Asianet Suvarna News Asianet Suvarna News

ಬಿಜೆಪಿ ರಾಜ್ಯಾಧ್ಯಕ್ಷ: ಅಳೆದು ತೂಗಿ ವಿಜಯೇಂದ್ರನನ್ನ ಆಯ್ಕೆ ಮಾಡಿದ್ರಾ?, ಲಿಂಬಾವಳಿ ಹೇಳಿದ್ದಿಷ್ಟು

ನಮ್ಮಲ್ಲಿ ಆಯ್ಕೆ ಆಗಿರುವ 66 ಜನರಲ್ಲಿ ಅನೇಕರು ಸ್ವಂತ ಶಕ್ತಿ ಮೇಲೆ ಶಾಸಕರಾಗಿದ್ದಾರೆ. ಕೆಲವರು ಹೊಂದಾಣಿಕೆ ಮೇಲೆ ಶಾಸಕರಾಗಿ ಆಯ್ಕೆ ಆಗಿದ್ದಾರೆ: ಮಾಜಿ ಸಚಿವ ಅರವಿಂದ ಲಿಂಬಾವಳಿ 

Arvind Limbavali React about BY Vijayendra Elected as the Karnataka BJP President grg
Author
First Published Nov 23, 2023, 6:58 AM IST

ಬೆಳಗಾವಿ(ನ.23):  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ನಾವು ಅಳೆದು, ತೂಗಿ ಅಧ್ಯಕ್ಷರನ್ನಾಗಿ ಮಾಡಿಲ್ಲ. ನಮ್ಮಲ್ಲಿ ಆಯ್ಕೆ ಆಗಿರುವ 66 ಜನರಲ್ಲಿ ಅನೇಕರು ಸ್ವಂತ ಶಕ್ತಿ ಮೇಲೆ ಶಾಸಕರಾಗಿದ್ದಾರೆ. ಕೆಲವರು ಹೊಂದಾಣಿಕೆ ಮೇಲೆ ಶಾಸಕರಾಗಿ ಆಯ್ಕೆ ಆಗಿದ್ದಾರೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿದರು.

ಬೆಳಗಾವಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಂದಾಣಿಕೆ ಮಾಡಿಕೊಳ್ಳುವವರಿಗೆ ಕಾಲ ಇದು. ಅಧ್ಯಕ್ಷರು, ಪ್ರತಿಪಕ್ಷ ನಾಯಕರು ವಿರೋಧ ಪಕ್ಷಗಳ ಜೊತೆಗೆ ಹೊಂದಾಣಿಕೆ ಇದೆ.

ಪ್ರಿಯಾಂಕ್ ಖರ್ಗೆ ತವರಲ್ಲಿ ಗೂಂಡಾಗಿರಿ ಮೀತಿ ಮೀರಿದೆ; ಬಿವೈ ವಿಜಯೇಂದ್ರ ಕಿಡಿ

ಅಂಥ ವ್ಯವಸ್ಥೆ ನಮ್ಮ ಪಕ್ಷದಲ್ಲಿ ಬಂದಿದೆ. ಈ ಹೊಂದಾಣಿಕೆಯಿಂದ ಲೋಕಸಭೆ ಚುನಾವಣೆಯಲ್ಲಿ ಜಾಸ್ತಿ ಸ್ಥಾನ ಗೆಲ್ಲಿಸುತ್ತಿರಬಹುದು. ಅದಕ್ಕಾಗಿ ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ ನೇಮಕ ಮಾಡಿದ್ದಾರೆಂದು ತಿಳಿಸಿದರು.

Follow Us:
Download App:
  • android
  • ios