ಬೆಂಗಳೂರು, (ಸೆ.24): ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ನಾರಾಯಣ ರಾವ್ (65) ನಿಧನರಾಗಿದ್ದಾರೆ.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣ ರಾವ್ ಅವರು ಇಂದು (ಗುರುವಾರ) ಕೊನೆಯುಸಿರೆಳೆದಿದ್ದಾರೆ.

ರಾಜ್ಯ ರಾಜಕಾರಣಿಗಳನ್ನು ದಿಗ್ಬ್ರಮೆಗೊಳಿಸಿದ ಸುರೇಶ್‌ ಅಂಗಡಿ ಹಠಾತ್‌ ನಿಧನ

ಒಂದು ವಾರದ ಹಿಂದೆ ಅವರಿಗೆ ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಶಾಸಕ ನಾರಾಯಣರಾವ್ ಅವರಿಗೆ ನ್ಯುಮೋನಿಯಾ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಸಮಸ್ಯೆಯಿದ್ದು, ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 

ದಿಢೀರ್ ಆರೋಗ್ಯ ಹದಗೆಟ್ಟಿದ್ದು ಕೃತಕ ಉಸಿರಾಟ (ವೆಂಟಿಲೇಟರ್) ವ್ಯವಸ್ಥೆ ಮಾಡಲಾಗಿತ್ತು.ಇದೀಗ ಚಿಕಿತ್ಸೆಗೂ ಸೂಕ್ತವಾಗಿ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.

ಬಿ. ನಾರಾಯಣರಾವ್ ಅವರು 2018ರ ವಿಧಾನಸಭೆ ಚುನಾವಣೆಯಲ್ಲಿ ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದಿಂದ ಮೊದಲ ಬಾರಿಗೆ ಗೆಲುವು ಸಾಧಿಸಿದ್ದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರ ಆಪ್ತ ವಲುದಲ್ಲಿ ಗುರುತಿಸಿಕೊಂಡಿದ್ದರು.