ಯಡಿಯೂರಪ್ಪಗೆ ಮಹತ್ವದ ಸ್ಥಾನಮಾನ ನೀಡಿದ ಬೊಮ್ಮಾಯಿ ಸರ್ಕಾರ

* ಮಾಜಿ ಸಿಎಂ ಯಡಿಯೂರಪ್ಪಗೆ ಭರ್ಜರಿ ಗಿಫ್ಟ್ ಕೊಟ್ಟ ಸಿಎಂ ಬೊಮ್ಮಾಯಿ
* ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಸಿಕ್ತು ಉತ್ತಮ ಸ್ಥಾನಮಾನ
* ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸ್ಥಾನ ಮಾನ ನೀಡಿದ ಬೊಮ್ಮಾಯಿ ಸರ್ಕಾರ

Basavaraj bommai Govt Gives Cabinet Ministers benefits To BS Yediyurappa rbj

ಬೆಂಗಳೂರು, (ಆ.07):  ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಸವರಾಜ ಬೊಮ್ಮಾಯಿ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ನೇಮಕ ಮಾಡಿದ್ದಾರೆ.

ಇದೀಗ ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರರು ಮಾಜಿ ಸಿಎಂ ಯಡಿಯೂರಪ್ಪಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ.

ಹೌದು....ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆಯ ಸ್ಥಾನ ನೀಡಿ ಬೊಮ್ಮಾಯಿ ಸರ್ಕಾರ ಆದೇಶ ಹೊರಡಿಸಿದೆ.

ಬಿಎಸ್‌ವೈ ಅವಧಿಯ 19 ಮಂದಿ ಅಧಿಕಾರಿಗಳಿಗೆ ಸಿಎಂ ಗೇಟ್‌ಪಾಸ್‌

ಈ ಹಿನ್ನೆಲೆಯಲ್ಲಿ  ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ‌ ಮುಂದುವರಿಕೆಯಾಗಿದೆ. ಬಸವರಾಜ ಬೊಮ್ಮಾಯಿ ಅಧಿಕಾರ ಮುಗಿಯುವ ತನಕ ಬಿಎಸ್‌ವೈಗೆ ಸಂಪುಟ ದರ್ಜೆಯ ಸ್ಥಾನಮಾನ ಮುಂದುವರಿಯಲಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಾಜೇಶ ಶಂಕ್ರಪ್ಪ ಸೂಳಿಕೇರಿ ಅಧಿಸೂಚನೆ ಹೊರಡಿಸಿದ್ದು, ನಿಕಟಪೂರ್ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯವನ್ನು ನೀಡುವಂತೆ ಆದೇಶಿಸಿದ್ದಾರೆ.

ಬಿಎಸ್‌ವೈ ಅವಧಿಯಲ್ಲಿ ನೇಮಕಗೊಂಡಿದ್ದ 10 ಹುದ್ದೆಗಳು ರದ್ದು, ರೇಣುಕಾಚಾರ್ಯ, ಸಂತೋಷ್‌ಗೆ ಶಾಕ್

ಹೊಸ ಮುಖ್ಯಮಂತ್ರಿಗಳು ಆಯ್ಕೆಯಾದಾಗ ಹಿಂದೆ ಇದ್ದ ಮುಖ್ಯಮಂತ್ರಿಗಳಿಗೆ ಸಂಪುಟ ದರ್ಜೆ ನೀಡಲಾಗುತ್ತದೆ. ಹಾಗಾಗಿ ಯಡಿಯೂರಪ್ಪ ಅವರಿಗೆ ಸರ್ಕಾರಿ ನಿವಾಸ, ಎಸ್ಕಾರ್ಟ್, ಪೈಲಟ್ ವಾಹನ ಎಲ್ಲವೂ ಲಭ್ಯವಾಗಲಿದೆ.  ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಮತ್ತೆ ಕಾವೇರಿ ನಿವಾಸದಲ್ಲೇ ವಾಸ್ತವ್ಯ ಮುಂದುವರೆಯುವ ಸಾಧ್ಯತೆ ಇದೆ.

Latest Videos
Follow Us:
Download App:
  • android
  • ios