Karnataka Politics: ಶಾಸಕ ಯತ್ನಾಳರೇನು ಬಿಜೆಪಿ ಹೈಕಮಾಂಡಾ?: ಸಚಿವ ಬಿ.ಸಿ.ಪಾಟೀಲ್ ಪ್ರಶ್ನೆ
ಮತ್ತೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಈಗಾಗಲೇ ನಮ್ಮ ರಾಷ್ಟ್ರೀಯ ನಾಯಕ ಅಮಿತ್ ಷಾ ಅವರು ಸ್ಪಷ್ಟಪಡಿಸಿದ್ದಾರೆ. ಈ ವಿಚಾರದಲ್ಲಿ ಹೇಳಿಕೆ ನೀಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳರೇನು ಬಿಜೆಪಿ ಹೈಕಮಾಂಡಾ? ಎಂದು ಸಚಿವ ಬಿ.ಸಿ ಪಾಟೀಲ್ ಪ್ರಶ್ನಿಸಿದ್ದಾರೆ.
ವರದಿ: ಪವನ್ ಕುಮಾರ್, ಏಷ್ಯಾನೆಟ್ ಸುವರ್ಣ ನ್ಯೂಸ್ ಹಾವೇರಿ
ಹಾವೇರಿ (ಮೇ.05): ಮತ್ತೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಈಗಾಗಲೇ ನಮ್ಮ ರಾಷ್ಟ್ರೀಯ ನಾಯಕ ಅಮಿತ್ ಷಾ (Amit Shah) ಅವರು ಸ್ಪಷ್ಟಪಡಿಸಿದ್ದಾರೆ. ಈ ವಿಚಾರದಲ್ಲಿ ಹೇಳಿಕೆ ನೀಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳರೇನು (Basanagouda Patil Yatnal) ಬಿಜೆಪಿ (BJP) ಹೈಕಮಾಂಡಾ? ಎಂದು ಸಚಿವ ಬಿ.ಸಿ ಪಾಟೀಲ್ (BC Patil) ಪ್ರಶ್ನಿಸಿದ್ದಾರೆ. ಇಂದು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಹಲಗೇರಿ ಗ್ರಾಮದ ಬಳಿ ರೈತರ ಜಮೀನಿಗೆ ಭೇಟಿ ನೀಡಿದ್ದ ವೇಳೆ ಬಿ.ಸಿ ಪಾಟೀಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಮುಖ್ಯಮಂತ್ರಿ ಬದಲಾವಣೆ ಎಂಬುದಿಲ್ಲ. ಅಮಿತ್ ಷಾ ಅವರು ಬಂದಾಗ ಸಿಎಂ ಬದಲಾವಣೆ ಕೂಗಿಲ್ಲ ಅಂತಾ ಹೇಳಿ ಹೋಗಿದ್ದಾರೆ.
ಸಿಎಂ ಬದಲಾವಣೆ ಇಲ್ಲ ಅಂತಾ ಈಗಾಗಲೆ ಅರುಣ್‌ಸಿಂಗ್ (ArunSingh), ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ (Nalin Kumar Kateel) ಮತ್ತು ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಇದ್ದರೆ ಕರೆದು ಹೇಳುತ್ತಾರೆ. ದಿನವೂ ಸಿಎಂ ಬದಲಾವಣೆ, ಮಂತ್ರಿಮಂಡಲ ಬದಲಾವಣೆ ಅನ್ನುತ್ತಾ ಕೆಲವೊಂದು ಪಟ್ಟಭದ್ರ ಹಿತಾಸಕ್ತಿಗಳು ಆಡಳಿತವನ್ನ ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿವೆ ಎಂದರು. ಯತ್ನಾಳ ಬಿಜೆಪಿಯ ಹೈಕಮಾಂಡ್ ಏನೂ ಅಲ್ಲ. ಯತ್ನಾಳ ಹೇಳಿದರೆ ಮುಗೀತಾ? ಯತ್ನಾಳ್ ಅಮಿತ್ ಷಾ ಲೇವಲ್ ಇದ್ದಾರಾ? ಎಂದು ವ್ಯಂಗ್ಯವಾಡಿದರು..
ಭಯೋತ್ಪಾದಕರಿಗೆ ಸಹಕಾರ ನೀಡಿದಂತಾಗಲಿದೆ, ಜಮೀರ್‌ಗೆ ತಿವಿದ ಬಿಸಿ ಪಾಟೀಲ್
ಸಚಿವ ಅಶ್ವಥ್ ನಾರಾಯಣ ಅವರನ್ನು ಹೊಣೆ ಮಾಡೋದು ಸರಿಯಲ್ಲ: ಪಿಎಸ್‌ಐ ನೇಮಕಾತಿ ಅಕ್ರಮ (PSI Recruitment Scam) ವಿಚಾರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ಕಿಡಿಕಾರಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಹಲಗೇರಿ ಗ್ರಾಮದಲ್ಲಿ ಮಾತನಾಡಿದ ಬಿ.ಸಿ ಪಾಟೀಲ್, ಸಿದ್ದರಾಮಯ್ಯ ಅವರಿಗೆ ಸರಕಾರ ಬೇಗ ರಾಜೀನಾಮೆ ಕೊಡಬೇಕು. ತಾವು ಸಿಎಂ ಆಗಬೇಕು ಅನ್ನೋ ಬಹಳ ಹಂಬಲ ಆಸೆ ಇದೆ.
ಇದಕ್ಕಿಂತಲೂ ಹೆಚ್ಚಿನ ಹಂಬಲ, ಆಸೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಅವರಿಗಿದೆ. ಎಲ್ಲದಕ್ಕೂ ರಾಜೀನಾಮೆ ಕೊಡಬೇಕು ಅಂತಾ ಹೇಳಿದರೆ ಹೇಗೆ? ಎಂದರು. ಹಿಂದೆ ಕೆ.ಜೆ.ಜಾರ್ಜ್ ಪ್ರಕರಣ ಆದಾಗ ಸಿದ್ದರಾಮಯ್ಯನವರು ರಾಜೀನಾಮೆ ಕೊಟ್ಟಿದ್ರಾ? ಎಂದು ತಿರುಗೇಟು ನೀಡಿದರು. ಸಚಿವ ಅಶ್ವತ್ಥನಾರಾಯಣ (Dr CN Ashwath Narayan) ಸಂಬಂಧಿಕರು ಯಾರೋ ಮಾಡಿದರು ಅಂತಾ ಅಶ್ವತ್ಥ ನಾರಾಯಣ ಹೊಣೆ ಮಾಡುವುದು ಸರಿಯಲ್ಲ ಎಂದು ಬಿ.ಸಿ ಪಾಟೀಲ್ ಸಚಿವ ಅಶ್ವಥ್ ನಾರಾಯಣ ಪರ ಬ್ಯಾಟ್ ಬೀಸಿದರು.
ಗೃಹ ಸಚಿವರು ಅತ್ಯಂತ ಸಮರ್ಥರು: ಸಚಿವ ಬಿ.ಸಿ. ಪಾಟೀಲ
ಗೃಹ ಖಾತೆ ಮೇಲಿನ ಆಸೆ ವ್ಯಕ್ತಪಡಿಸಿದ ಸಚಿವ ಬಿಸಿ ಪಾಟೀಲ್: ಕರ್ನಾಟಕದಲ್ಲಿ ಪದೇ-ಪದೇ ಕಾನೂನು ಸುವ್ಯವಸ್ಥೆ ಹಾಲಾಗುವಂತೆ ಘಟನೆಗಳು ನಡೆಯುತ್ತಲೇ ಇವೆ. ಇದರ ಮಧ್ಯೆ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರ ಕಾರ್ಯವೈಖರಿ ಬಗ್ಗೆ ಸ್ವಪಕ್ಷದ ನಾಯಕರುಗಳೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದರ ಮಧ್ಯೆ ಸಚಿವರೊಬ್ಬರು ಗೃಹ ಖಾತೆ ಕೊಟ್ಟರೆ ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದಿದ್ದರು.. ಹೌದು! ಕೃಷಿ ಸಚಿವ ಬಿಸಿ ಪಾಟೀಲ್ ಅವರು ಗೃಹ ಖಾತೆ ಕೊಟ್ಟರೆ ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ಬಿಸಿ ಪಾಟೀಲ್ ಅವರು ಗೃಹ ಖಾತೆಯ ಆಸೆ ಹೊರಹಾಕಿದ್ದರು.ಮೈಸೂರಿನಲ್ಲಿ ಏ.22 ರಂದು ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ಗೃಹ ಖಾತೆ ಕೊಟ್ಟರೆ ಸಮರ್ಥವಾಗಿ ನಿರ್ವಹಿಸುತ್ತೇನೆ. 25 ವರ್ಷ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ. ಆದರೆ ಇದು ಸಿಎಂ ವಿವೇಚನೆಗೆ ಬಿಟ್ಟ ವಿಚಾರ ಎಂದು ಹೇಳಿದ್ದರು.