Asianet Suvarna News Asianet Suvarna News

ಗ್ಯಾರಂಟಿಗಳ ಅನುಷ್ಠಾನದಿಂದ ನಿರೀಕ್ಷಿತ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ: ಅಶೋಕ ಪಟ್ಟಣ

ಕಾಂಗ್ರೆಸ್ ಪಕ್ಷ ಬಡವರ, ಹಿಂದುಳಿದ ವರ್ಗಗಳ ಧ್ವನಿಯಾಗಿ ಕೆಲಸ ಮಾಡುತ್ತಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡವರಿಗೆ, ಮಹಿಳೆಯರ ಕಲ್ಯಾಣಕ್ಕಾಗಿ ಹಲವಾರ ಜನಪರ ಯೋಜನೆ ಅನುಷ್ಠಾನ ಮಾಡುತ್ತಿದ್ದಾರೆ ಎಂದು ತಿಳಿಸಿದರು.

Ashok Pattan Talks Over Congress Government  Guarantee grg
Author
First Published Sep 5, 2023, 8:27 PM IST

ರಾಮದುರ್ಗ(ಸೆ.05):  ಜನಸಾಮಾನ್ಯರ ಮತ್ತು ಮಹಿಳೆಯರ ಸ್ವಾಭಿಮಾನದ ಬದುಕಿಗಾಗಿ ಕಾಂಗ್ರೆಸ್ ಪಕ್ಷ ಚುನಾವಣೆ ಸಮಯದಲ್ಲಿ ಜನರಿಗೆ ನೀಡಿರುವ ಗ್ಯಾರಂಟಿಗಳ ಅನುಷ್ಠಾನ ಮಾಡುತ್ತಿರುವ ಪರಿಣಾಮ ಅಭಿವೃದ್ಧಿ ಕಾಮಗಾರಿಗಳನ್ನು ನಿರೀಕ್ಷಿತ ಪ್ರಮಾಣದಲ್ಲಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ವಿಧಾನಸಭೆಯ ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.

ಪಟ್ಟಣದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಕಾರ್ಯಾಲಯವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಬಡವರ, ಹಿಂದುಳಿದ ವರ್ಗಗಳ ಧ್ವನಿಯಾಗಿ ಕೆಲಸ ಮಾಡುತ್ತಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡವರಿಗೆ, ಮಹಿಳೆಯರ ಕಲ್ಯಾಣಕ್ಕಾಗಿ ಹಲವಾರ ಜನಪರ ಯೋಜನೆ ಅನುಷ್ಠಾನ ಮಾಡುತ್ತಿದ್ದಾರೆ ಎಂದು ತಿಳಿಸಿದರು.

 ಎಷ್ಟೇ ಎತ್ತರಕ್ಕೇರಿದರೂ ನಮ್ಮ ಮೂಲ ಬೇರನ್ನು ಮರೆಯಬಾರದು: ಹೆಬ್ಬಾಳ್ಕರ್

ವಿಶ್ವಗುರು ಬಸವಣ್ಣನವರ ಅನುಯಾಯಿಗಳಾಗಿದ್ದ ಹಡಪದ ಅಪ್ಪಣ್ಣನವರ ಆದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಂಡು ಕಾಯಕವೇ ಕೈಲಾಸ ತತ್ವದಡಿ ಎಲ್ಲರೂ ಜೀವನ ಸಾಗಿಸುವ ಅವಶ್ಯಕತೆ ಇದೆ ಎಂದರು.
ತಂಗಡಗಿಯ ಅನ್ನದಾನಿ ಭಾರತಿ ಅಪ್ಪಣ್ಣಸ್ವಾಮಿಗಳು ಸಾನ್ನಿಧ್ಯ ವಹಿಸಿ ಮಾತನಾಡಿ, ಹಡಪದ ಅಪ್ಪಣ್ಣನ ಸಮಾಜದ ಜನರು ಮೊದಲು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಜೊತೆಗೆ ಸಮಾಜದ ಸಂಘಟನೆ, ಸೇವಾ ಮನೋಭಾವನೆ ಮಕ್ಕಳಲ್ಲಿ ಬೆಳೆಸಬೇಕು ಎಂದು ನುಡಿದರು.

ಮುಳ್ಳೂರಿನ ಚಂದ್ರಶೇಖರ ಶಿವಾಚಾರ್ಯರು ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಿದರು. ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಪ್ರಾಚಾರ್ಯರು, ಜಾನಪದ ಸಾಹಿತಿ ಡಾ.ಸಿ.ಕೆ.ನಾವಲಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಸವರಾಜ ನಾವಿ, ಶ್ರೀನಿವಾಸ ಹಂಪಣ್ಣವರ, ಬಸವರಾಜ ಹಡಪದ, ಎಂ.ಎಸ್.ಧನ್ನೂರ, ಪುಂಡಲೀಕ ಹಡಪದ, ಶಿವಾನಂದ ಹಡಪದ, ಯಾದವಾಡ ಸೇರಿದಂತೆ ಸಮಾಜದ ಪ್ರಮುಖರು ಇದ್ದರು. ಸಮಾಜದ ಅಧ್ಯಕ್ಷ ಶಿವಾನಂದ ಹಡಪದ ಸ್ವಾಗತಿಸಿದರು. ಪ್ರೊ.ಬಿ.ಬಿ.ವಂದಾಲ ಪ್ರಾಸ್ತಾವಿಕವಾಗಿ ಮಾತನಾಡಿದರು.

ಶಕ್ತಿ ಯೋಜನೆಯ ಬಸ್‌ಗಳಿಗೆ ಕಲ್ಲೆಸೆದ ಕಾಲೇಜು ವಿದ್ಯಾರ್ಥಿಗಳು: ಗಾಜುಗಳು ಪುಡಿ, ಪುಡಿ

ಹಡಪದ ಅಪ್ಪಣ್ಣನವರ ದೇವಸ್ಥಾನ ಮತ್ತು ಸಮುದಾಯ ಭವನ ನಿರ್ಮಾಣಕ್ಕೆ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಲ್ಲಿ ಅನುದಾನ ನೀಡುವ ಭರವಸೆ ನೀಡಿದರಲ್ಲದೇ ಅಕ್ರಮ ಸಕ್ರಮ ಯೋಜನೆಯಡಿ ನಿವೇಶನ ಸರಿಪಡಿಸಿಕೊಡುವೆ ಎಂದು ವಿಧಾನಸಭೆಯ ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ತಿಳಿಸಿದ್ದಾರೆ.  

ಸರ್ಕಾರ ಸಮಾಜದಲ್ಲಿ ಹಿಂದುಳಿದ ಜನರಾದ ಹಡಪದ ಅಪ್ಪಣ್ಣನ ಸಮಾಜದ ಜನರು ಶೈಕ್ಷಣಿಕ ಮತ್ತು ಉದ್ಯೋಗಕ್ಕಾಗಿ ಪ್ರವರ್ಗ 2ಎಗೆ ಸೇರಿಸಲು ಶಾಸಕರು ಶ್ರಮಿಸಬೇಕು ಎಂದು ತಂಗಡಗಿ ಅನ್ನದಾನಿ ಭಾರತಿ ಅಪ್ಪಣ್ಣಸ್ವಾಮಿಗಳು ಹೇಳಿದ್ದಾರೆ.  

Follow Us:
Download App:
  • android
  • ios