ಸಿಂದಗಿ ವಿಧಾನಸಭೆ ಬೈ ಎಲೆಕ್ಷನ್​ಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್​

* ಸಿಂದಗಿ,ಹಾನಗಲ್ ಉಪ ಚುನಾವಣೆಯ ದಿನಾಂಕ ಪ್ರಕಟ
* ಇದರ ಬೆನ್ನಲ್ಲೇ ಸಿಂದಗಿ ಬೈ ಎಲೆಕ್ಷನ್‌ಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ
* ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್​ ಖಂಡ್ರೆ ಅವರಿಂದ ಅಭ್ಯರ್ಥಿ ಹೆಸರು ಪ್ರಕಟ

Ashok managuli Congress Candidate to Sindagi Assembly By Poll Says Eshwar Khandre rbj

ಬೆಂಗಳೂರು, (ಸೆ.28): ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ (By Election) ಘೋಷಣೆಯಾಗುತ್ತಿದ್ದಂತೆಯೇ ಕಾಂಗ್ರೆಸ್​ ತನ್ನ ಅಭ್ಯರ್ಥಿಯನ್ನ ಘೋಷಣೆ ಮಾಡಿದೆ.

ಬೆಂಗಳೂರಿನಲ್ಲಿ ಇಂದು (ಸೆ.28) ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್​ ಖಂಡ್ರೆ (Eshwar Khandre) ಅವರು ಸುದ್ದಿಗೋಷ್ಠಿ ನಡೆಸಿ,  ಅಶೋಕ್ ‌ಮನಗೂಳಿ‌ ಕಾಂಗ್ರೆಸ್ (Congress) ಪಕ್ಷದ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆ ಮಾಡಿದರು.

ಬೈಎಲೆಕ್ಷನ್ ದಿನಾಂಕ ನಿಗದಿ: ಹಾನಗಲ್ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿ ಘೋಷಣೆ

ಹಾನಗಲ್ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಪಕ್ಷದ ವರಿಷ್ಠರು ಘೋಷಣೆ ಮಾಡಲಿದ್ದಾರೆ. ಈ ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲಲಿದೆ. ಹಾನಗಲ್​​​ನಲ್ಲಿ ಮನೋಹರ್ ತಹಶಿಲ್ದಾರ್, ಶ್ರೀನಿವಾಸ್ ಮಾನೆ ಆಕಾಂಕ್ಷಿಗಳಾಗಿದ್ದಾರೆ. ಇವರಿಬ್ಬರಷ್ಟೇ ಅಲ್ಲ, ಇನ್ನು ಕೆಲವರೂ ಟಿಕೆಟ್ ಕೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರು, ವಿಪಕ್ಷ ನಾಯಕರು ಹಾಗೂ ಹೈಕಮಾಂಡ್ ನಾಯಕರು ಅಭ್ಯರ್ಥಿ ಫೈನಲ್ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಈ ಹಿಂದೆ ಬಿಜೆಪಿಗೆ ಸಹಾಯ ಮಾಡಿತ್ತು. ಬಸವಕಲ್ಯಾಣ, ಮಸ್ಕಿ ಉಪಚುನಾವಣೆ ವೇಳೆ ಬಿಜೆಪಿಗೆ ಸಹಾಯ ಮಾಡಿತ್ತು. ಈ ಬಾರಿ‌ ನಾವು ನಮ್ಮ ಗೆಲುವಿನ ಬಗ್ಗೆ ಗಮನದಲ್ಲಿಟ್ಟುಕೊಂಡು ತಂತ್ರ ರೂಪಿಸುತ್ತೇವೆ ಎಂದರು.

ದಳಪತಿಗಳಿಗೆ ಬಿಗ್ ಶಾಕ್: ಜೆಡಿಎಸ್‌ ಅಭ್ಯರ್ಥಿಯಾಗಬೇಕಿದ್ದ ನಾಯಕ ಕಾಂಗ್ರೆಸ್ ಸೇರ್ಪಡೆ

ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ಅವರ ನಿಧನದಿಂದ ಸಿಂದಗಿ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದ್ದು, ಅ.30 ರಂದು ಸಿಂದಗಿ ಮತ್ತು ಹಾನಗಲ್ ಎರಡು ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. ಅ.1 ರಿಂದ ಅಧಿಸೂಚನೆ ಪ್ರಕಟವಾಗಲಿದೆ. ನ. 2 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಅ.8 ರಂದು ನಾಮ ಪತ್ರ ಸಲ್ಲಿಕೆ ಕೊನೆಯ ದಿನವಾಗಿದೆ. ಅ.11 ರಂದು ನಾಮ ಪತ್ರಗಳ ಪರಿಶೀಲನೆ ನಡೆಯಲಿದೆ. ಅ.13 ನಾಮಪತ್ರ ಹಿಂಪಡೆಯುವ ಕೊನೆಯ ದಿನವಾಗಿರಲಿದೆ. ನ. 2 ಮತ ಎಣಿಕೆ. 

Latest Videos
Follow Us:
Download App:
  • android
  • ios