ಬೆಂಗಳೂರು, [ನ.06]: ಬಳ್ಳಾರಿ ಲೋಕಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸಮ್ಮಿಶ್ರ ಸರ್ಕಾರದ ಅಭ್ಯರ್ಥಿ ವಿ.ಎಸ್​.ಉಗ್ರಪ್ಪ ಭರ್ಜರಿ ಗೆಲುವು ಬಾರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಶುಭಾಶಯ ಕೋರಿದ್ದಾರೆ. 

‘ಬಳ್ಳಾರಿಯಲ್ಲಿ ನರಕಚತುರ್ದಶಿಯ ಅರ್ಥಪೂರ್ಣ ಆಚರಣೆ, ಕತ್ತಲೆಯಿಂದ ಬೆಳಕಿನ ಕಡೆಗೆ  ಜನಪಯಣ, ನಾಡ ಬಾಂಧವರಿಗೆ ದೀಪಾವಳಿಯ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

ಹಾಗೆ ಜಮಖಂಡಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಅಭ್ಯರ್ಥಿ ಆನಂದ ನ್ಯಾಮಗೌಡ ಗೆಲುವು ಸಾಧಿಸಿದ್ದಾರೆ. ಅವರಿಗೂ ಟ್ವೀಟ್ ಮಾಡಿ ಶುಭಾಶಯ ಕೋರಿದ ಸಿದ್ದರಾಮಯ್ಯ, ಜಮಖಂಡಿ ವಿಧಾನಸಭಾ ಉಪಚುನಾವಣೆಯಲ್ಲಿ ಜಯಗಳಿಸಿರುವ ಆನಂದ ನ್ಯಾಮಗೌಡ ಅವರಿಗೆ ಅಭಿನಂದನೆಗಳು.

 ಪಕ್ಷದ ಜಯಕ್ಕಾಗಿ ಶ್ರಮಿಸಿದ ನಾಯಕರು ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳು. ನಮ್ಮ ಅಭ್ಯರ್ಥಿಯನ್ನ ಆಶೀರ್ವದಿಸಿದ ಕ್ಷೇತ್ರದ ಮತದಾರರಿಗೆ ಕೃತಜ್ಞತೆಗಳು ತಿಳಿಸಿ ಟ್ವೀಟ್ ಮಾಡಿದ್ದಾರೆ.