುಬೇಗ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗೋಕಾಕ ಶಾಸಕ ರಮೇಶ ಜಾರಕಿಹೊಳಿ ನನ್ನ ಸ್ನೇಹಿತರು. ಜನರ ಕಾಳಜಿ ಉಳ್ಳವರು ಆಗಿದ್ದಾರೆ. ಅವರೊಂದಿಗೆ ಭಾನುವಾರ ರಾತ್ರಿ ಚರ್ಚೆ ಮಾಡಿದ್ದೇನೆ. ಸಾಮಾನ್ಯವಾಗಿ ಎಲ್ಲರೊಂದಿಗೆ ನಮ್ಮ ಚರ್ಚೆ ಆಗುತ್ತದೆ. ಸಚಿವ ಕಾರಜೋಳ ಅವರು ಪಕ್ಷಕ್ಕೆ ಮಾರ್ಗದರ್ಶನ ಮಾಡುತ್ತಾರೆ, ಅವರೊಂದಿಗೆ ಚರ್ಚೆ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು, ಕಾಂಗ್ರೆಸ್‌ ಸೋಲಿಸಲು ರಮೇಶ ಜಾರಕಿಹೊಳಿ ಪಾತ್ರ ಪ್ರಮುಖ ಪತ್ರವಹಿಸಲಿದ್ದಾರೆ ಎಂದರು.

ಬಿಜೆಪಿ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಬಿಜೆಪಿ ಎಲ್ಲಾ ನಾಯಕರು, ಕಾರ್ಯಕರ್ತರು ಒಂದಾಗಿ ಇದ್ದಾರೆ. ಗುಂಪುಗಾರಿಕೆ ಏನೇ ಇದ್ದರೂ ಕಾಂಗ್ರೆಸ್‌ ಪಕ್ಷದಲ್ಲಿ ಇದೆ. ಡಿ.ಕೆ.ಶಿವಕುಮಾರ, ಸಿದ್ದರಾಮಯ್ಯ ಅವರ ಬಣಗಳಿವೆ. ರಾಹುಲ್‌ ಗಾಂಧಿ ಇಬ್ಬರೂ ನಾಯಕರ ಕೈ ಜೋಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೂ ಇಬ್ಬರೂ ನಾಯಕರು ಒಬ್ಬರಿಗೊಬ್ಬರು ಕಣ್ಣಲ್ಲಿ ಕಣ್ಣಿಟ್ಟು ನೋಡುತ್ತಿಲ್ಲ. ಜಗಳ, ಕಿತ್ತಾಟ ಕಾಂಗ್ರೆಸ್‌ ನಲ್ಲಿ ಇದೆ. ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ. ಬಿಜೆಪಿ ನಾಯಕರು, ಕಾರ್ಯಕರ್ತರಲ್ಲಿ ಗುಂಪುಗಾರಿಕೆ ಇಲ್ಲ ಎಂದು ಅವರು ಹೇಳಿದರು.

ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿನ ಭಿನ್ನಮತ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಬಣಗಳಿಲ್ಲ. ಕಾರ್ಯಕರ್ತರ ನಡುವೆ ಭಿನ್ನಾಭಿಪ್ರಾಯ ಇರಲೇಬೇಕು. ಇವೆ. ಮನೆಯಲ್ಲೂ ಭಿನ್ನಾಭಿಪ್ರಾಯ ಇರುತ್ತವೆ. ಅದೇ ರೀತಿ ಪಕ್ಷದಲ್ಲೂ ಇರುತ್ತವೆ. ಮನಸ್ಸಿನಿಂದ ಎಲ್ಲರೂ ಒಂದಾಗಿಯೇ ಇದ್ದಾರೆ. ಪ್ರಜಾಪ್ರಭುತ್ವ ದಲ್ಲಿ ಭಿನ್ನವಾದ ಅಭಿಪ್ರಾಯ ಇರಲೇಬೇಕು. ಮನಸ್ಸಿನಿಂದ ಯಾವುದೇ ಭೇದ ಭಾವ ಇಲ್ಲ ಎಂದರು.

ವಿರೋಧಪಕ್ಷ ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್ ಹೆಣಗಾಟ; ಬಿ.ವೈ.ವಿಜಯೇಂದ್ರ ವ್ಯಂಗ್ಯ

ಪಂಚಮಸಾಲಿ ಮೀಸಲಾತಿ ಹೋರಾಟ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಹೆಚ್ಚಳ ಮಾಡಿದೆ. ಕಾಂಗ್ರೆಸ್‌ ಎಂದಿಗೂ ಮೀಸಲಾತಿ ಹೆಚ್ಚಿಸುವ ಕೆಲಸವನ್ನ ಮಾಡಲಿಲ್ಲ. ಪಂಚಮಸಾಲಿ ಸಮುದಾಯದ ಮೂರು ದೊಡ್ಡ ನಾಯಕರು ಮಂತ್ರಿಗಳಿದ್ದಾರೆ. ಮುರುಗೇಶ ನಿರಾಣಿ, ಸಿ.ಸಿ.ಪಾಟೀಲ್‌, ಶಂಕರ ಪಾಟೀಲ್‌ ಮುನೆನಕೊಪ್ಪ ಇವರು ಪಂಚಮಸಾಲಿ ಸಚಿವರಿದ್ದಾರೆ. ಆದರೆ, ಪಂಚಮಸಾಲಿ ಸಮುದಾಯದ ಜನರ ಬೇಡಿಕೆ ಬಗ್ಗೆ ಕುಳಿತು ಸಮಾಲೋಚನೆ ಮಾಡುತ್ತೇವೆ ಎಂದು ಹೇಳಿದರು.

ಯತ್ನಾಳಗೆ ನೋಟಿಸ್‌

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಮಂತ್ರಿ ಮಾಡಿಲ್ಲ ಎಂಬ ಕಾರಣಕ್ಕೆ ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡುತ್ತ ಬಂದಿದ್ದಾರೆ. ಯಾರೇ ಆದರೂ ಪಕ್ಷದ ಚೌಕಟ್ಟಿನಲ್ಲಿ ಮಾತನಾಡಬೇಕು. ಪಕ್ಷದ ಹಿರಿಯ ನಾಯಕರನ್ನ ಪಕ್ಷದಲ್ಲಿ ಗೌರವಿಸಬೇಕು. ಪಕ್ಷಕ್ಕೆ ಮುಜುಗುರವಾಗುವಂತಹ ಹೇಳಿಕೆ ನೀಡಿರುವ ಯತ್ನಾಳಗೆ ನೋಟಿಸ್‌ ಜಾರಿ ಮಾಡಲಾಗಿದೆ. ಈ ರೀತಿ ಹೇಳಿಕೆ ನೀಡದಂತೆ ಈಗಾಗಲೇ ವಾರ್ನಿಂಗ್‌ ಮಾಡಲಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಶಿಸ್ತುಪಾಲನಾ ಕಮೀಟಿ ಸೂಕ್ತ ನಿರ್ಧಾರ ಮಾಡಲಿದೆ. ಯಾರು ತಮ್ಮ ಸ್ವಾರ್ಥವನ್ನ ಇಟ್ಟುಕೊಂಡು ಮಾತನಾಡಬಾರದು. ಯತ್ನಾಳ ಅವರ ಹೇಳಿಕೆಯಿಂದ ಯಾವುದೇ ಪರಿಣಾಮ ಬೀರುವುದಿಲ್ಲ. ಯತ್ನಾಳ ಅವರ ಹೇಳಿಕೆಯನ್ನ ಪಕ್ಷದ ಕಾರ್ಯಕರ್ತರು ನಿರ್ಲಕ್ಷ್ಯ ಮಾಡುತ್ತಾರೆ. ಅವರು ನಮ್ಮ ಕೋರ್‌ ಕಮೀಟಿ ಸದಸ್ಯರು ಅಲ್ಲ. ಯತ್ನಾಳ ಅವರು ಬಿಜೆಪಿ ಪಕ್ಷದಿಂದ ಗೆದ್ದಿದ್ದಾರೆ, ಈ ಹಿಂದೆ ಪಕ್ಷದಿಂದ ಹೊರಗೆ ಹೋಗಿದ್ದರು ಎಂದು ಅವರು ಹೇಳಿದರು.
 

Latest Videos
Follow Us:
Download App:
  • android
  • ios