ಯಡಿಯೂರಪ್ಪ ಅಭಿಪ್ರಾಯದಂತೆ ವಿಪಕ್ಷ ನಾಯಕನಾಗಿ ಅಶೋಕ್‌ ನೇಮಕ!

ಪಕ್ಷ ರಾಜ್ಯಾಧ್ಯಕ್ಷರನ್ನಾಗಿ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ್ದ ಬಿಜೆಪಿ  ಹೈಕಮಾಂಡ್‌ ಇದೀಗ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಯಡಿಯೂರಪ್ಪ ಅವರ ಅಭಿಪ್ರಾಯ ಹಾಗೂ ಸೂಚನೆಯಂತೆ ಮಾಜಿ ಸಚಿವ ಆರ್‌.ಅಶೋಕ್ ಅವರನ್ನು ಆಯ್ಕೆ ಮಾಡಿದೆ. 

As per BS Yediyurappa opinion R Ashok was appointed as the Leader of Opposition gvd

ಬೆಂಗಳೂರು (ನ.18): ಎಂಬತ್ತರ ಇಳಿ ವಯಸ್ಸಿನಲ್ಲಿಯೂ ರಾಜ್ಯ ಬಿಜೆಪಿಯಲ್ಲಿ ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರದ್ದೇ ಭರ್ಜರಿ ಹವಾ ಆರಂಭವಾಗಿದೆ. ಪಕ್ಷ ರಾಜ್ಯಾಧ್ಯಕ್ಷರನ್ನಾಗಿ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ್ದ ಬಿಜೆಪಿ  ಹೈಕಮಾಂಡ್‌ ಇದೀಗ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಯಡಿಯೂರಪ್ಪ ಅವರ ಅಭಿಪ್ರಾಯ ಹಾಗೂ ಸೂಚನೆಯಂತೆ ಮಾಜಿ ಸಚಿವ ಆರ್‌.ಅಶೋಕ್ ಅವರನ್ನು ಆಯ್ಕೆ ಮಾಡಿದೆ. ಮುಂಬರುವ ಲೋಕಸಭಾ ಚುನಾವಣೆ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳ ಸಮೀಕರಣವನ್ನು ಮುಂದಿಟ್ಟುಕೊಂಡು ಮತಯಾಚಿಸಲು ಬಿಜೆಪಿ ಸಜ್ಜಾಗಿದೆ. 

ವಿಜಯೇಂದ್ರ ಮತ್ತು ಅಶೋಕ್ ಅವರ ಸಾರಥ್ಯಕ್ಕೆ ಯಡಿಯೂರಪ್ಪ ಅವರು ಮಾರ್ಗದರ್ಶನ ಮಾಡಲಿದ್ದಾರೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿರುವುದರಿಂದ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಲ್ಲಿ ಯಡಿಯೂರಪ್ಪ ಬಣದವರನ್ನು ಬಿಟ್ಟು ಬೇರೊಬ್ಬರನ್ನು ಪರಿಗಣಿಸಬಹುದು ಎಂಬುದು ಸಾಮಾನ್ಯ ನಿರೀಕ್ಷೆಯಾಗಿತ್ತು. ಆದರೆ, ಬೇರೆ ಯಾರಾದರೂ ಶಾಸಕಾಂಗ ಪಕ್ಷದ ನಾಯಕರಾದರೆ ವಿಜಯೇಂದ್ರ ಅವರು ಕಾರ್ಯ ನಿರ್ವಹಿಸಲು ಕಷ್ಟವಾಗುತ್ತದೆ ಎಂಬುದನ್ನು ಅರಿತ ಯಡಿಯೂರಪ್ಪ ಮತ್ತವರ ಆಪ್ತರು ಮೊದಲು ಒಕ್ಕಲಿಗರನ್ನೇ ನೇಮಿಸಬೇಕು ಎಂಬ ಪ್ರಸ್ತಾಪ ಮುಂದಿಟ್ಟರು. 

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಲೋಕಾಯುಕ್ತಕ್ಕೆ ದೂರು: ಕಾರಣವೇನು?

ಒಕ್ಕಲಿಗರ ಪೈಕಿ ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರ ಹೆಸರೂ ಪ್ರಮುಖವಾಗಿ ಪ್ರಸ್ತಾಪವಾಗಿತ್ತು. ಸಂಘ ಪರಿವಾರವೂ ಅಶ್ವತ್ಥನಾರಾಯಣ ಅವರ ಬಗ್ಗೆಯೇ ಒಲವು ತೋರಿತ್ತು. ಆದರೆ, ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ತಮ್ಮೊಂದಿಗೆ ಹೊಂದಾಣಿಕೆ ಆಗಬಹುದಾದ ಅಶೋಕ್ ಅವರ ಪರವಾಗಿ ಬ್ಯಾಟಿಂಗ್ ಬೀಸಿದರು. ಜತೆಗೆ ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಅಶೋಕ್ ಪರವಾಗಿ ಶಿಫಾರಸು ಮಾಡಿದರು. 

ಮುಸ್ಲಿಂ ಸ್ಪೀಕರ್‌ಗೆ ಬಿಜೆಪಿ ಸಲಾಂ: ಸಚಿವ ಜಮೀರ್ ಹೇಳಿಕೆ ವಿವಾದ

ಮೇಲಾಗಿ, ಸತತ ಏಳು ಬಾರಿ ಶಾಸಕರಾಗಿ ಗೆಲುವು ಸಾಧಿಸಿಕೊಂಡು ಬಂದಿದ್ದಾರೆ. ಹೀಗಾಗಿ, ಅಂತಿಮವಾಗಿ ಅಶೋಕ್ ಪರ ತಕ್ಕಡಿಯ ತೂಕವೇ ಹೆಚ್ಚಾಯಿತು ಎಂದು ಮೂಲಗಳು ತಿಳಿಸಿವೆ. ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಪ್ರಾಧಾನ್ಯತೆ ನೀಡಬೇಕು ಎಂಬ ಚರ್ಚೆ ನಡೆದರೂ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಆ ವರ್ಗಕ್ಕೆ ಹೆಚ್ಚಿನ ಆದ್ಯತೆ ನೀಡಿರುವುದರಿಂದ ನಾವು ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳನ್ನು ಗುರಿಯಾಗಿಸಿಕೊಳ್ಳಬೇಕು ಎಂದು ಅಭಿಪ್ರಾಯ ಬಿಜೆಪಿ ಪಾಳೆಯದಲ್ಲಿ ಕೇಳಿಬಂತು. ಹಾಗಾಗಿಯೇ ವಿಜಯೇಂದ್ರ ಮತ್ತು ಅಶೋಕ್ ಅವರಿಗೆ ನಾಯಕತ್ವ ನೀಡುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ವರಿಷ್ಠರೂ ಅಸ್ತು ಎಂದರು ಎನ್ನಲಾಗಿದೆ.

Latest Videos
Follow Us:
Download App:
  • android
  • ios