ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್ ಗೆಲ್ಲುವುದಕ್ಕಾಗಿ ಬರೋಬ್ಬರಿ 500 ಕೋಟಿ ರೂ. ಖರ್ಚು ಮಾಡಿದ್ದಾರೆಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಆರೋಪಿಸಿದ್ದಾರೆ.

ರಾಮನಗರ ( ಜೂ.01): ರಾಜ್ಯದ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಗೆಲವಿಗಾಗಿ 400 ರಿಂದ 500 ಕೋಟಿ ರೂ. ಖರ್ಚು ಮಾಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಆರೋಪ ಮಾಡಿದ್ದಾರೆ.

Add Asianetnews Kannada as a Preferred SourcegooglePreferred

ರಾಮನಗರದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ನಮ್ಮದು ಜನಬಲ, ಕಾಂಗ್ರೆಸ್ ನವರದ್ದು ಹಣಬಲ. ಡಿಕೆ ಬ್ರದರ್ಸ್ ದೈತ್ಯಶಕ್ತಿ, ಹಣಬಲ, ಅಧಿಕಾರ ಬಲವನ್ನು ಚುನಾವಣೆಯಲ್ಲಿ ತೋರಿಸಿದ್ದಾರೆ. ಅವರೇ ಸಮಸ್ಯೆ ಸೃಷ್ಠಿಸಿ, ಅವರೇ ಅದನ್ನ ಬಗೆಹರಿಸುತ್ತಾರೆ. ಅಂತವರ ನಡುವೆ ನಮ್ಮದು ರೋಚಕ ಹೋರಾಟ ನಡೆದಿದೆ. ಆದರೆ, ಕಾಂಗ್ರೆಸ್ ನವರು ಆಫ್‌ ದ ರೆಕಾರ್ಡ್ 400-500ಕೋಟಿ ಖರ್ಚು ಮಾಡಿದ್ದೀವಿ ಎಂದು ಹೇಳಿದ್ದಾರೆ. ಅಷ್ಟು ಖರ್ಚು ಮಾಡಿ ಗೆಲ್ಲಲೇಬೇಕು ಅನ್ನೋ ಹಠ ಇದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅಂತ ಆಸೆ ಇಟ್ಕೊಂಡಿದ್ದಾರೆ. ಆದರೆ, ಈ ಚುನಾವಣೆಯಲ್ಲಿ ಅವರ ತಮ್ಮ ಸೋತರೆ, ಅವರ ಸಿಎಂ ಕನಸಿಗೆ ಹಿನ್ನಡೆ ಆಗುತ್ತದೆಂದು ಇಷ್ಟೊಂದು ಹಣ ಖರ್ಚು ಮಾಡಿದ್ದಾರೆ. ಅಧಿಕಾರ ದುರುಪಯೋಗ ಮಾಡಿಕೊಂಡು ಕೆಲವು ಮತದಾರರನ್ನ ಬೆದರಿಸಿದ್ದಾರೆ ಎಂದು ಆರೋಪಿಸಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಜಾಮೀನು ಮಂಜೂರು

ಈ ಚುನಾವಣೆ ಎಷ್ಟು ಹಣ ಖರ್ಚಾಗಿದೆ ಎಂಬುದು ಲೆಕ್ಕಕ್ಕೇ ಸಿಗ್ತಿಲ್ಲ. ಆದರೂ, ಊಹೆಗೂ ಮೀರಿದ ಫಲಿತಾಂಶ ಬರುತ್ತೆ ಎಂಬ ನಿರೀಕ್ಷೆಯಲ್ಲಿದ್ದೇವೆ. ನಮ್ಮ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಗೆದ್ದೇ ಗೆಲ್ತಾರೆ ಅನ್ನೋ ವಿಶ್ವಾಸ ಇದೆ. ಆದರೂ ಅವರ ಹಣಬಲ ವರ್ಕೌಟ್ ಆಗುತ್ತಾ ನೋಡಬೇಕು. ಚುನಾವಣೆಯ ಹಿಂದಿನ ದಿನ ಮಹಿಳೆಯರಿಗೆ 2,000 ರೂ. ಜಮಾ ಮಾಡಿದ್ದಾರೆ. ಎಲ್ಲರ ಅಕೌಂಟ್ ಗೆ ಹಣ ಹಾಕಿದ್ದೀವಿ, ಮಹಿಳಾ ಮತದಾರರು ಗೆಲ್ಲಿಸುತ್ತಾರೆ ಎಂದು ಸ್ವತಃ ಕಾಂಗ್ರೆಸ್‌ನವರೇ ಹೇಳಿದ್ದಾರೆ. ಈಗ ಫಲಿತಾಂಶಕ್ಕೆ ಕಾದು ನೋಡೊಣ, ಜನಾಭಿಪ್ರಾಯ ಏನಿದೆ ಅನ್ನೋದು ಗೊತ್ತಾಗುತ್ತದೆ. ಈವರೆಗೂ ನಾವೇನು ಕಾನ್ಫಿಡೆನ್ಸ್ ಕಳೆದುಕೊಂಡಿಲ್ಲ. ನಮಗೆ ಎರಡೂ ಪಕ್ಷಗಳ ಬಲ ಮತ್ತು ಶಕ್ತಿ ಇದೆ ಎಂದು ಹೇಳಿದರು.

ನಮ್ಮ ಪಕ್ಷದಿಂದ ಡಾ.ಸಿ.ಎನ್. ಮಂಜುನಾಥ್ ಅವರ ಒಳ್ಳೆತನ ಮುಂದಿಟ್ಟುಕೊಂಡು ಜನರ ಓಟ್ ಕೇಳಿದ್ದೇವೆ‌. ಹಾಗಾಗಿ, ಫಲಿತಾಂಶ ಏನಾಗುತ್ತೋ ನೋಡೊಣ. ಡಾಕ್ಟರ್ ಗೆದ್ದರೆ ಜನಶಕ್ತಿಗೆ ಬೆಲೆ ಇದೆ ಅನ್ನೋದು ಗೊತ್ತಾಗುತ್ತದೆ. ಇನ್ನು ಡಿ.ಕೆ. ಶಿವಕುಮಾರ್ ಶತ್ರು ಭೈರವಿ ಯಾಗ ಮಾಡಿದ ವಿಚಾರವನ್ನು ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಕೇರಳದ ಸಚಿವರು, ದೇವಾಲಯ ಆಡಳಿತ ಮಂಡಳಿ ಆ ರೀತಿ ಯಾವುದೇ ಪೂಜೆ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಡಿಕೆಶಿ ಅವರನ್ನೇ ಕೇಳಬೇಕು ಎಂದು ಹೇಳಿದರು.

ಸರ್ಕಾರಿ ಶಾಲೆಗೆ ಬಂದ ವಿದ್ಯಾರ್ಥಿಗೆ ಪಾದಪೂಜೆ ಮಾಡಿದ ಶಿಕ್ಷಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ

ವಿಧಾನಪರಿಷತ್ ಚುನಾವಣೆ ವಿಚಾರದ ಬಗ್ಗೆ ಮಾತನಾಡಿ ಎನ್‌ಡಿಎ ಅಭ್ಯರ್ಥಿ ಅ.ದೇವೇಗೌಡರು ಕಣದಲ್ಲಿದ್ದಾರೆ. ನಮ್ಮ ತಾಲೂಕಿನಲ್ಲಿ 5,500 ಪದವೀಧರರು ಇದ್ದಾರೆ. ಹಾಗಾಗಿ, ಇಂದು ಸಭೆ ಮಾಡಿ ಎನ್‌ಡಿಎ ಅಭ್ಯರ್ಥಿ ಗೆಲುವಿನ ಬಗ್ಗೆ ಸಮಾಲೋಚನೆ ಮಾಡ್ತೇವೆ. ಹಿಂದೆಯೂ ಅ.ದೇವೇಗೌಡರು ಪರಿಷತ್ತ್ ಸದಸ್ಯರಾಗಿ ಚೆನ್ನಾಗಿ ಕೆಲಸ ಮಾಡಿದ್ದಾರೆ. ಈ ಬಾರಿಯೂ ಪದವೀಧರರ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೇಳಿದರು.