Asianet Suvarna News Asianet Suvarna News

ಬಿಜೆಪಿ ಬಗ್ಗೆ ಹಗುರು ಮಾತನಾಡುವುದು ನಿಲ್ಲಿಸಿ: ಸಚಿವ ತಿಮ್ಮಾಪುರಗೆ ಎಚ್ಚರಿಕೆ ಕೊಟ್ಟ ಶಾಂತಗೌಡ

ಇತ್ತೀಚೆಗೆ ತಿಮ್ಮಾಪುರ ಅವರು ಪಕ್ಷದ ಬಗ್ಗೆ ಕೇವಲವಾಗಿ ಮಾತನಾಡುತ್ತಿದ್ದು ಅವರಿಗೆ ಶೋಭೆ ತರುವಂತಹದಲ್ಲ ಎಂದರು. ತಮ್ಮ ಪಕ್ಷದಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ನೋಡಿಕೊಳ್ಳಲಿ ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ. ಅಭಿವೃದ್ಧಿ ಕೆಲಸ ಬಗ್ಗೆ ಚಿಂತನೆ ಮಾಡುವುದು ಬಿಟ್ಟು ಕೇವಲ ಬಿಜೆಪಿ ಬಗ್ಗೆ ಟೀಕೆ ಮಾಡುತ್ತ ಹೊರಟಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ: ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ 

Bagalkot BJP District President Shantagoda Patil Slams Minister RB Timmapur grg
Author
First Published Sep 21, 2023, 8:43 PM IST

ಬಾಗಲಕೋಟೆ(ಸೆ.21):  ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರು ಬಿಜೆಪಿ ಪಕ್ಷದ ನಾಯಕರ ಬಗ್ಗೆ ಹಗುರುವಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಎಚ್ಚರಿಕೆ ನೀಡಿದರು.

ಪತ್ರಿಕಾಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ತಿಮ್ಮಾಪುರ ಅವರು ಪಕ್ಷದ ಬಗ್ಗೆ ಕೇವಲವಾಗಿ ಮಾತನಾಡುತ್ತಿದ್ದು ಅವರಿಗೆ ಶೋಭೆ ತರುವಂತಹದಲ್ಲ ಎಂದರು. ತಮ್ಮ ಪಕ್ಷದಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ನೋಡಿಕೊಳ್ಳಲಿ ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ. ಅಭಿವೃದ್ಧಿ ಕೆಲಸ ಬಗ್ಗೆ ಚಿಂತನೆ ಮಾಡುವುದು ಬಿಟ್ಟು ಕೇವಲ ಬಿಜೆಪಿ ಬಗ್ಗೆ ಟೀಕೆ ಮಾಡುತ್ತ ಹೊರಟಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ತಾವು ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಸಮಸ್ಯೆ, ಅಭಿವೃದ್ಧಿ ಕೆಲಸದ ಬಗ್ಗೆ ಗಮನ ಹರಿಸಬೇಕು. ಕೇವಲ ಬಿಜೆಪಿಗೆ ವಿರುದ್ಧ ಹೇಳಿಕೆಗಳನ್ನು ನೀಡುತ್ತ ಕಾಲ ಕಳೆಯುತ್ತಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿಯವ್ರು ಇಲ್ದೆ ಚೈತ್ರಾರಿಂದ ಇಂತಹ ಕೆಲಸ ನಡೆಯಲ್ಲ: ಸಚಿವ ತಿಮ್ಮಾಪುರ

ಎಸ್ಸಿ,ಎಸ್ಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಇದನ್ನು ಮೊದಲು ನಿಲ್ಲಿಸಬೇಕು. ಪೂರ್ವಗ್ರಹ ಪೀಡಿತರಾಗಿ ಸಚಿವರು ಮಾತನಾಡುತ್ತಿದ್ದಾರೆ. ಕೂಲಂಕೂಷವಾಗಿ ಪರಿಶೀಲಿಸಿ ಅರಿತು ಮಾತನಾಡಬೇಕು ಎಂದರು.

ಬಿಜೆಪಿ ಜಿಲ್ಲಾ ಮಾಧ್ಯಮ ವಕ್ತಾರ ಸತ್ಯನಾರಾಯಣ ಹೇಮಾದ್ರಿ ಮಾತನಾಡಿ, ನಮ್ಮ ಪಕ್ಷದ ನಾಯಕರು ಚರ್ಚಿಸಿ ವಿರೋಧ ಪಕ್ಷದ ನಾಯಕನನ್ನು ಶೀಘ್ರದಲ್ಲಿಯೇ ಆಯ್ಕೆ ಮಾಡುತ್ತಾರೆ. ಕೇಂದ್ರದ ಬಿಜೆಪಿ ಸರ್ಕಾರವು ಮಹಿಳಾ ಮೀಸಲಾತಿ ಘೋಷಣೆ ಮಾಡಿದ್ದು, ಸ್ವಾಗತಾರ್ಹ. ಯಾವ ಸರ್ಕಾರವೂ ಮಾಡದ್ದನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ ಎಂದರು.ಗೋಷ್ಠಿಯಲ್ಲಿ ಬೆಳಗಾವಿ ವಿಭಾಗದ ಸಹ ಪ್ರಭಾರಿ ಬಸವರಾಜ ಯಂಕಂಚಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ ಇದ್ದರು. 

Follow Us:
Download App:
  • android
  • ios