Asianet Suvarna News Asianet Suvarna News

ದೇವೇಗೌಡ್ರನ್ನ ಭೇಟಿಯಾಗಲು ಸಿಎಂಗೆ ಹೈಕಮಾಂಡ್ ಹೇಳಿತ್ತಾ? ಹೊಸ ಬಾಂಬ್ ಸಿಡಿಸಿದ ಬಿಜೆಪಿ ನಾಯಕ

* ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್
* ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡುವಂತೆ ಹೈಕಮಾಂಡ್ ಬೊಮ್ಮಾಯಿಗೆ ಹೇಳಿತ್ತಾ?
* ಸಂಚಲನ ಮೂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ

Basangowda patil yatnal Reacts about CM Basavaraj Bommai Met HD Devegowda rbj
Author
Bengaluru, First Published Aug 2, 2021, 7:48 PM IST
  • Facebook
  • Twitter
  • Whatsapp

ವಿಜಯಪುರ, (ಅ.02): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

ನಗರದಲ್ಲಿ ಇಂದು (ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ್ದಾರೆ ಎಂದು ಅಚ್ಚರಿ ಹೇಳಿಕೆ ನೀಡಿದರು.

ಬೊಮ್ಮಾಯಿ ಸರ್ಕಾರಕ್ಕೆ ಸಿಕ್ತು ದೇವೇಗೌಡ್ರ ಬಲ!

 ಯಡಿಯೂರಪ್ಪ ಹೇಳಿದಂತೆ ಬೊಮ್ಮಾಯಿ ಕೇಳದಿದ್ದರೆ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಸಾಧ್ಯತೆ ಇದೆ. ಅಂತಹ ಸಂದರ್ಭ ಎದುರಾದರೆ ಜೆಡಿಎಸ್‌ ಬೆಂಬಲ ಪಡೆಯಲಾಗುವುದು ಎಂಬ ಸಂದೇಶವನ್ನು ರವಾನಿಸುವ ಉದ್ದೇಶದಿಂದಲೇ ವರಿಷ್ಠರು ಬೊಮ್ಮಾಯಿ-ದೇವೇಗೌಡ ಭೇಟಿ ಮಾಡಿಸಿದ್ದಾರೆ ಎಂದು ಹೇಳಿದರು.

ಬೊಮ್ಮಾಯಿ ಸರ್ಕಾರಕ್ಕೆ ಸಂಕಷ್ಟ ಎದುರಾದರೆ ತಮ್ಮ ಪಕ್ಷ ಬೆಂಬಲಕ್ಕೆ ನಿಲ್ಲಲಿದೆ ಎಂದು ಈ ಕಾರಣಕ್ಕಾಗಿಯೇ ದೇವೇಗೌಡರು ಘೋಷಿಸಿರುವುದು ಎಂದು ಯತ್ನಾಳ್ ತಿಳಿಸಿದರು.

ಚಿತ್ರಗಳು: ಗುರು ಶಿಷ್ಯ ಭೇಟಿ ಮಧ್ಯೆ ಸೋಮಣ್ಣ-ರೇವಣ್ಣ

ಒಂದು ವೇಳೆ 10-20 ಮಂದಿ ಶಾಸಕರು ಯಡಿಯೂರಪ್ಪನವರ ಜೊತೆ ಹೋದರೆ ದೇವೇಗೌಡ, ಕುಮಾರಸ್ವಾಮಿ ಅವರು ಬೊಮ್ಮಾಯಿ ಸರ್ಕಾರಕ್ಕೆ ಬೇಷರತ್‌ ಬೆಂಬಲ ನೀಡುವ ಸಾಧ್ಯತೆ ಇದೆ ಎಂದು ಹೇಳುವ ಮೂಲಕ ಯತ್ನಾಳ್ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದರು.

ಬೊಮ್ಮಾಯಿ ಸರ್ಕಾರದ ಬೆನ್ನಿಗೆ ಚೂರಿ ಹಾಕಿ ಇಳಿಸುವ ಕೆಲಸ ಯಾವುದೇ ಕಾರಣಕ್ಕೂ ಮಾಡಬಾರದು. ರಾಜ್ಯ ಬಿಜೆಪಿಯಲ್ಲಿ ಎರಡನೇ ಹಂತದ ನಾಯಕತ್ವ ಬೆಳೆದಿದೆ. ಯಡಿಯೂರಪ್ಪ ಸೇರಿದಂತೆ ಬಿಜೆಪಿ ಹಿರಿಯ ನಾಯಕರು ರಾಜ್ಯ ಸರ್ಕಾರಕ್ಕೆ ಅಗತ್ಯ ಸಲಹೆ, ಸಹಕಾರ, ಮಾರ್ಗದರ್ಶನ ನೀಡುತ್ತಾ, ಕೊನೆ ಉಸಿರು ಇರುವವರೆಗೆ ತಮ್ಮ ಮೊಮ್ಮಕ್ಕಳು, ಮರಿ ಮೊಮ್ಮಕ್ಕಳನ್ನು ಆಡಿಸುತ್ತಾ ನಿವೃತ್ತಿ ಜೀವನವನ್ನು ನಡೆಸಬೇಕು ಎಂದು ಸಲಹೆ ನೀಡಿದರು.

ಯಡಿಯೂರಪ್ಪ ಅವರು ತಮ್ಮ ಮಗನನ್ನು ಉತ್ತರಾಧಿಕಾರಿಯಾಗಿ ಮಾಡುವ ಸಲುವಾಗಿಯೇ ಹೈಕಮಾಂಡ್ ಬಳಿ ಹಠಹಿಡಿದು ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ತಾತ್ಕಾಲಿಕವಾಗಿ ನಿಯೋಜನೆ ಮಾಡಿಸಿಕೊಂಡು ಬಂದರು. ಆದರೆ, ಅದು ನಡೆಯುವ ಸಾಧ್ಯತೆ ಇಲ್ಲ ಎಂದು ಟಾಂಗ್ ಕೊಟ್ಟರು.

Follow Us:
Download App:
  • android
  • ios