ಆತ್ಮಹತ್ಯೆ ಭಾಗ್ಯ ಕರುಣಿಸಿದ ರಾಜ್ಯ ಸರ್ಕಾರ: ಶಾಂತಗೌಡ

ಸಚಿನ್ ಪ್ರಕರಣದಲ್ಲಿ ಸತ್ಯ ಹೊರಬರಬೇಕಿದ್ದರೆ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡಬೇಕು. ಪೊಲೀಸ್ ಇಲಾಖೆ ಅವರ ಕೈಯಲ್ಲಿ ಇರುವುದರಿಂದ ನ್ಯಾಯ ಸಿಗುವ ಭರವಸೆ ನಮಗೆ ಇಲ್ಲ ಎಂದ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ

Bagalkot BJP district president Shantagouda Patil Slams Karnataka Congress Government grg

ಬಾಗಲಕೋಟೆ(ಜ.02):  ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರು. ಅವರ ಆಪ್ತರಿಂದ ನೊಂದು ಅಧಿಕಾರಿಗಳು, ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯ ಸರ್ಕಾರ ಆತ್ಮಹತ್ಯೆ ಭಾಗ್ಯವನ್ನು ಕರುಣಿಸಿದಂತೆ ಭಾವನೆ ಮೂಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು. 

ನಗರದ ಪ್ರೆಸ್‌ ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದರ್‌ ತಾಲೂಕಿನ ಬಾಲ್ಕಿ ತಾಲೂಕಿನ ಗುತ್ತಿಗೆದಾರ ಸಚಿನ್ ಪಾಂಚಾಳ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 7 ಪುಟದ ಮೃತ್ಯು ಪತ್ರದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಆಪ್ತನ ಹೆಸರನ್ನು ಉಲ್ಲೇಖಿಸಿದ್ದು, ಸಚಿನ್ ಸಹೋದರಿಯರು ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದಾಗ ಪೊಲೀಸರು ವಿನಾಕಾರಣ ಅಲೆದಾಡುವಂತೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಸಚಿವ ಪ್ರಭಾವ ಬಳಕೆಯಾಗಿರುವುದು ಸಷ್ಟವಾಗಿದೆ. ಕೂಡಲೇ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು. 

ಕಾಂಗ್ರೆಸ್ ಯಾವತ್ತೂ ಅಂಬೇಡ್ಕರ್‌ಗೆ ಒಳ್ಳೆಯದು ಬಯಸಿಲ್ಲ: ಸಂಸದ ಗದ್ದಿಗೌಡರ್ ಕಿಡಿ

ರಾಜೀನಾಮೆ ಅವರ ಸಿದ್ದರಾಮಯ್ಯ ಅವರ ಸರ್ಕಾರ ಆತ್ಮಹತ್ಯೆ ಭಾಗ್ಯವನ್ನು ಕರುಣಿಸಿದ್ದು, ಭ್ರಷ್ಟಾಚಾರ ಬಯಲಾಗಿರುವುದರಿಂದ ವಾಲ್ಮೀಕಿ ನಿಗಮದ ಆಕೌಂಟೆಂಟ್ ಚಂದ್ರಶೇಕರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಬಿಜೆಪಿ ಹೋರಾಟಕ್ಕೆ ಮಣಿದು ಅಂದು ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕಾಯಿತು. ಬಳಿಕ ಲಕ್ಷ್ಮೀ ಹೆಬ್ಬಾಳ್ಳರ ಅವರ ಆಪ್ತಸಹಾಯಕನ ಹೆಸರು ಬರೆದಿಟ್ಟು ರುದ್ರಣ್ಣ ಯಡವಣ್ಣವರ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದರು. ದಾವಣಗೆರೆಯಲ್ಲಿ ಗುತ್ತಿಗೆದಾರರೊಬ್ಬರು ಬಾಕಿ ಹಣ ಬಾರದಕ್ಕೆ ಜೀವಬಿಟ್ಟಿದ್ದರೆ, ಮಾಗಡಿಯಲ್ಲಿ ಕ್ರಷರ್ ಮಾಲೀಕರೊಬ್ಬರು ಲಂಚ ಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಇಷ್ಟೇ ಅಲ್ಲದೇ ಯಾದಗಿರಿಯಲ್ಲಿ ಸ್ಥಳೀಯ ಶಾಸಕನ ಪುತ್ರನ ಒತ್ತಡ ತಾಳದೆ ಪಿಎಸೈ ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ರಾಜ್ಯ ಸರ್ಕಾರದ ಭ್ರಷ್ಟಾಚಾರ ಎತ್ತಿ ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದರು.

ಇದಲ್ಲದೇ ಮಹಾರಾಷ್ಟ್ರ ಸುಪಾರಿ ಕಿಲ್ಲರ್‌ಗಳನ್ನು ಬಳಸಿ ಸಿದ್ದಲಿಂಗ ಸ್ವಾಮೀಜಿ, ಶಾಸಕ ಬಸವರಾಜ ಮತ್ತಿ ಮೂಡ. ಬಿಜೆಪಿ ಮುಖಂಡ ಚಂದು ಪಾಟೀಲ, ಮಣಿಕಂಠ ರಾಠೋಡ ಅವರ ಕೊಲೆಗೂ ಸಂಚು ರೂಪಿಸಲಾಗಿತ್ತು ಎಂದು ಸಚಿನ್ ಡೆತ್‌ ನೋಟ್‌ನಲ್ಲಿ ಉಲ್ಲೇಖವಿದೆ. ಮಹಾರಾಷ್ಟ್ರದ ಸುಪಾರಿ ಕಿಲ್ಲರ್‌ಗಳನ್ನು ಬಳಸಿ ಸಿದ್ದಲಿಂಗ ಶ್ರೀಗಳ ಧ್ವನಿ ಅಡಗಿಸುವ ಗಂಭೀರ ವಿಚಾರ ಡೆತ್‌ ನೋಟ್‌ ನಲ್ಲಿ ಇರುವುದರಿಂದ ಸಿಬಿಐ ತನಿಖೆ ನಡೆಸಬೇಕು ಎಂದು ತಿಳಿಸಿದರು. ಜಿಲ್ಲಾ ವಕ್ತಾರ

ಸತ್ಯನಾರಾಯಣ ಹೇಮಾದ್ರಿ, ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಮುತ್ತಣ್ಣಬೇಣ್ಣೂರ, ಮಾಧ್ಯಮ ಸಂಚಾಲಕ ಶಿವಾನಂದ ಸುರಪುರ, ಕಾರ್ಯದರ್ಶಿ ಮುತ್ತು ಉಳ್ಳಾಗಡ್ಡಿ ಇತರರು ಇದ್ದರು.
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈಶ್ವರಪ್ಪನವರ ವಿರುದ್ಧ ಅಪವಾದ ಬಂದಾಗ ಅವರು ತಕ್ಷಣ ರಾಜೀನಾಮೆ ನೀಡಿದ್ದರು. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ ಅವರು ರಾಜೀನಾಮೆ ನೀಡಿದ್ದರು. ಸಚಿನ್ ಪ್ರಕರಣದಲ್ಲಿ ಸತ್ಯ ಹೊರಬರಬೇಕಿದ್ದರೆ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡಬೇಕು. ಪೊಲೀಸ್ ಇಲಾಖೆ ಅವರ ಕೈಯಲ್ಲಿ ಇರುವುದರಿಂದ ನ್ಯಾಯ ಸಿಗುವ ಭರವಸೆ ನಮಗೆ ಇಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ತಿಳಿಸಿದ್ದಾರೆ. 

Latest Videos
Follow Us:
Download App:
  • android
  • ios