ಬೆಂಗಳೂರು(ಜು.19): ಪ್ರವಾಹದಿಂದ ತತ್ತರಿಸಿರುವ ಅಸ್ಸಾಂ ರಾಜ್ಯಕ್ಕೆ ತುರ್ತು ಆರ್ಥಿಕ ನೆರವು ನೀಡುವಂತೆ ಕೇಂದ್ರಕ್ಕೆ ಒತ್ತಾಯಿಸಿದ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರ ಕಾಳಜಿಗೆ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್‌ ಅವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ದೇವೇಗೌಡ ಅವರಿಗೆ ಪತ್ರ ಬರೆದಿರುವ ಸೋನೋವಾಲ್‌ ಅವರು, ‘ಅಸ್ಸಾಂ ಜನತೆ ಬಗ್ಗೆ ಕಾಳಜಿ ವಹಿಸಿರುವುದಕ್ಕೆ ಧನ್ಯವಾದಗಳು’ ಎಂದಿದ್ದಾರೆ.‘ಅಸ್ಸಾಂ ಸರ್ಕಾರವು ರಾಜ್ಯದಲ್ಲಿ ಪರಿಹಾರ ಮತ್ತು ಪ್ರವಾಹ ತಗ್ಗಿಸುವ ಚಟುವಟಿಕೆಗಳನ್ನು ಸುಗಮವಾಗಿ ನಡೆಸುತ್ತಿದೆ’ ಎಂದು ಸೋನೋವಾಲ್‌ ಬರೆದಿರುವ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ

ಕೊರೋನಾ ನಡುವೆಯೂ ಜೆಡಿಎಸ್ ಪಕ್ಷ ಸಂಘಟಿಸಿ: ದೇವೇಗೌಡ

ಪ್ರವಾಹ ಸಮಸ್ಯೆಯನ್ನು ತಗ್ಗಿಸಲು ಧೀರ್ಘಾವಧಿಯ ಕ್ರಮಗಳನ್ನು ಪ್ರಾರಂಭಿಸುವ ಅಶ್ವಾಸನೆ ನೀಡಿದ್ದಾರೆ. ಇಂತಹ ಸಮಯದಲ್ಲಿ ತಾವು ರಾಜ್ಯದ ಪರಿಸ್ಥಿತಿ ಕುರಿತು ಕಾಳಜಿ ವಹಿಸಿ ಪ್ರಧಾನಿಗಳ ಗಮನಸೆಳೆದಿರುವುದಕ್ಕೆ ಧನ್ಯವಾದಗಳು. ನಮ್ಮ ರಾಜ್ಯದ ಮೇಲೆ ತಾವು ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ’ ಎಂದಿದ್ದಾರೆ.