Asianet Suvarna News Asianet Suvarna News

ರಂಗೇರಿದ ಬೈ ಎಲೆಕ್ಷನ್: ಸಿದ್ದರಾಮಯ್ಯನವರನ್ನ ಭೇಟಿಯಾದ ಅಭ್ಯರ್ಥಿ

ರಾಜ್ಯದಲ್ಲಿ ಉಪಚುನಾವಣೆ ಕಾವು ಜೋರಾಗಿದ್ದು, ಅಭ್ಯರ್ಥಿಗಳು ಸಹ ತಮ್ಮ ಪರ ಪ್ರಚಾರಕ್ಕೆ ಬರುವಂತೆ ಪಕ್ಷದ ನಾಯಕರುಗಳನ್ನು ದುಂಬಾಲು ಬಿದ್ದಿದ್ದಾರೆ.

basavakalyan By Poll Congress Candidate Mallamma Meets Siddaramaiah rbj
Author
Bengaluru, First Published Mar 20, 2021, 3:07 PM IST

ಬೆಂಗಳೂರು, (ಮಾ.20): ರಾಜ್ಯದಲ್ಲಿ ಉಪಚುನಾವಣೆಗೆ ದಿನಾಂಕ ಪ್ರಕಟಗೊಂಡ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಶುರುವಾಗಿದ್ದು, ಗೆಲುವಿಗಾಗಿ ನಾಯಕರು ತಂತ್ರಗಳನ್ನ ರೂಪಿಸುತ್ತಿದ್ದಾರೆ.

ಎರಡು ವಿಧಾನಸಭಾ ಕ್ಷೇತ್ರಗಳಾದ ಬಸವಕಲ್ಯಾಣ (ಬೀದರ್), ಮಸ್ಕಿ(ರಾಯಚೂರು) ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ದಿನಾಂ ಘೋಷಣೆಯಾಗಿದ್ದು, ಇದೇ ಎಪ್ರಿಲ್ 17ರಂದು ಉಪ ಚುನಾವಣೆ ನಡೆಯಲಿದೆ.

ಈಗಾಗಲೇ ಬೆಳಗಾವಿ ಹೊರತುಪಡಿಸಿ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ. ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಲ್ಲಮ್ಮ ನಾರಾಯಣರಾವ್ ಅವರು ಇಂದು (ಶನಿವಾರ)  ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಭೇಟಿಯಾದರು.

ಕರ್ನಾಟಕದ 3 ಕ್ಷೇತ್ರಗಳ ಉಪಚುನಾವಣೆಗಳಿಗೆ ದಿನಾಂಕ ಘೋಷಣೆ

ಸಿದ್ದರಾಮಯ್ಯ ಅವರು ಅಭ್ಯರ್ಥಿ ಮಲ್ಲಮ್ಮ ಅವರಿಗೆ ಶುಭ ಹಾರೈಸಿದರು. ಮಾಜಿ ಸಚಿವರಾದ ಜಮೀರ್ ಅಹಮದ್, ಟಿ.ಬಿ. ಜಯಚಂದ್ರ, ಶಾಸಕರಾದ ಬೈರತಿ ಸುರೇಶ್ ಹಾಜರಿದ್ದರು.

ಕಾಂಗ್ರೆಸ್ ಶಾಸಕ ಬಿ.ನಾರಾಯಣ ರಾವ್ ಅವರ ನಿಧನದಿಂದ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಅನುಕಂಪ ವರ್ಕೌಟ್ ಆಗಬಹುದು ಎನ್ನುವ ಆಲೋಷನೆಯಲ್ಲಿ ಕಾಂಗ್ರೆಸ್, ನಾರಾಯಣ ರಾವ್  ಅವರ ಪತ್ನಿ ಮಲ್ಲಮ್ಮ ಅವರಿಗೆ ಟಿಕೆಟ್ ನೀಡಿದೆ.

Follow Us:
Download App:
  • android
  • ios