ಅಭಿಪ್ರಾಯ ಸಂಗ್ರಹಿಸಲು ಬಂದಿದ್ದ ಕೆಪಿಸಿಸಿ ವೀಕ್ಷಕರ ಎದುರೇ ಗಲಾಟೆ; ಬಡಿದಾಡುವ ಹಂತಕ್ಕೆ ಹೋಗಿದ್ದ ಕಾಂಗ್ರೆಸ್ ಕಾರ್ಯಕರ್ತರು

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಬಂದಿದ್ದ ಕೆಪಿಸಿಸಿ ವೀಕ್ಷಕರ ಎದುರೇ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಪರಸ್ಪರ ಗಲಾಟೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ. 

assembly election ticket issue Fight between Congress workers in Mudigere rav

ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು

 ಚಿಕ್ಕಮಗಳೂರು (ಡಿ.28): ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಬಂದಿದ್ದ ಕೆಪಿಸಿಸಿ ವೀಕ್ಷಕರ ಎದುರೇ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಪರಸ್ಪರ ಗಲಾಟೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ. 

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗಪೂರ್, ಜಿಲ್ಲಾಧ್ಯಕ್ಷ ಅಂಶುಮಂತ್, ಕಾಂಗ್ರೆಸ್ ಮುಖಂಡರಾದ ಹೆಚ್.ಎಸ್.ಪುಟ್ಟಸ್ವಾಮಿ ಸೇರಿದಂತೆ ವಿವಿಧ ಮುಖಂಡರು ಹೈಕಮಾಂಡ್ ಆದೇಶದ ಮೇರೆಗೆ ವೀಕ್ಷಕರಾಗಿ ಆಗಮಿಸಿದ್ದರು. ಈ ವೇಳೆಯಲ್ಲಿ ಅಸಮಾಧಾನ ಸ್ಟೋಟಗೊಂಡಿದೆ.

Uttara Kannada: ಕಾಂಗ್ರೆಸ್ ಬಲಗೊಳಿಸಲು ತಂತ್ರ- ಮಧು ಬಂಗಾರಪ್ಪ

ನಯನಾ ಮೋಟಮ್ಮ ಪರ ಮತ್ತು ವಿರುದ್ಧ ಗುಂಪುಗಳ ನಡುವೆ ಗಲಾಟೆ :

ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್(Congress) ಪದಾಧಿಕಾರಿಗಳಿಂದ ಪಕ್ಷದ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಗುತ್ತಿತ್ತು. 300-350 ಕಾರ್ಯಕರ್ತರಿಗೆ ತಮ್ಮ ಅಭಿಪ್ರಾಯವನ್ನ ಲಿಖಿತವಾಗಿ ತಿಳಿಸಲು ಅವಕಾಶವಿತ್ತು. ಅರ್ಜಿ ಸಲ್ಲಿಸಿರುವ ಆಕಾಂಕ್ಷಿಗಳ ಪಟ್ಟಿ ನೀಡಿ, ಅವರ ಹೆಸರಿನ ಮುಂದೆ ತಮ್ಮ ಅಭಿಪ್ರಾಯ ತಿಳಿಸಲು ಸೂಚಿಸಲಾಗಿತ್ತು. ಈ ವೇಳೆ, ನಯನಾ ಮೋಟಮ್ಮ(Nayana motamma) ಪರ ಮತ್ತು ವಿರುದ್ಧ ಗುಂಪುಗಳ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. 

ನಯನಾ ಮೋಟಮ್ಮ ಅವರ ಪರವಾಗಿ ಇರುವವರಿಗೆ ಹೆಚ್ಚು ಅಭಿಪ್ರಾಯ ತಿಳಿಸಲು ಅವಕಾಶ ನೀಡಿದ್ದೀರಿ. ಅವರ ವಿರುದ್ಧದ ಕಾರ್ಯಕರ್ತರ ಹೆಸರುಗಳನ್ನ ಬಿಟ್ಟಿದ್ದೀರಾ ಎಂದು ನಯನಾ ಮೋಟಮ್ಮ ವಿರುದ್ಧ ಗುಂಪಿನ ಕಾರ್ಯಕರ್ತರು, ಮುಖಂಡರು ಆರೋಪಿಸಿ ಜಿಲ್ಲಾಧ್ಯಕ್ಷರ ಜೊತೆ ವಾಗ್ವಾದಕ್ಕಿಳಿದಿದ್ದರು. ಈ ವೇಳೆ, ಪರಸ್ಪರ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು, ಕೈ-ಕೈ ಮಿಲಾಯಿಸುವ ಹಂತಕ್ಕೂ ತಲುಪಿತ್ತು. 

ಈ ಸಂದರ್ಭದಲ್ಲಿ ಮುಖಂಡರು ಮಧ್ಯಪ್ರವೇಶಿಸಿ ಗಲಾಟೆಯನ್ನ ನಿಯಂತ್ರಿಸಿದ್ದಾರೆ. ಈ ಮಧ್ಯೆ ಮಾಜಿ ಸಚಿವೆ ಮೋಟಮ್ಮನವರೇ ಅಭ್ಯರ್ಥಿಯಾಗಬೇಕು ಎಂದು ಅನೇಕ ಮುಖಂಡರು, ಕಾರ್ಯಕರ್ತರು ವೀಕ್ಷಕರೆದುರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

Assembly election: ಕಾಂಗ್ರೆಸ್‌ ಬಿಟ್ಟು ಬಿಆರ್‌ಎಸ್‌ನತ್ತ ಜಮೀರ್? ಕೈ ಹೈಕಮಾಂಡ್‌ ಬುಲಾವ್‌

ಮೂಡಿಗೆರೆ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ: 

ಕಾಂಗ್ರೆಸ್  ಟಿಕೆಟ್ ಆಕಾಂಕ್ಷಿಗಳಾಗಿ ನಯನ ಮೋಟಮ್ಮ, ಶ್ರೀಮತಿ ನಾಗರತ್ನ, ಎಂ.ಸಿ.ಹೂವಪ್ಪ, ಶ್ರೀರಂಗಯ್ಯ, ಪ್ರಭಾಕರ್ ಬಿನ್ನಡಿ ಅರ್ಜಿ ಸಲ್ಲಿಸಿದ್ದಾರೆ. ಈ ನಡುವೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮನವರೇ ಅಭ್ಯರ್ಥಿಯಾಗಬೇಕು ಎಂದು ಅನೇಕ ಮುಖಂಡರು ಮತ್ತು ಕಾರ್ಯಕರ್ತರು ವೀಕ್ಷಕರೆದುರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಮೂಡಿಗೆರೆ ಕಾಂಗ್ರೆಸ್‍ನಲ್ಲಿ ಎಲ್ಲವೂ ಸರಿಯಿಲ್ಲ. ಟಿಕೆಟ್ ವಿಚಾರದಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದ ಭಿನ್ನಾಭಿಪ್ರಾಯ ಇಂದು ವೀಕ್ಷಕರೆದುರೇ  ಸ್ಫೋಟಗೊಂಡಿದೆ.

Latest Videos
Follow Us:
Download App:
  • android
  • ios