Asianet Suvarna News Asianet Suvarna News

Coronavirus Update: ಕೊರೋನಾ ಹೆಚ್ಚಳ, ಕಠಿಣ ಕ್ರಮದ ಎಚ್ಚರಿಕೆ ಕೊಟ್ಟ ಸಿಎಂ ಬೊಮ್ಮಾಯಿ

* ಕರ್ನಾಟಕದಲ್ಲಿ ದಿನೇ-ದಿನೇ ಕೊರೋನಾ ಹೆಚ್ಚಳ
* ಒಮಿಕ್ರಾನ್ ವೈರಸ್ ನಡುವೆಯೇ ದೇಶದಲ್ಲಿ ಕೊರೋನಾ ಸೋಂಕು ಮತ್ತೆ ಏರಿಕೆ
* ಕಠಿಣ ಕ್ರಮದ ಎಚ್ಚರಿಕೆ ಕೊಟ್ಟ ಮುಖ್ಯಮಂತ್ರಿ ಬೊಮ್ಮಾಯಿ

Basavaraj Bommai Reacts On Coronavirus and Omicron increasing In Karnataka rbj
Author
Bengaluru, First Published Jan 3, 2022, 5:06 PM IST

ಬೆಂಗಳೂರು, (ಜ.03): : ರೂಪಾಂತರಿ ಒಮಿಕ್ರಾನ್ (Omicron) ವೈರಸ್ ನಡುವೆಯೇ ದೇಶದಲ್ಲಿ ಕೊರೋನಾ ಸೋಂಕು (Coroanvrus) ಮತ್ತೆ ಹೆಚ್ಚಳವಾಗಿದ್ದು, ಮತ್ತೆ ಆತಂಕ ಶುರುವಾಗಿದೆ. ಈಗಾಗಲೇ ನೈಟ್ ಕರ್ಫ್ಯೂ ಇದ್ದು, ಮತ್ತೆ ಲಾಕ್‌ಡೌನ್ (Lockdown) ಮಾತುಗಳು ಹರಿದಾಡುತ್ತಿವೆ.

ಇನ್ನು ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಪ್ರತಿಕ್ರಿಯಿಸಿದ್ದು, ಈ ಹಿಂದೆ ಕೋವಿಡ್ ಮೊದಲ ಮತ್ತು ಎರಡನೇ ಅಲೆ ಬಂದು ಲಾಕ್ ಡೌನ್ ಮಾಡಿ ಆದ ಅನುಭವಗಳು, ಆರೋಗ್ಯ ವ್ಯವಸ್ಥೆ, ಕೋವಿಡ್ ಮುನ್ನೆಚ್ಚರಿಕೆ ಯಾವ ರೀತಿ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಮತ್ತು ಜನತೆಗೆ ಸಹ ಗೊತ್ತಾಗಿದೆ. ಈ ಸಂದರ್ಭದಲ್ಲಿ ಜನರು ಸ್ವ ನಿರ್ಬಂಧ ಹಾಕಿಕೊಳ್ಳಲೇಬೇಕು. ಸ್ವಯಂ ನಿಯಂತ್ರಣ ಮಾಡಿಕೊಂಡು ಆರೋಗ್ಯ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಕಷ್ಟವಾಗುತ್ತದೆ ಎಂದು ಪರೋಕ್ಷವಾಗಿ ಕಠಿಣ ನಿಯಮ ಜಾರಿಗೆ ತರುವ ಸುಳಿವು ನೀಡಿದರು.

ಮೊದಲೆರಡು ಅಲೆಗಿಂತ ಕೋವಿಡ್‌ ಈಗ ಹೈಸ್ಪೀಡ್‌: ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ವೈರಸ್‌..!

ರಾಜ್ಯದಲ್ಲಿ ಏರಿಕೆಯಾಗುತ್ತಿರುವ COVID19 ಮತ್ತು Omicron ಸೋಂಕಿನ ಬಗ್ಗೆ ತೀವ್ರ ನಿಗಾ ಇಡಲಾಗಿದೆ. ಒಮಿಕ್ರಾನ್ ಅತಿ ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ನಾಳೆ(ಡಿ.04) ಸಂಜೆ ತಜ್ಞರೊಂದಿಗೆ ನಭೆ ನಡೆಸಿ ಕೋವಿಡ್ ಮತ್ತು ಒಮಿಕ್ರಾನ್ ತಡೆಯುವ ಕುರಿತು ಚರ್ಚಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಅಕ್ಕಪಕ್ಕ ರಾಜ್ಯಗಳಲ್ಲಿ ಹಾಗೂ ಕರ್ನಾಟಕಲ್ಲಿ ಕಳೆದೊಂದು ವಾರದಲ್ಲಿ ಕೋವಿಡ್-19(Covid-19) ಹಾಗೂ ಓಮಿಕ್ರಾನ್ (Omicron) ಸೋಂಕು ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಯಾವ ರೀತಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ತಜ್ಞರ ಜೊತೆ ಚರ್ಚೆಯ ಅವಶ್ಯಕತೆಯಿದೆ ಎಂದರು.

ಸಂಪುಟ ಸಭೆಯಲ್ಲಿ ನಿರ್ಣಯ
 ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಹಲವು ಕ್ರಮಗಳ ಅಗತ್ಯವನ್ನು ಮನಗಂಡು ತಜ್ಞರ ಜೊತೆ ಮಾತುಕತೆ, ಚರ್ಚೆ ನಡೆಸುತ್ತೇವೆ. ಅವರು ನೀಡಿದ ಸಲಹೆಗಳ ಆಧಾರದ ಮೇಲೆ ಗುರುವಾರ ಸಂಪುಟ ಸಹೋದ್ಯೋಗಿಗಳ ಜೊತೆ ಸಚಿವ ಸಂಪುಟ ನಡೆಸಿ ಚರ್ಚಿಸುತ್ತೇನೆ. ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಒಟ್ಟಾರೆ ಸ್ಥಿತಿಗತಿ, ತೆಗೆದುಕೊಳ್ಳಬೇಕಾದ ದೀರ್ಘಾವಧಿ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇಂದು ರಾಜ್ಯಾದ್ಯಂತ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೋನಾ ಲಸಿಕೆ ನೀಡುವ ಅಭಿಯಾನಕ್ಕೆ ಬೆಂಗಳೂರಿನಲ್ಲಿ ಚಾಲನೆ ನೀಡುತ್ತಿದ್ದೇನೆ. ಯುವಜನತೆಯನ್ನು ಕೊರೋನಾ ಸುರಕ್ಷಾ ಚಕ್ರದ ಒಳಗೆ ತರಬೇಕು ಎಂಬುದು ಸರ್ಕಾರದ ಆದ್ಯತೆಯಾಗಿದೆ. ಇದಕ್ಕೆ ಶಿಕ್ಷಕರು, ಪೋಷಕರು, ಮಕ್ಕಳು ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡರು.

ಕಠಿಣ ಕ್ರಮ ಕೈಗೊಳ್ಳುತ್ತಾರಾ ಸಿಎಂ?
 ದಿನೇ ದಿನೇ ಕೊರೋನಾ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಕೊರೋನಾ ನಿಯಂತ್ರಣಕ್ಕಾಗಿ ಈಗಾಗಲೇ ನೈಟ್ ಕರ್ಪ್ಯೂ ( Night Curfew ) ಜಾರಿಗೊಳಿಸಿದ್ದರೂ, ಅಷ್ಟೇನು ನಿಯಂತ್ರಣ ಕಂಡಿಲ್ಲ.

ಹೀಗಾಗಿ ಕೊರೋನಾ ಪಾಸಿಟಿವಿಟಿ ದರ ( Corona Positivity Rate ) ಹೆಚ್ಚಳವಿರುವಂತ ಪ್ರದೇಶಗಳಲ್ಲಿ ಲಾಕ್ ಡೌನ್ ( Karnataka Lockdown ) ನಂತರ ಕಠಿಣ ಅಸ್ತ್ರವನ್ನು ಪ್ರಯೋಗಿಸುವ ಮೂಲಕ ಕೊರೋನಾಗೆ ಕಡಿವಾಣಕ್ಕೆ ಮುಂದಾಗಿದೆ ಎನ್ನಲಾಗುತ್ತಿದೆ. ಅಲ್ಲದೇ ರಾಜ್ಯದಲ್ಲಿ ಪಾಸಿಟಿವಿಟಿ ದರ ಏರಿಕೆ ಆಧರಿಸಿ, ಕಠಿಣ ನಿಯಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ತಜ್ಞರು ಸಲಹೆ ಮಾಡಿದ್ದಾರೆ.

ಈ ಎಲ್ಲಾ ಅಂಶಗಳ ಬಗ್ಗೆ ಗುರುವಾರ ನಡೆಯುವ ಸಚಿವ ಸಂಪುಟದಲ್ಲಿ ಚರ್ಚೆಯಾಗಲಿದ್ದು, ಅಂದು ಸಂಜೆ ಏನು ಎನ್ನುವುದು ಸ್ಪಷ್ಟ ಮಾಹಿತಿ ತಿಳಿಯಲಿದೆ.

ದೇಶದಲ್ಲಿ ಹೆಚ್ಚಳ
ರೂಪಾಂತರಿ ವೈರಸ್ ನಡುವೆಯೇ ದೇಶದಲ್ಲಿ ಕೊರೋನಾ ಸೋಂಕು ಮತ್ತೆ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 33,750 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಅಲ್ಲದೇ 123 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 481893 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 145582 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 10846 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34295407 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Follow Us:
Download App:
  • android
  • ios