Asianet Suvarna News Asianet Suvarna News

ರಾಜಸ್ತಾನ ಗೆದ್ರೆ ಸಂತೋಷ ಅಂದುಕೊಂಡಿದ್ವಿ; ಆದರೆ ಮೋದಿಗಾಗಿ ಮತ್ತೆರಡು ರಾಜ್ಯ ಗಿಫ್ಟ್ ನೀಡಿದ್ದಾರೆ: ಈಶ್ವರಪ್ಪ

ರಾಜಸ್ತಾನ ಗೆದ್ದರೆ ಬಹಳ ಸಂತೋಷ ಆಗುತ್ತೆ ಅಂದುಕೊಂಡಿದ್ವಿ. ಆದರೆ ದೇಶದ ಜನ ಇಷ್ಟಕ್ಕೆ ತೃಪ್ತಿ ಪಡಬೇಡಿ ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಬೇಕು ಎಂಬ ದೃಷ್ಟಿಯಿಂದ ರಾಜಸ್ತಾನದ ಜೊತೆಗೆ ಮಧ್ಯಪ್ರದೇಶ ಛತ್ತೀಸ್‌ಗಡ್ ಗಿಫ್ಟ್ ಆಗಿ ಕೊಟ್ಟಿದ್ದಾರೆ ಎಂದು ಬಿಜೆಪಿ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಸಂತಸ ವ್ಯಕ್ತಪಡಿಸಿದರು.

Assembly election results 2023 KS Eshwarappa reaction at shivamogga today rav
Author
First Published Dec 3, 2023, 12:59 PM IST

ಶಿವಮೊಗ್ಗ (ಡಿ.3): ರಾಜಸ್ತಾನ ಗೆದ್ದರೆ ಬಹಳ ಸಂತೋಷ ಆಗುತ್ತೆ ಅಂದುಕೊಂಡಿದ್ವಿ. ಆದರೆ ದೇಶದ ಜನ ಇಷ್ಟಕ್ಕೆ ತೃಪ್ತಿ ಪಡಬೇಡಿ ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಬೇಕು ಎಂಬ ದೃಷ್ಟಿಯಿಂದ ರಾಜಸ್ತಾನದ ಜೊತೆಗೆ ಮಧ್ಯಪ್ರದೇಶ ಛತ್ತೀಸ್‌ಗಡ್ ಗಿಫ್ಟ್ ಆಗಿ ಕೊಟ್ಟಿದ್ದಾರೆ ಎಂದು ಬಿಜೆಪಿ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಸಂತಸ ವ್ಯಕ್ತಪಡಿಸಿದರು.

ಪಂಚರಾಜ್ಯ ಚುನಾವಣೆ ಫಲಿತಾಂಶದಲ್ಲಿ ಕುರಿತು ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಇಂದಿನ ಫಲಿತಾಂಶದಿಂದ ದೊಡ್ಡ ಆನಂದ ಆಗಿದೆ. ಕಾಂಗ್ರೆಸ್ನವರು ಐದಕ್ಕೆ ಐದು ಗೆಲ್ಲುತ್ತೇವೆ ಅಂತಿದ್ರು. ಆದರೆ ತೆಲಂಗಾಣ ಒಂದು ರಾಜ್ಯದಲ್ಲಿ ಮುಖ್ಯಮಂತ್ರಿ ಮೇಲಿದ್ದ ಬೇಸರದಿಂದ ಮತ್ತು ಕರ್ನಾಟಕದಲ್ಲಿ ಗ್ಯಾರಂಟಿ ಮೂಲಕ ಮೋಸ ಮಾಡಿದ ರೀತಿ ಇಲ್ಲಿನ ಮುಸ್ಲಿಂರನ್ನು ಒಂದುಗೂಡಿಸಿದ ರೀತಿಯಲ್ಲೇ ಅಲ್ಲೂ ಮಾಡಿದ್ದಾರೆ. ಹೀಗಾಗಿ ಅಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದರು.

ತೆಲಂಗಾಣದಲ್ಲಿ ನಮ್ಮ ಗ್ಯಾರಂಟಿ ಫಲ ನೀಡಿದೆ: ಸಚಿವ ಪ್ರಿಯಾಂಕ್ ಖರ್ಗೆ

ಮುಂದಿನ ಚುನಾವಣೆಯಲ್ಲೂ ತೆಲಂಗಾಣ ಗೆಲ್ಲಲ್ಲು ಆಗಲ್ಲ. ಈಗ ರಾಜಸ್ಥಾನ, ಮಧ್ಯಪ್ರದೇಶ, ಛತ್ತಿಸ್ ಘಡ ಗೆದ್ದಿದ್ದೇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ದೇಶ ಗೆಲ್ಲುತ್ತೇವೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತೆಲಂಗಾಣದಲ್ಲಿ ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಕೊಡುತ್ತೇವೆ ಎಂದು ಗೆದ್ದಿದ್ದಾರೆ. ಆದರೆ ರಾಜ್ಯದಲ್ಲಿ ಆರು ತಿಂಗಳಲ್ಲೇ ಗ್ಯಾರಂಟಿ ಭರವಸೆ ವಿಫಲವಾಗಿದೆ ಅದೇ ರೀತಿ ತೆಲಂಗಾಣದ ಜನರು ಪ್ರತಿಫಲವನ್ನು ಸದ್ಯದಲ್ಲೇ ಉಣ್ಣುತ್ತಾರೆ ಎಂದರು.

ಮತ್ತೊಮ್ಮೆ ಮೋದಿ ಪ್ರಧಾನಿ:

ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡುವ ದಿಕ್ಕಿನಲ್ಲಿ ಈ ಚುನಾವಣೆ ಫಲಿತಾಂಶ ಸ್ಫೂರ್ತಿಯಾಗಿದೆ. ಗ್ಯಾರಂಟಿ ಯೋಜನೆ ಬಗ್ಗೆ ದೇಶದ ಜನರಿಗೆ ಭರವಸೆ ಇಲ್ಲ. ಗ್ಯಾರಂಟಿ ಯೋಜನೆ ಮೂಲಕ ಕಾಂಗ್ರೆಸ್ ಮತದಾರರಿಗೆ ಮೋಸ ಮಾಡಿದೆ. ಕಾಂಗ್ರೆಸ್ ತನ್ನ ಸಾಧನೆಗಿಂತ ಗ್ಯಾರಂಟಿಯ ಮೋಸದ ಭರವಸೆ ನೀಡ್ತಿದ್ದಾರೆ. ತೆಲಂಗಾಣದ ಶಾಸಕರಿಗೆ‌ ಇದು ಅರ್ಥವಾಗಿದೆ. ಮೂರು ರಾಜ್ಯದ ಜನ ಬಿಜೆಪಿ ಜೊತೆ ಇದ್ದಾರೆ ನಾವು ಏಕೆ ಕಾಂಗ್ರೆಸ್ ಜೊತೆ ಹೋಗಬೇಕು ಅಂತಾ ಅನಿಸಿದೆ. ಹೇಗಾದರೂ ಮಾಡಿ ಕಾಂಗ್ರೆಸ್ ಶಾಸಕರನ್ನು ಕಟ್ಟಿ ಹಾಕಬೇಕು ಅಂತಾ ಪ್ರಯತ್ನ ನಡೆಯುತ್ತಿದೆ. ಡಿಕೆಶಿ ಪ್ರಯತ್ನ ದೇಶದಲ್ಲಿ ಎಲ್ಲೂ ಸಫಲವಾಗಲ್ಲ  ಬೆಂಗಳೂರಿನಲ್ಲಿ ಸಾಕಷ್ಟು ಗುಂಡಿಗಳಿವೆ. ಬಿಬಿಎಂಪಿ ನಿಮ್ಮ ಕೈಯಲ್ಲಿದೆ. ನೀವು ಬೆಂಗಳೂರಿಗೆ ಬಂದು ಗುಂಡಿ ತುಂಬಿಸುವ ಕೆಲಸ ಮಾಡಲಿ ಎಂದು ಕಿಡಿಕಾರಿದರು.

ಆಪರೇಷನ್‌ ತೆಲಂಗಾಣಕ್ಕೆ ಧಾವಿಸಿದ ಡಿಕೆಶಿ ಟೀಮ್‌..!

ಕಾಂಗ್ರೆಸ್ ನವರಿಗೆ ಬುದ್ದಿ ಇಲ್ಲ. ಈಗಾಗಲೇ ಅವರು ಅಧಿಕಾರಕ್ಕಾಗಿ ಒಳಗೊಳಗೆ ಬಡಿದಾಡಿ ಕೊಳ್ಳುತ್ತಿದ್ದಾರೆ. ಅವರು ಯಾವುದೇ ಕಾರಣಕ್ಕೂ ಒಂದಾಗಲ್ಲ. ರಾಜ್ಯದ ಬಿಜೆಪಿ ನಾಯಕರು ಎಲ್ಲರೂ ಒಟ್ಟಾಗಿ ಮುಂದೆ ಹೋಗ್ತೇವೆ. ಒಂದಿಬ್ಬರಲ್ಲಿ ಭಿನ್ನಾಭಿಪ್ರಾಯ ಇದೆ ದೇಶದ ಹಿತಕೋಸ್ಕರ ಮುಂದಿನ ಚುನಾವಣೆಯಲ್ಲಿ ಒಟ್ಟಾಗಿ ಕೆಲಸ ಮಾಡ್ತೇವೆ. ಮುಂದಿನ ಲೋಕಸಭೆ ಚುನಾವಣೆಗೆ ಈ ಚುನಾವಣಾ ಫಲಿತಾಂಶ ನೂರಕ್ಕೆ ನೂರರಷ್ಟು ದಿಕ್ಸೂಚಿ ಆಗಲಿದೆ ಎಂದು ಭವಿಷ್ಯ ನುಡಿದರು.

Latest Videos
Follow Us:
Download App:
  • android
  • ios