Assembly electioin: ಬಿಜೆಪಿಗೆ 150 ಸ್ಥಾನ ಖಚಿತ: ಕೋಟಾ ಶ್ರೀನಿವಾಸ ಪೂಜಾರಿ

ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳ ಜನಪರ ಯೋಜನೆಗಳಿಂದಲೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 150ಕ್ಕೂ ಅಧಿಕ ಸ್ಥಾನ ಗೆದ್ದು ಬಹುಮತ ಪಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಶಯ ವ್ಯಕ್ತಪಡಿಸಿದರು.

Assembly election BJP is sure of 150 seats says Kota Srinivasa Pujari rav

ಭಟ್ಕಳ (ಡಿ.21) : ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳ ಜನಪರ ಯೋಜನೆಗಳಿಂದಲೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 150ಕ್ಕೂ ಅಧಿಕ ಸ್ಥಾನ ಗೆದ್ದು ಬಹುಮತ ಪಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಶಯ ವ್ಯಕ್ತಪಡಿಸಿದರು. ಅವರು ಮಂಗಳವಾರ ಮುರ್ಡೇಶ್ವರದಲ್ಲಿ ಏರ್ಪಡಿಸಿದ್ದ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದರು.

ಮುರ್ಡೇಶ್ವರದಲ್ಲಿ ನಡೆದ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ಮಹತ್ವದ್ದಾಗಿದೆ. ಇಲ್ಲಿಂದಲೇ ಮುಂಬರುವ ಚುನಾವಣೆಯಲ್ಲಿ ಹೆಚ್ಚಿನ ಬಹುಮತ ಪಡೆಯುವ ದೃಢ ಸಂಕಲ್ಪ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರದ ಸಾಧನೆ ಕುರಿತು ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿ ಮನೆ ಮನೆಗಳಿಗೆ ತೆರಳಿ ತಿಳಿಸುವ ಕೆಲಸ ಮಾಡಬೇಕು ಎಂದರು.

ಎಸ್ಸಿ, ಎಸ್ಟಿಗೆ ₹ 18649 ಕೋಟಿ ಬಿಡುಗಡೆ: ಕೋಟ ಶ್ರೀನಿವಾಸ ಪೂಜಾರಿ

ಕೇಂದ್ರ ಸರ್ಕಾರದ ಕಿಸಾನ್‌ ಸಮ್ಮಾನ, ಆಯುಷ್ಮಾನ್‌ ಭಾರತ ಹಾಗೂ ರಾಜ್ಯ ಸರ್ಕಾರದ ವಿವಿಧ ಜನಪರ ಯೋಜನೆಗಳಿಂದ ಕೋಟ್ಯಂತರ ಜನರಿಗೆ ಅನುಕೂಲವಾಗಿದೆ. ರಾಜ್ಯದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಪರಿಶಿಷ್ಟಪಂಗಡ, ಪರಿಶಿಷ್ಟಜಾತಿ, ಹಿಂದುಳಿದವರು, ರೈತರು, ದಲಿತರು, ಮೀನುಗಾರರು, ನೇಕಾರರು, ಟೈಲರ್‌ಗಳಿಗೆ ಮಹತ್ವದ ಯೋಜನೆಗಳನ್ನು ಜಾರಿಗೆಗೊಳಿಸಿ ಅನುಕೂಲ ಮಾಡಿಕೊಟ್ಟಿದೆ ಎಂದು ಅವರು ಹೇಳಿದರು.

ಗ್ರಾಪಂ ಸದಸ್ಯರಿಗೆ ಅನುಕೂಲ:

ಬಿಜೆಪಿ ಸರ್ಕಾರ ರಾಜ್ಯದ ಗ್ರಾಪಂ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರಿಗೆ ಹೆಚ್ಚಿನ ಗೌರವಧನ ವಿತರಿಸಿದ್ದು, ಇತ್ತೀಚೆಗೆ .138 ಕೋಟಿ ಬಿಡುಗಡೆಗೊಳಿಸಿ ಪಂಚಾಯತ್‌ ಸದಸ್ಯರ ಮತ್ತಷ್ಟುಸೇವೆಗೆ ಅನುಕೂಲ ಮಾಡಿಕೊಡಲಾಗಿದೆ ಎಂದರು. ಸರ್ಕಾರ ಯೋಜನೆಗಳ ಬಗ್ಗೆ ಜನಸಾಮಾನ್ಯರಿಗೆ ಮನದಟ್ಟು ಮಾಡಿ ಕೊಡಬೇಕು. ಚುನಾವಣೆಯಲ್ಲಿ ಮತವಾಗಿ ಪರಿವರ್ತಿಸುವಂತೆ ಮಾಡಬೇಕು ಎಂದು ಕರೆ ನೀಡಿದರು.

ಇಲಾಖೆ ಯೋಜನೆ ಡಿಸೆಂಬರ್‌ನಲ್ಲಿ ಪೂರ್ಣಗೊಳಿಸಲು ತಾಕೀತು: ಸಚಿವ ಕೋಟ

ವೇದಿಕೆಯಲ್ಲಿ ಶಾಸಕರಾದ ದಿನಕರ ಶೆಟ್ಟಿ, ರೂಪಾಲಿ ನಾಯ್ಕ, ಸುನೀಲ ನಾಯ್ಕ ಉಪಸ್ಥಿತರಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ವೆಂಕಟೇಶ ನಾಯಕ ಸ್ವಾಗತಿಸಿದರು. ಶಿವಮೊಗ್ಗದ ಗಿರೀಶ ಪಟೇಲ್‌ ನಿರ್ವಹಿಸಿದರು. ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಲ್ಮಡಪ್ಪ ವಂದಿಸಿದರು.

Latest Videos
Follow Us:
Download App:
  • android
  • ios